13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆ ಶಿವಕುಮಾರ ; ಯಾರಿಗೆ ಯಾವ ಖಾತೆ ?

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ ಅವರು, ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೇರಿದಂತೆ ಒಟ್ಟು 13 ಸಚಿವರಿಗೆ ಗುರುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಕೆಲವು ಸಚಿವರಿಗೆ  ಸಿದ್ದರಾಮಯ್ಯ ಸರ್ಕಾರದಲ್ಲಿ ಅವರಿಗಿದ್ದ ಖಾತೆಗಳನ್ನೇ ನೀಡಲಾಗಿದೆ. ಆದರೆ ಕೆಲವರಿಗೆ ಬೇರೆ ಖಾತೆಗಳನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಚಿವರಿಗೆ ಹಂಚಿಕೆಯಾದ ಖಾತೆಗಳ ವಿವರ
ಡಿ.ಕೆ. ಶಿವಕುಮಾರ (ಸಿಎಂ) – ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (DPAR)
ಡಾ. ಜಿ. ಪರಮೇಶ್ವರ (ಡಿಸಿಎಂ) – ಕಂದಾಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಕೆ.ಎಚ್. ಮುನಿಯಪ್ಪ – ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು
ಎಂ.ಬಿ. ಪಾಟೀಲ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ
ಕೆ.ಜೆ. ಜಾರ್ಜ್ – ಇಂಧನ ಮತ್ತು ಪ್ರವಾಸೋದ್ಯಮ
ರಾಮಲಿಂಗಾ ರೆಡ್ಡಿ – ಜಲಸಂಪನ್ಮೂಲ ಇಲಾಖೆ
ಸತೀಶ ಜಾರಕಿಹೊಳಿ – ಲೋಕೋಪಯೋಗಿ ಇಲಾಖೆ (PWD)
ಕೃಷ್ಣ ಬೈರೇಗೌಡ -ಬೆಂಗಳೂರು ನಗರಾಭಿವೃದ್ಧಿ
ಪ್ರಿಯಾಂಕ್ ಖರ್ಗೆ – ಗೃಹ ಇಲಾಖೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (IT-BT)
ಯು.ಟಿ. ಖಾದರ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಈಶ್ವರ ಖಂಡ್ರೆ – ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ
ಡಾ. ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ
ಬೈರತಿ ಸುರೇಶ – ಸಾರಿಗೆ ಇಲಾಖೆ
ಡಾ. ಶರಣಪ್ರಕಾಶ ಪಾಟೀಲ – ವೈದ್ಯಕೀಯ ಶಿಕ್ಷಣ
ಈ ಮಧ್ಯೆಯು.ಟಿ. ಖಾದರ್‌ ಅವರಿಂದ ತೆರವಾಗಿರುವ ಸ್ಪೀಕರ್‌ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಮುಂದಿನ ಸಭಾಧ್ಯಕ್ಷರ ಆಯ್ಕೆ ವರೆಗೆ ರುದ್ರಪ್ಪ ಲಮಾಣಿ ಹಂಗಾಮಿ ವಿಧಾನಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement