ಕರ್ನಾಟಕದಲ್ಲಿ ನಾಳೆಯಿಂದ ಧಾರ್ಮಿಕ ಕೇಂದ್ರಗಳು, ಅಮ್ಯೂಸ್‌ಮೆಂಟ್‌ ಪಾರ್ಕ್ಸ್‌ ತೆರೆಯಲು ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಪ್ರಮಾಣ ತಗ್ಗಿದ ಹಿನ್ನೆಲೆಯಲ್ಲಿ ನಿರ್ಬಂಧ ಹೇರಿದ್ದ ಹಲವು ಚಟುವಟಿಕೆಗಳಿಗೆ ಹಂತ-ಹಂತವಾಗಿ ಅನುಮತಿ ನೀಡಲಾಗುತ್ತಿದೆ.

ನಾಳೆಯಿಂದ (ಜು.25ರಿಂದ) ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಹಾಗೂ ಅಮ್ಯೂಸ್​ಮೆಂಟ್​ ಪಾರ್ಕ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.  ಕೋವಿಡ್​ ನಿಯಮಗಳ ಕಡ್ಡಾಯ ಪಾಲನೆ ಜೊತೆಗೆ ದೇವಾಲಯ, ಚರ್ಚ್​, ಮಸೀದಿಗಳಿಗೆ ಹೋಗಬಹುದು. ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ ಎಸ್​ಒಪಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ಕಡ್ಡಾಯ ಕೋವಿಡ್​ ನಿಯಮಗಳನ್ನು ಪಾಲಿಸಬೇಕು. ಆದರೆ ವಾಟರ್ ಸ್ಪೋರ್ಟ್ಸ್​ ಹಾಗೂ ನೀರಿಗೆ ಸಂಬಂಧಿಸಿದ ಅಡ್ವೆಂಚರ್​ ಚಟುವಟಿಕೆಗಳಿಗೆ ಅನುಮತಿ ನೀಡಿಲ್ಲ.

ಲಾಕ್‌ಡೌನ್ ಬಳಿಕ ಕರ್ನಾಟಕದಲ್ಲಿ ಭಕ್ತರು ದೇವಾಲಯಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಆದರೆ ಸೇವೆಗಳು, ಪ್ರಸಾದ ವಿನಿಯೋಗಕ್ಕೆ ಅವಕಾಶ ಇರಲಿಲ್ಲ.
ಕರ್ನಾಟಕ ಸರ್ಕಾರ ಶುಕ್ರವಾರ ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ, ಸೇವೆಗಳಿಗೆ ಅವಕಾಶ ನೀಡುವ ಕುರಿತು ತೀರ್ಮಾನ ಕೈಗೊಂಡಿದೆ. ಜುಲೈ 25ರಿಂದ ಪ್ರಸಾರ ವಿನಿಯೋಗ ಆರಂಭಿಸಲು ಒಪ್ಪಿಗೆ ನೀಡಲಾಗಿದೆ.
ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿ ಈ ಕುರಿತು ಮನವಿ ಮಾಡಿದ್ದರು. ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದು, ಪ್ರಸಾದ, ಸೇವೆಗಳನ್ನು ಆರಂಭಿಸಲು ಒಪ್ಪಿಗೆ ಸಿಕ್ಕಿದೆ.
ಜುಲೈ 25ರಿಂದ ರಾಜ್ಯದಾದ್ಯಂತ ದೇವಾಲಯಗಳಲ್ಲಿ ಪೂಜಾದಿ ಸೇವೆ ಮತ್ತು ಪ್ರಸಾದ ವಿತರಣೆಗೆ ಅವಕಾಶ ನೀಡಲಾಗುತ್ತದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಆದರೆ  ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು, ಸಭೆಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಕೊರೊನಾ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕ ಈ ಉತ್ಸವಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಈ ಮಧ್ಯೆಯೇ ಮೂರನೇ ಅಲೆ ಭೀತಿ ಶುರುವಾಗಿರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದಲ್ಲಿ  ಶುಕ್ರವಾರ 1705 ಕೊರೊನಾ ಹೊಸ ಸೋಂಕುಗಳು ಪತ್ತೆಯಾಗಿದ್ದವು. 2243 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 30 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ 400 ಕೇಸ್​​ಗಳು ಪತ್ತೆಯಾಗಿದ್ದು, 3 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಪಾಸಿಟಿವಿಟಿ ದರ ಶೇ.1.35ರಷ್ಟಿದ್ದರೆ, ಸಾವಿನ ಪ್ರಮಾಣ ಶೇ. 1.75 ರಷ್ಟಿತ್ತು.

ಅನ್​ಲಾಕ್​ 4.0 ದಲ್ಲಿ ಸಿನಿಮಾ ಥಿಯೇಟರ್​​ಗಳನ್ನು ಶೇ.50ರಷ್ಟು ಆಸನ ಭರ್ತಿಯೊಂದಿಗೆ ಆಗಸ್ಟ್​ 2ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ನೈಟ್​ ಕರ್ಫ್ಯೂವನ್ನು ರಾತ್ರಿ 10ರಿಂದ ಬೆಳಗ್ಗೆ 5 ಗಂಟೆವರೆಗೆ ಕಡಿತಗೊಳಿಸಲಾಗಿದೆ. ಜೊತೆಗೆ ಪದವಿ ಕಾಲೇಜುಗಳನ್ನು ಜು.26ರಿಂದ ಪ್ರಾರಂಭಿಸಲು ಅವಕಾಶ ಅವಕಾಶ ನೀಡಲಾಗಿದೆ. ಕೊರೊನಾ ಮೊದಲ ಡೋಸ್​ ಪಡೆದ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿಗೆ  ಮಾತ್ರ ಕಾಲೇಜಿಗೆ ಬರಲು ಅನುಮತಿ ನೀಡಲಾಗಿದೆ. ಆದರೆ  ಪಬ್​ಗಳನ್ನು ತೆರೆಯಲು ಅವಕಾಶ ನೀಡಿಲ್ಲ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement