ಪಿಯು ಪ್ರವೇಶ ಮಿತಿ ಹೆಚ್ಚಳ, ಹೆಚ್ಚುವರಿ ವಿಭಾಗ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ವಿದ್ಯಾರ್ಥಿಗಳ ಪ್ರವೇಶ ದಾಖಲಾತಿ ಮಿತಿಯನ್ನು 80 ರಿಂದ 100ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೇ ಹೊಸ ಭಾಷೆ, ಹೊಸ ಸಂಯೋಜನೆ ಹಾಗೂ ಹೆಚ್ಚುವರಿ ವಿಭಾಗಗಳ ಮಂಜೂರಾತಿಗೂ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಅದರಂತೆ 2022-23ನೇ ಸಾಲಿನ ರಾಜ್ಯದ ಖಾಸಗಿ ಅನುದಾನಿತ, ಶಾಶ್ವತ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗೆ ಹೆಚ್ಚುವರಿ 20 ವಿದ್ಯಾರ್ಥಿಗಳ ದಾಖಲಾತಿಗೆ ಮತ್ತು 2022-23ನೇ ಸಾಲಿನ ಹೊಸ ಭಾಷೆ, ಹೊಸ ಸಂಯೋಜನೆ ಹಾಗೂ ಹೆಚ್ಚುವರಿ ವಿಭಾಗಗಳ ಮಂಜೂರಾತಿ ಸಂಬಂಧ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕವನ್ನು 05-06-2022ರ ವರೆಗೆ ವಿಸ್ತರಣೆ ಮಾಡಲಾಗಿದೆ.
2022-23ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ವಿದ್ಯಾರ್ಥಿಗಳ ಪ್ರವೇಶ ದಾಖಲಾತಿ ಮಿತಿಯನ್ನು 80 ರಿಂದ 100ಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳು ಇರುವುದನ್ನು ಖಚಿತಪಡಿಸಿಕೊಂಡು, ಅಗತ್ಯತೆ, ಬೇಡಿಕೆ ಅನುಸಾರ ಮಂಜೂರಾತಿ ಪಡೆಯುವುದು ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement