ಐಸಿಸ್‌ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ: ಯತ್ನಾಳ ಆರೋಪ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ (ISIS Terrorist) ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿದ್ದಾರೆ ಎಂದು ಆರೋಪಿಸಿ ಅದರ ಚಿತ್ರಗಳನ್ನು ಅಪ್ಲೋಡ್‌ ಮಾಡಿದ್ದಾರೆ.

ಈತ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.

ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement