ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಕೆಂಪಣ್ಣ ಬಂಧನ

ಬೆಂಗಳೂರು: ಬಿಜೆಪಿ (BJP) ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರನ್ನು ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹಾಗೂ ಇತರ 18 ಮಂದಿ ಗುತ್ತಿಗೆದಾರರ ವಿರುದ್ಧ ಸಚಿವ ಮುನಿರತ್ನ 50 ಕೋಟಿ ಮಾನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು. ಕೋರ್ಟ್​ಗೆ ಗೈರಾಗಿದ್ದಕ್ಕೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷನ ಡಿ.ಕೆಂಪಣ್ಣ ಸೇರಿ 19 ಪ್ರತಿವಾದಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಆದರೂ ಯಾವುದೇ ಉತ್ತರ ನೀಡದ್ದರಿಂದ ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಕೆಂಪಣ್ಣ ಅವರೊಂದಿಗೆ ಇನ್ನೂ ಕೆಲವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement