ಕೋವಿಡ್ 3ನೇ ಅಲೆ ಭೀತಿ: ಕರ್ನಾಟಕದಲ್ಲಿ ಮಕ್ಕಳ ಆರೈಕೆ ಕೇಂದ್ರಗಳ ಸ್ಥಾಪನೆ, ಕಾರ್ಯಪಡೆ ರಚನೆಗೆ ಮುಂದಾದ ಸರ್ಕಾರ

ಬೆಂಗಳೂರು: ಕರ್ನಾಟಕದಲ್ಲಿ ಸಂಭನೀಯ ಕೋವಿಡ್ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸಿದ್ದು, ಇದನ್ನು ನಿಭಾಯಿಸಲು ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ನೇತೃತ್ವದಲ್ಲಿ ಕಾರ್ಯಪಡೆ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಎಲ್ಲ ಜಿಲ್ಲೆಗಳಲ್ಲಿ ಮಕ್ಕಳ ಕೋವಿಡ್ ಆರೈಕೆ ಕೇಂದ್ರಗಳನ್ನು ಸಹ ಸ್ಥಾಪಿಸಲಾಗುತ್ತಿದೆ.
ಮಾರ್ಚ್ 2020 ಮತ್ತು ಸೆಪ್ಟೆಂಬರ್ 2020ರ ನಡುವೆ ಕೊರೊನಾ ಮೊದಲ ಅಲೆ ಹೆಚ್ಚಾಗಿದ್ದಾಗ, ಕರ್ನಾಟಕದಲ್ಲಿ 10 ವರ್ಷದೊಳಗಿನ ಮಕ್ಕಳಲ್ಲಿ 19,378 ಪ್ರಕರಣಗಳು ವರದಿಯಾಗಿದ್ದವು. ಅಂದಿನಿಂದ 2021ರ ಮೇ ತಿಂಗಳ ವರೆಗೆ ಈ ವಯಸ್ಸಿನ 49,257 ಮಕ್ಕಳು ಸೋಂಕಿಗೆ ಒಳಗಾಗಿದ್ದಾರೆ. 2021ರ ಮೇ 20 ರ ವರೆಗೆ 10 ವರ್ಷದೊಳಗಿನ ಒಟ್ಟು 68,635 ಮಕ್ಕಳು ಸೋಂಕಿಗೆ ಒಳಗಾಗಿದ್ದಾರೆ.
ಈ ಪ್ರಕರಣವು 10-19 ವಯಸ್ಸಿನವರಲ್ಲಿಯೂ ಕಂಡುಬರುತ್ತಿದ್ದು, ಮಾರ್ಚ್ 2020 ರಿಂದ ಸೆಪ್ಟೆಂಬರ್ 2020 ರವರೆಗೆ, 41,895 ಮಕ್ಕಳು ಕೊರೊನಾ ವೈರಸ್‌ ಪಾಸಿಟಿವ್ ಆಗಿದ್ದರೆ, ಅಂದಿನಿಂದ ಈವರೆಗೆ 1,31,391 ಮಕ್ಕಳು ಸೋಂಕಿಗೆ ಒಳಗಾಗಿದ್ದಾರೆ,
ವೃದ್ಧರೂ ಸೇರಿದಂತೆ ಹೆಚ್ಚಿನ ಮಕ್ಕಳು ಭವಿಷ್ಯದ ಕೊರೊನಾ ಅಲೆಗಳಲ್ಲಿ ಸೋಂಕಿಗೆ ಒಳಗಾಗುತ್ತಾರೆ. ಆದರೆ ಕಿರಿಯ ವಯಸ್ಸಿನವರಲ್ಲಿ ಯಾವ ಪ್ರಮಾಣದ ತೀವ್ರವಾದ ರೋಗಲಕ್ಷಣ ಹೊಂದಿದೆ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ. ಹೆಚ್ಚಿನವರು ಲಕ್ಷಣ ರಹಿತರಾಗಿರುತ್ತಾರೆ. ಆದರೆ ಸೋಂಕಿಗೆ ಒಳಗಾಗಿರುತ್ತಾರೆ. ಜೊತೆಗೆ ಏನಾಗುತ್ತದೆ ಎಂಬುದನ್ನು ಹೇಳಿಕೊಳ್ಳಲು ಸಣ್ಣ ಮಕ್ಕಳಿಗೆ ತಿಳಿಯುವುದಿಲ್ಲ. ಹೀಗಾಗಿಸರ್ಕಾರಕ್ಕೆ ಈಗಲೇ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಹಾಗೂ ಈ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ನೇಮಿಸಿ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರೂ ಸಲಹೆ ನೀಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಮಾತನಾಡಿ, ಸೋಂಕಿತ ಮಕ್ಕಳನ್ನು ನೋಡಿಕೊಳ್ಳುವ ದಾರಿಗಳನ್ನು ಸರ್ಕಾರ ಹುಡುಕುತ್ತಿದೆ. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಮಕ್ಕಳ ಕೋವಿಡ್‌ ಆರೈಕೆ ಕೇಂದ್ರಗಳ ಆರಂಭಕ್ಕೆ ಯೋಜಿಸಲಾಗಿದೆ ಎಂದು ಹೇಳಿದ್ದಾರೆ.
ಕೊರೊನಾ ವೈರಸ್‌ಗೆ ತಂದೆ-ತಾಯಿಯನ್ನು ಕಳೆದುಕೊಂಡ ಮಗುವಿಗಾಗಿ ನಮ್ಮ ಇಲಾಖೆಯು ರಾಜ್ಯದ 30 ಜಿಲ್ಲೆಗಳಲ್ಲಿ ಮಕ್ಕಳ ಕೋವಿಡ್ ಆರೈಕೆ ಕೇಂದ್ರವನ್ನು ಸ್ಥಾಪಿಸುತ್ತಿದೆ. ಮೊರಾರ್ಜಿ ದೇಸಾಯಿ ಶಾಲೆ ಅಥವಾ ರಾಣಿ ಚೆನ್ನಮ್ಮ ಶಾಲೆಗಳು ಮತ್ತು ನಮ್ಮೊಂದಿಗೆ ಕೆಲಸ ಮಾಡುವ ಅಥವಾ ವಿಶೇಷ ಶಾಲೆಗಳನ್ನು ನಡೆಸುವ ಎನ್‌ಜಿಒಗಳ ಸಹಾಯವನ್ನು ತೆಗೆದುಕೊಳ್ಳುತ್ತಿದ್ದೇವೆ “ಎಂದು ಜೊಲ್ಲೆ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವಿಧಾನಸೌಧ ಸ್ಫೋಟದ ಎಐ ವಿಡಿಯೊ ಸೃಷ್ಟಿಸಿ ಹಂಚಿಕೊಂಡ ಆರೋಪ : ಕಿಡಿಗೇಡಿ ಬಂಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement