ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಡಾ. ಎ. ವಿ. ಬಾಳಿಗಾ ವಾಣಿಜ್ಯ ಪದವಿ ಪೂರ್ವ ಮಹಾ ವಿದ್ಯಾಲಯದ ವಿದ್ಯಾರ್ಥಿ ಗಣೇಶ ಹೆಗಡೆ ದ್ವಿತೀಯ ಪಿಯುಸಿಯಲ್ಲಿ 600 ಕ್ಕೆ 592 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರು ಕಂಪ್ಯೂಟರ್ ವಿಷಯದಲ್ಲಿ 100ಕ್ಕೆ ನೂರು ಅಂಕ ಪಡೆದಿದ್ದಾರೆ
ವರ್ಷಿಣಿ ಹೆಗಡೆ 97.66 ಅಂಕ ಗಳಿಸಿದ್ದು ಸಂಸ್ಕೃತ ವಿಷಯದಲ್ಲಿ 100 ಅಂಕ ಪಡೆದಿದ್ದು ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸೈಯಿದ್ ಖಾನ್ 96.33 ಅಂಕದೊಂದಿಗೆ ತೃತೀಯ ಸ್ಥಾನ ಪಡೆದಿದ್ದು ಕಂಪ್ಯೂಟರ್ ವಿಷಯದಲ್ಲಿ 100 ಅಂಕ ಗಳಿಸಿದ್ದಾರೆ.
ಕಾಲೇಜಿನ ಒಟ್ಟು ಫಲಿತಾಂಶ 88.86%ಆಗಿದ್ದು 14 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿಗೆ ಕೀರ್ತಿ ತಂಡ ಇವರನ್ನು ಕೆನರಾ ಕಾಲೇಜು ಸೊಸೈಟಿ ಕಾರ್ಯದರ್ಶಿ ವೈ. ವಿ. ಶಾನಭಾಗ, ಪ್ರಾಚಾರ್ಯರಾದ ನಿರ್ಮಲಾ ಪ್ರಭು ಹಾಗೂ ಆಡಳಿತ ಮಂಡಳಿ ಸದಸ್ಯರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ