ಜೂನ್‌ 30ರೊಳಗೆ ರಾಜ್ಯದಲ್ಲಿ 1000 ಎಲೆಕ್ಟ್ರಿಕಲ್ ವಾಹನಗಳ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ

ಮೈಸೂರು: ರಾಜ್ಯಾದಾದ್ಯಂತ ಜೂನ್ 30ರೊಳಗೆ ಸಾವಿರ ಎಲೆಕ್ಟ್ರಿಕಲ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ವಿ.ಸುನಿಲಕುಮಾರ ತಿಳಿಸಿದರು.
ಚಾಮುಂಡೇಶ್ವರಿ ವಿದ್ಯುತ್‍ಚ್ಛಕ್ತಿ ನಿಗಮಿತ ಮತ್ತು ಕರ್ನಾಟಕ ವಿದ್ಯುತ್‍ಚ್ಛಕ್ತಿ ಮಂಡಳಿಯ ಇಂಜಿನಿಯರ್‌ಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸ್ಟೇಷನ್‍ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜಿಲ್ಲಾ, ಪ್ರವಾಸಿ ಕೇಂದ್ರಗಳು, ರಾಜ್ಯ ಹೆದ್ದಾರಿ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಚಾರ್ಜಿಂಗ್ ಸ್ಟೇಷನ್‍ಗಳನ್ನು ಸ್ಥಾಪಿಸಲಾಗುವುದು. ಜೂನ್‍ನಲ್ಲಿ ರಾಜ್ಯಾದ್ಯಂತ ಚಾರ್ಜಿಂಗ್ ಸ್ಟೇಷನ್‍ಗಳ ಸ್ಥಾಪನೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ದೇಶದಲ್ಲಿ ಹಸಿರು ವಾಹನಗಳ ಸಂಖ್ಯೆ ಹೆಚ್ಚಿಸಬೇಕು. ವಿದ್ಯುತ್ ವಾಹನಗಳ ಬಳಕೆಯಿಂದ ಮಾಲಿನ್ಯವನ್ನು ಕಡಿಮೆ ಮಾಡಬಹುದು. ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯ ವಾಹನಗಳಿಂದ ಕಾರ್ಬನ್ ಹೊರಸೂಸಿ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಹೀಗಾಗಿ ಎಲೆಕಕ್ಟ್ರಿಕ್‌ ವಾಹನಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಸಾರ್ವಜನಿಕರು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಮುಂದಾಗಬೇಕು. ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕಂಪೆನಿಗಳು ಗ್ರಾಹಕರ ಕೈಗೆಟಕುವ ದರದಲ್ಲಿ ವಾಹನಗಳ ಮಾರಾಟ ಮಾಡಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿಯವರು 2030ರ ವೇಳೆಗೆ ದೇಶದಲ್ಲಿ 500 ಗಿಗಾವ್ಯಾಟ್ ಹಸಿರು ವಿದ್ಯುತ್ ಉತ್ಪಾದನೆ ಮಾಡವ ಗುರಿ ಹೊಂದಿದ್ದಾರೆ. ಅದೇ ರೀತಿ ರಾಜ್ಯದಲ್ಲಿ 10 ಗಿಗಾವ್ಯಾಟ್ ಉತ್ಪಾದಿಸುವ ಗುರಿ ಹೊಂದಲಾಗಿದೆ. ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡಲಾಗುತ್ತದೆ. ಅದೇರೀತಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸ್ಟೇಷನ್ ಆರಂಭಿಸಲು ಸರ್ಕಾರದಿಂದ ಸಬ್ಸಿಡಿ ನೀಡಲಾಗುವುದು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement