ಬೆಂಗಳೂರು : ನಟ ದರ್ಶನ್ ತೂಗುದೀಪ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಹೀಗಿರುವಾಗ ದರ್ಶನ್ ಅಭಿಮಾನಿಯೊಬ್ಬರು ಪುಟ್ಟ ಕಂದಮ್ಮನಿಗೆ ದರ್ಶನ್ ಖೈದಿ ನಂಬರ್ ಇರುವ ಬಟ್ಟೆ ಹಾಗೂ ಕೋಳ ಜೊತೆಗಿಟ್ಟು ಫೋಟೋ ಶೂಟ್ ಮಾಡಿಸಿ ಹುಚ್ಚಾಟ ಮೆರೆದಿದ್ದಾರೆ. ಸದ್ಯ ಈ ಹುಚ್ಚಾಟಕ್ಕೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹುಚ್ಚಾಟ ಮೆರೆದ ದರ್ಶನ್ ಅಭಿಮಾನಿಯೊಬ್ಬರಿಗೆ ಸದ್ಯ ಸಂಕಷ್ಟ ಎದುರಾಗಿದೆ. ಮಗುವಿಗೆ ಖೈದಿ ನಂಬರ್ ಡ್ರೆಸ್ ಹಾಕಿಸಿ ಫೋಟೋ ಶೂಟ್ ಮಾಡಿಸಿ ಅತಿರೇಖದ ವರ್ತನೆ ತೋರಿದ ಪೋಷಕರಿಗೆ ಸಂಕಷ್ಟ ಎದುರಾಗಿದೆ. ಈ ಹುಚ್ಚಾಟದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸ್ ಇಲಾಖೆ ಮತ್ತು ಮಕ್ಕಳ ರಕ್ಷಣಾ ಆಯೋಗ ಬಿಸಿ ಮುಟ್ಟಿಸಲು ಮುಂದಾಗಿದೆ.
ಒಂದು ವರ್ಷದ ಮಗುವಿಗೆ ದರ್ಶನ್ ಖೈದಿ ನಂಬರ್ 6106 ಇರುವ ಬಿಳಿ ಬಟ್ಟೆ ಹಾಕಿಸಿ, ಕೈ ಕೋಳ ಮಾದರಿ ಪಕ್ಕದಲ್ಲಿ ಇಟ್ಟು ಫೋಟೋಶೂಟ್ ಮಾಡಿಸಿದ್ದಾರೆ. ದರ್ಶನ್ ಮೇಲಿನ ಅಭಿಮಾನದಿಂದಾಗಿ ಅವರು ಮಗುವಿಗೆ ಜೈಲು ಬಟ್ಟೆ ಹಾಕಿಸಿ ಜೈ ಡಿ ಬಾಸ್ ಎಂದು ಬರೆದು ಫೋಟೋಶೂಟ್ ಮಾಡಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದಿರುವ ಮಕ್ಕಳ ಆಯೋಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು, ಮಗುವಿಗೆ ಖೈದಿ ನಂಬರ್ ಹಾಕಿಸಿ ಫೋಟೋ ಶೂಟ್ ಮಾಡಿದ್ದ ಪೋಷಕರಿಗೆ ನೊಟೀಸ್ ನೀಡಲು ಮುಂದಾಗಿದೆ. ಅಲ್ಲದೆ, ಆರೋಪಿಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಬುಧವಾರ ನಿರ್ದೇಶನ ನೀಡಿದೆ. ಫೋಟೋಗಳನ್ನು ಹಂಚಿಕೊಂಡಿರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಅದು ಹೇಳಿದೆ.
ಏತನ್ಮಧ್ಯೆ, ದರ್ಶನ್ ಅವರ ಖೈದಿ ಸಂಖ್ಯೆ ‘6106’ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನಟನ ಅಭಿಮಾನಿಗಳು ಅದನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ ಮತ್ತು ವಾಹನಗಳು ‘6106’ ಅನ್ನು ಬಳಸುತ್ತಿದ್ದಾರೆ. ‘ಖೈದಿ ನಂ 6106’ ನಂತಹ ಶೀರ್ಷಿಕೆಗಳ ನೋಂದಣಿಗಾಗಿ ಫಿಲ್ಮ್ ಚೇಂಬರ್ ಅನ್ನು ಸಂಪರ್ಕಿಸಲಾಗಿದೆ. ಈ ಬೆಳವಣಿಗೆಗಳ ಬಗ್ಗೆ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ದರ್ಶನ್, ಪವಿತ್ರಾ ಗೌಡ ಸೇರಿ 15 ಮಂದಿಯನ್ನು ಬಂಧಿಸಲಾಗಿದೆ.
ದರ್ಶನ್ ಅವರ ಕಟ್ಟಾ ಅಭಿಮಾನಿ ರೇಣುಕಾಸ್ವಾಮಿ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಸಂತ್ರಸ್ತೆಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಶೆಡ್ನಲ್ಲಿಟ್ಟು ಚಿತ್ರಹಿಂಸೆ ನೀಡಿ ಸಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ