ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 12 ಕೊರೊನಾ ರೋಗಿಗಳು ಸೇರಿ 24 ಸಾವು..!

ಚಾಮರಾಜನಗರ : ಜಿಲ್ಲಾಸ್ಪತ್ರೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಆಕ್ಸಿಜನ್ ಸಿಗದೇ ಇರುವುದು ಹಾಗೂ ಇತರೆ ಕಾರಣಗಳಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಯಲ್ಲೇ 24 ರೋಗಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇದರಲ್ಲಿ ಆಮಲಜನಕ ಸಿಗದೆ 12 ಜನರು ಮೃತಪಟ್ಟಿದ್ದಾರೆ ಹಾಗೂ ಇತರ ಕಾರಣಗಳಿಂದ 12 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ 10ರ ಸುಮಾರಿಗೆ ಆಮ್ಲಜನಕದ ಸರಬರಾಜು ಮುಗಿದಿರುವುದು ಈ ದುರಂತಕ್ಕೆ ಕಾರಣವಾಗಿದೆ. ಆಮ್ಲಜನಕ ಕೊರತೆಯಿಂದ 12 ಮಂದಿ ರೋಗಿಗಳು ಮೃತಪಟ್ಟಿದ್ದಾರೆ.
ಮೈಸೂರಿನಿಂದ 2 ದಿನಗಳ ಹಿಂದಿನವರೆಗೂ ಆಮ್ಲಜನಕ ಪೂರೈಕೆ ಆಗುತ್ತಿತ್ತು. ಆದರೆ,ಮೈಸೂರು ಜಿಲ್ಲೆ ಹೊರತು ಪಡಿಸಿ ನೆರೆಯ ಜಿಲ್ಲೆಗೆ ಆಮ್ಲಜನಕ ಪೂರೈಕೆ ಮಾಡಬಾರದು ಎಂದು ಗ್ಯಾಸ್ ಏಜೆನ್ಸಿಗೆ ಆದೇಶಿಸಿರುವ ಕಾರಣ, ಜಿಲ್ಲೆಗೆ ಆಮ್ಲಜನಕ ಸಿಲಿಂಡರ್ ಗಳನ್ನುನೀಡಿಲ್ಲ. ಹೀಗಾಗಿ ರವಿವಾರ ಚಾಮರಾಜ ನಗರ ಜಿಲ್ಲಾಸ್ಪತ್ರೆಗೆ ಅಗತ್ಯ ಪ್ರಮಾಣದ ಸಿಲಿಂಡರ್ ಗಳು ಪೂರೈಕೆಯಾಗಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಸುರೇಶ್ ಕುಮಾರ್ ಮಾತನಾಡಿ, ನಿನ್ನೆ ರಾತ್ರಿ 9 ಗಂಟೆಯಿಂದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕದ ಸಮಸ್ಯೆ ಆಗಿದೆ. ವೈದ್ಯರನ್ನು ಕೇಳಿದರೆ ಅಸಾಹಯಕರಾಗಿ ಉತ್ತರಿಸುತ್ತಾರೆ. ಈ ವೇಳೆ ರೋಗಿಗಳನ್ನು ಉಳಿಸಿಕೊಳ್ಳಲು ಕುಟುಂಬಸ್ಥರು ಪರದಾಡಿದ್ದಾರೆ. ನಿನ್ನೆ ಮಧ್ಯರಾತ್ರಿಯಿಂದ ಆಕ್ಸಿಜನ್ ಸಮಸ್ಯೆ ಆಗಿದೆ ಎಂದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ಸಾವಿನ ಬಗ್ಗೆ ಗಮನಕ್ಕೆ ತಂದಿದ್ದೇನೆ. ಜಿಲ್ಲಾಧಿಕಾರಿಗಳಿಗೆ ಘಟನೆ ಸಂಬಂಧ ರಿಪೋರ್ಟ್ ಕೇಳಿದ್ದೇನೆ. ಈ ಘಟನೆ ಯಾವುದೇ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿಗಳಿಂದ ಸಂಭವಿಸಿದ್ದೇ ಆದಲ್ಲಿ, ಅಂತಹ ಅಧಿಕಾರಿಗಳ ತಲೆದಂಡ ಖಂಡಿತ ಎಂದರು.

ಪ್ರಮುಖ ಸುದ್ದಿ :-   ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement