ಬೆಳಗಾವಿ : ಜಿಲ್ಲೆಯ ಕಾಗವಾಡ ತಾಲೂಕು ಐನಾಪುರದಲ್ಲಿ ಸೋಮವಾರ ರಾತ್ರಿ ಗೋಮಾಂಸ ಸಾಗಿಸುತ್ತಿದ್ದ ಆರೋಪದ ಮೇರೆಗೆ ಲಾರಿಗೆ ಬೆಂಕಿ ಹಚ್ಚಿದ ಘಟನೆ ಸೋಮವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ರಾಯಬಾಗ ತಾಲೂಕು ಕುಡಚಿಯಿಂದ ಹೈದರಾಬಾದಿಗೆ ಲಾರಿಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಐನಾಪುರದಲ್ಲಿ ಸೋಮವಾರ ರಾತ್ರಿ ಲಾರಿ ತಡೆ ಹಿಡಿದು, ಲಾರಿಗೆ ಬೆಂಕಿ ಹಚ್ಚಲಾಗಿದೆ. ನಂತರ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಕಾಗವಾಡದಲ್ಲಿ ಎರಡು ಪ್ರಕರಣ ದಾಖಲಾಗಿದೆ. ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಪ್ರಾಣಿ ಹಿಂಸೆ ಕಾಯ್ದೆ ಅಡಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಸ್ ಪಿ ಭೀಮಶಂಕರ ಗುಳೇದ ತಿಳಿಸಿದ್ದಾರೆ.
ಲಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ