ಮತಗಳ್ಳತನ ಆರೋಪ | ಘೋಷಣಾ ಪತ್ರದೊಂದಿಗೆ ದಾಖಲೆ ಸಲ್ಲಿಸಿ; ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸೂಚನೆ

ಬೆಂಗಳೂರು : ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣೆಯಲ್ಲಿ “ಭಾರಿ ವಂಚನೆ” ನಡೆದಿದೆ ಎಂದು ಆರೋಪಿಸಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಂಕಿ-ಅಂಶವನ್ನು ಉಲ್ಲೇಖಿಸಿ ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸುತ್ತಿದೆ ಎಂದು ಆರೋಪಿಸಿದ ನಂತರ, ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)ಯು ಇದನ್ನು ಘೋಷಣಾ ಪತ್ರದ ಮೂಲಕ ವಿವರಗಳನ್ನು ನೀಡುವಂತೆ ಹೇಳಿದ್ದಾರೆ.
“ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಮತದಾರರ ಪಟ್ಟಿಯಲ್ಲಿ ಅನರ್ಹ ಮತದಾರರ ಸೇರ್ಪಡೆ ಮತ್ತು ಅರ್ಹ ಮತದಾರರನ್ನು ಹೊರಗಿಡುವ ಬಗ್ಗೆ ನೀವು ಉಲ್ಲೇಖಿಸಿದ್ದೀರಿ ಎಂದು ತಿಳಿದುಬಂದಿದೆ… ದಯವಿಟ್ಟು ಲಗತ್ತಿಸಲಾದ ಘೋಷಣೆ/ಪ್ರಮಾಣಪತ್ರಕ್ಕೆ ಸಹಿ ಮಾಡಿ ಹಿಂತಿರುಗಿಸುವಂತೆ ವಿನಂತಿಸಲಾಗಿದೆ… ಅಂತಹ ಮತದಾರರ ಹೆಸರಿನೊಂದಿಗೆ… ಅಗತ್ಯ ಕ್ರಮಗಳನ್ನು ಪ್ರಾರಂಭಿಸಬಹುದು” ಎಂದು ಸಿಇಒ ವಿ ಅನ್ಬುಕುಮಾರ ಅವರ ಪತ್ರದಲ್ಲಿ ತಿಳಿಸಲಾಗಿದೆ.

ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಕಳೆದ ವರ್ಷ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 6.5 ಲಕ್ಷ ಮತಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ “ಮತ ಕಳ್ಳತನ” ಇದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು. “ಕರ್ನಾಟಕದ ಮಹದೇವಪುರ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರು, ಅಮಾನ್ಯ ವಿಳಾಸಗಳು ಕಾಂಗ್ರೆಸ್ ಸಂಶೋಧನೆಯಲ್ಲಿ ಕಂಡುಬಂದಿದೆ” ಎಂದು ಅವರು ಹೇಳಿದರು.
ಮಹದೇವಪುರ ವಿಧಾನಸಭಾ ಕ್ಷೇತ್ರವು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ಕಳೆದ ವರ್ಷ ಬೆಂಗಳೂರು ಕೇಂದ್ರ ಲೋಕಸಭಾ ಸ್ಥಾನವನ್ನು ಬಿಜೆಪಿ 32,707 ಮತಗಳ ಅಂತರದಿಂದ ಗೆದ್ದಿತ್ತು.
ಕರ್ನಾಟಕದ ಮುಖ್ಯ ಚುನಾವನಾ ಅಧಿಕಾರಿ ಅನ್ಬುಕುಮಾರ, ತಮ್ಮ ಪತ್ರದಲ್ಲಿ “ಮತದಾರರ ಪಟ್ಟಿಯನ್ನು ಪಾರದರ್ಶಕ ರೀತಿಯಲ್ಲಿ ತಯಾರಿಸಲಾಗುತ್ತದೆ” ಮತ್ತು ಕಾಂಗ್ರೆಸ್ ಪ್ರತಿನಿಧಿಗೂ ಅದನ್ನು ನೀಡಲಾಗಿದೆ ಎಂದು ಗಮನಸೆಳೆದಿದ್ದಾರೆ.

ಪ್ರಮುಖ ಸುದ್ದಿ :-   ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

“ಚುನಾವಣೆಗಳ ನಡವಳಿಕೆಗೆ ಸಂಬಂಧಿಸಿದಂತೆ, ಚುನಾವಣಾ ಫಲಿತಾಂಶಗಳನ್ನು ಹೈಕೋರ್ಟ್‌ನಲ್ಲಿ ಚುನಾವಣಾ ಅರ್ಜಿಯ ಮೂಲಕ ಮಾತ್ರ ಪ್ರಶ್ನಿಸಬಹುದು” ಎಂದು ಪತ್ರದಲ್ಲಿ ಹೇಳಲಾಗಿದೆ.ಮಯಾವುದೇ ಸುಳ್ಳು ಘೋಷಣೆಯು ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 31 (ಸುಳ್ಳು ಘೋಷಣೆಗಳನ್ನು ಮಾಡುವುದು) ಮತ್ತು ಭಾರತೀಯ ನ್ಯಾಯ ಸಂಹಿತದ ಸೆಕ್ಷನ್ 227 (ಸುಳ್ಳು ಸಾಕ್ಷ್ಯ ನೀಡುವುದು) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.
ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಯನ್ನು ಭೇಟಿ ಮಾಡಲು ಕಾಂಗ್ರೆಸ್ ನಿಯೋಗವೊಂದು ಸಮಯ ಕೋರಿತ್ತು ಮತ್ತು ಶುಕ್ರವಾರ ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ರವರೆಗೆ ಸಮಯ ನೀಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರಾಹುಲ್ ಗಾಂಧಿ ಹೇಳಿದ್ದೇನು?
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ 13 ಲಕ್ಷ ಮತಗಳು ಚಲಾವಣೆಯಾಗಿವೆ ಎಂದು ರಾಹುಲ್ ಗಾಂಧಿ ತಮ್ಮ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಬಿಜೆಪಿಯ ಪಿ.ಸಿ. ಮೋಹನ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರನ್ನು 32,707 ಮತಗಳಿಂದ ಸೋಲಿಸಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 1 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದೆ ಎಂದು ‘ಕಾಂಗ್ರೆಸ್ ತನಿಖೆ’ ಬಹಿರಂಗಪಡಿಸಿದೆ. ಇದನ್ನು “ದೊಡ್ಡ ಅಸಮತೋಲನ” ಎಂದು ಬಣ್ಣಿಸಿದ ರಾಹುಲ್‌ ಗಾಂಧಿ, ಮಹಾದೇವಪುರದಲ್ಲಿ ನಕಲಿ ಮತದಾರರು ಮತ್ತು ಹೊಸ ನೋಂದಣಿಗಾಗಿ ಫಾರ್ಮ್ 6 ಅನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ 1,00,250 ಮತಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement