ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ ನೇಮಕಾತಿ: ಗ್ರೂಪ್​ ಬಿ ಮತ್ತು ಸಿ ಗ್ರೇಡ್‌ 20,000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ (Staff Selection Commission) ಗ್ರೂಪ್​ ಬಿ ಮತ್ತು ಸಿ ಗ್ರೇಡ್‌ 20,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಜಿಎಲ್ ಈ ಬಗ್ಗೆ​ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು ಸೇರಿದಂತೆ ಈ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ. ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನವನ್ನು ಅಕ್ಟೋಬರ್​ 13ರವರೆಗೆ ವಿಸ್ತರಣೆ ಮಾಡಲಾಗಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಎಕ್ಸಾಮಿನೇಷನ್
ಹುದ್ದೆ-ಗ್ರೂಪ್​ ಬಿ ಮತ್ತು ಸಿ
ಹುದ್ದೆಗಳ ಸಂಖ್ಯೆ -20,000
ಉದ್ಯೋಗ ಸ್ಥಳ ಅಖಿಲ ಭಾರತ
ಮಾಸಿಕ ವೇತನ 44,900-1,42,400 ರೂ.

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ: ಅಧಿಕೃತ ಅಧಿಸೂಚನೆ ಅನುಸಾರ ಅಭ್ಯರ್ಥಿಯು ಕನಿಷ್ಟ 18ರಿಂದ ಗರಿಷ್ಟ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಆದರೆ ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ಮಹಿಳೆಯರು, ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಹಾಗೂ ಇತರ ಅಭ್ಯರ್ಥಿಗಳಿಗೆ 100 ರೂ.ಗಳ ಶುಲ್ಕವಿದೆ.
ಪಾವತಿ: ಆನ್‌ಲೈನ್ ಅಥವಾ ಚಲನ್
ಆಯ್ಕೆ ಪ್ರಕ್ರಿಯೆ: ಶ್ರೇಣಿ-I, II ಮತ್ತು ಶ್ರೇಣಿ-III ಪರೀಕ್ಷೆಗಳು, ಕೌಶಲ್ಯ ಪರೀಕ್ಷೆ, ಯೋಗ್ಯತೆ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 ಅಕ್ಟೋಬರ್​ 2022
ಆನ್‌ಲೈನ್ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 14 ಅಕ್ಟೋಬರ್ 2022
ಚಲನ್ ಮೂಲಕ ಪಾವತಿಗೆ ಕೊನೆಯ ದಿನಾಂಕ: 15 ಅಕ್ಟೋಬರ್​​ 2022
ಪ್ರಮುಖ ಲಿಂಕ್‌ಗಳು
ಮಾಹಿತಿಗೆ ಅಧಿಕೃತ ಅಧಿಸೂಚನೆ ಪಿಡಿಎಫ್ ನೋಡಲು ಇಲ್ಲಿ ಕ್ಲಿಕ್​ ಮಾಡಬಹುದು-Important_Notice_CGLE-2022_08102022
ಅಧಿಕೃತ ವೆಬ್‌ಸೈಟ್: http://ssc.nic.in

ಪ್ರಮುಖ ಸುದ್ದಿ :-   ಜನಾಂಗೀಯ ಕಾಮೆಂಟ್‌ ವಿವಾದದ ಬೆನ್ನಲ್ಲೇ ಇಂಡಿಯನ್‌ ಓವರ್‌ಸೀಸ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಯಾಮ್‌ ಪಿತ್ರೋಡಾ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement