ಧರ್ಮಸ್ಥಳ ಪ್ರಕರಣ ; ಪೊಲೀಸ್‌ ರಕ್ಷಣೆ ಕೋರಿದ ಚಿನ್ನಯ್ಯ

ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ, ತನಗೆ ಜೀವ ಬೆದರಿಕೆ ಹಾಕಬಹುದು, ಆದ್ದರಿಂದ ತನಗೆ ಹಾಗೂ ತನ್ನ ಪತ್ನಿಗೆ ರಕ್ಷಣೆ ನೀಡಬೇಕಾಗಿ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟೆನ್ನವರ್, ಟಿ ಜಯಂತ, ವಿಠಲ ಗೌಡ ಮತ್ತು ಯೂಟ್ಯೂಬರ್ ಸಮೀರ್ ಎಂಡಿ ಈ ಐವರು ಹೋರಾಟಗಾರರು ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಹಾಕಬಹುದು ಎಂದು ದೂರಿನಲ್ಲಿ ಉಲ್ಲೇಖಿಸಿರುವ ಚಿನ್ನಯ್ಯ, ತಮ್ಮ ಕುಟುಂಬಕ್ಕೆ ಸಮರ್ಪಕ ರಕ್ಷಣೆ ಒದಗಿಸುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾನೆ.

ಸುಮಾರು ನಾಲ್ಕು ತಿಂಗಳಿನಿಂದ ಶಿವಮೊಗ್ಗ ಜೈಲಿನಲ್ಲಿ ಬಂಧನದಲ್ಲಿದ್ದ ಚಿನ್ನಯ್ಯನಿಗೆ ನವೆಂಬರ್ 24ರಂದು ನ್ಯಾಯಾಲಯದಿಂದ ಜಾಮೀನು ಮಂಜೂರಾಗಿತ್ತು. ನ್ಯಾಯಾಲಯವು ₹1 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಸೇರಿದಂತೆ 12 ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತ್ತು. ಆದರೆ ಜಾಮೀನು ದೊರೆತರೂ ಸಹ, ಚಿನ್ನಯ್ಯನ ಪರವಾಗಿ ಶ್ಯೂರಿಟಿ ನೀಡಲು ಯಾರೂ ಮುಂದೆ ಬರದ ಕಾರಣ, ಆತ ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಾಗಿರಲಿಲ್ಲ. ಅಗತ್ಯ ಶ್ಯೂರಿಟಿ ಪೂರೈಸಿ ಎರು ದಿನಗಳ ಹಿಂದೆ ಜೈಲಿನಿಂದ ಹೊರಬಂದಿರುವ ಚಿನ್ನಯ್ಯ, ಬಿಡುಗಡೆ ನಂತರ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ದೂರು ದಾಖಲಿಸಿದ್ದಾನೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement