ಧಾರವಾಡ : ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಬೆಂಗಳೂರಿನ ಸಿಗ್ಮಾ ಎ.ವಿ.ಐ.ಟಿ ಕಂಪನಿಯವರು ಐ.ಟಿ.ಐ ಇಲೆಕ್ಟ್ರೀಶಿಯನ್ ಅಥವಾ ಡಿಪ್ಲೋಮಾ ಇಲೆಕ್ಟ್ರೀಕಲ್ಸ್, ಇಲೆಕ್ಷ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಕೋರ್ಸ್‌ನಲ್ಲಿ ಉತ್ತೀರ್ಣರಾದ ಹಾಗೂ ಕೊನೆಯ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜೂನ್ ೨೮ರಂದು ಬೆಳಿಗ್ಗೆ ೯:೩೦ಕ್ಕೆ ಕ್ಯಾಂಪಸ್ ಸಂದರ್ಶನ ನಡೆಯದೆ. ಜ್ಯೂನಿಯರ್ ಪ್ರೋಜೆಕ್ಟ ಇಂಜನಿಯರ್ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದ್ದು, ಆಸಕ್ತರು ತಮ್ಮ ಬಯೋಡೆಟಾ, ಪಾಸಪೋರ್ಟ್ ಅಳತೆಯ ಭಾವಚಿತ್ರ, ಅಂಕಪಟ್ಟಿಯ ನಕಲು ಪ್ರತಿಗಳೊಂದಿಗೆ ಹಾಜರಾಗಬೇಕು. ತಮ್ಮ ಹೆಸರುಗಳನ್ನು ೦೮೩೬-೨೪೬೨೨೦೨ ಗೆ ಕರೆ ಮಾಡಿ ನೋಂದಾಯಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ