ಫೆಂಗಲ್ ಚಂಡಮಾರುತದಿಂದ ಭಾರಿ ಮಳೆ ; ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿತ

ಮಂಗಳೂರು : ಫೆಂಗಲ್ ಚಂಡಮಾರುತ ಪರಿಣಾಮದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೂಳೂರು ರಸ್ತೆ ಕುಸಿದಿದೆ.
ರಸ್ತೆ ಅಗೆದ ಕಾರಣದಿಂದ ಗುಂಡಿಯಲ್ಲಿ ಮಳೆ ನೀರು ಶೇಖರಣೆಯಾಗಿ ಹೆದ್ದಾರಿ ಕುಸಿದಿದೆ ಎಂದು ಹೇಳಲಾಗಿದೆ. ಬೈಕ್, ಕಾರು, ಲಾರಿಗಳು ಸಂಚರಿಸುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ರಸ್ತೆ ಕುಸಿದಿದೆ. ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಉಡುಪಿ-ಮಂಗಳೂರು ವಾಹನ ಸವಾರರು ಪರದಾಡುತ್ತಿದ್ದಾರೆ.
ಗ್ಯಾಸ್ ಕಂಪನಿಯವರು ರಸ್ತೆ ಅಗೆದಿದ್ದರಿಂದ ಇದು ಸಂಭವಿಸಿದೆ ಎಂದು ಆರೋಪಿಸಲಾಗಿದೆ.
ರಸ್ತೆ ಕುಸಿದರೂ ಪಕ್ಕದಲ್ಲೇ ಭಾರೀ ವಾಹನಗಳು ಸಂಚರಿಸುತ್ತಿವೆ. ಫೆಂಗಲ್‌ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು ಅಲ್ಲಲ್ಲಿ ಗುಡ್ಡ ಕುಸಿತ, ತಡೆಗೋಡೆ ಕುಸಿದ ಬಗ್ಗೆ ವರದಿಯಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement