ಕರಾವಳಿ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ, ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಆರ್ಭಟ ಮುಂದುವರಿಸಿರುವ ಮಳೆ ಮುಂದಿನ 5 ದಿನಗಳ ಕಾಲ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.23ರಂದು ಅತಿ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜು.24ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡದಲ್ಲಿ ಮುಂದಿನ 24 ಗಂಟೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಯಾದಗಿರಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕಳೆದ ಎಂಟ್ಹತ್ತು ದಿನಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆ ಸುರಿಯುತ್ತಿರುವ ಕಾರಣ ಕೃಷ್ಣಾ, ಭೀಮಾ ಮೊದಲಾದ ನದಿಗಳಲ್ಲಿ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಕರ್ನಾಟಕದ ಅಣೆಕಟ್ಟುಗಳಿಗೆ ಅಪಾರ ಪ್ರಮಾಣ ನೀರು ಹರಿದು ಬರುತ್ತಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement