ಬೆಂಗಳೂರು : ಅಪಾರ್ಟ್‌ಮೆಂಟಿನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ ; ಇಬ್ಬರ ಬಂಧನ

ಬೆಂಗಳೂರು : ಬೆಂಗಳೂರು ನಗರ ಸಿಸಿಬಿ (CCB)ಯ ಮಾದಕ ದ್ರವ್ಯ ನಿರೋಧಕ ದಳದ ಅಧಿಕಾರಿಗಳು ಮಂಗಳವಾರ ಅಂತಾರಾಜ್ಯ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿದ್ದು, ಮಹಿಳೆ ಸೇರಿದಂತೆ ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಬೆಂಗಳೂರಿನ ಬಾಗಲೂರು ವ್ಯಾಪ್ತಿಯ ‘ಪ್ರೆಸ್ಟೀಜ್ ಪ್ಯಾನ್ಸ್‌ಬರಿ ಹೈಟ್ಸ್’ ಅಪಾರ್ಟ್‌ಮೆಂಟ್ ನಿವಾಸಿಗಳಾದ ಅಶ್ವಿನ್ ಮತ್ತು ಮುಬೀನಾ ಎಂದು ಗುರುತಿಸಲಾಗಿದೆ. ಮುಬೀನಾ ಮೂಲತಃ ಕೇರಳದವರಾಗಿದ್ದಾರೆ ಎಂದು ಹೇಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಬಾಗಲೂರು ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು ಈ ಜಾಲವನ್ನು ಭೇದಿಸಿದ್ದಾರೆ. ಆರೋಪಿಗಳು ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಇವರು ಪ್ರಸ್ತುತ ಥೈಲ್ಯಾಂಡ್‌ನಲ್ಲಿ ನೆಲೆಸಿರುವ ಕೇರಳ ಮೂಲದ ವ್ಯಕ್ತಿಯೊಬ್ಬನಿಂದ ಡ್ರಗ್ಸ್ ಪಡೆದುಕೊಳ್ಳುತ್ತಿದ್ದರು. ಆತನ ಸೂಚನೆಯಂತೆ ಹಣಕ್ಕಾಗಿ ಗ್ರಾಹಕರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ದಾಳಿಯ ವೇಳೆ 124 ಕೆಜಿ ತೂಕದ 8,335 ಎಲ್‌ಎಸ್‌ಡಿ (LSD) ಸ್ಟ್ರಿಪ್‌ಗಳು, 5 ಕೆಜಿ ಹೈಡ್ರೋ ಗಾಂಜಾ, 534 ಗ್ರಾಂ ಚರಸ್, ಎರಡು ಮೊಬೈಲ್ ಫೋನ್‌ಗಳು ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement