ಮೇಕೆದಾಟು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.
ಈ ಪ್ರಕರಣ ವಿಚಾರಣೆಯನ್ನು ಜನವರಿ ೨೫ರಂದು ನಡೆಸಲಾಗುವುದು ಎಂದು ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ಮೂವರು ಸದಸ್ಯರ ಪೀಠ ಹೇಳಿದೆ.
ತಮಿಳುನಾಡು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ಇಂದು, ಮಂಗಳವಾರ ನಡೆಯಬೇಕಿತ್ತು. ವಿಚಾರಣೆ ನಡೆಯಬೇಕಿದ್ದ ಅರ್ಜಿ, ಮುಲ್ಲೈ ಪೆರಿಯಾರ್ ಅಣೆಕಟ್ಟು ಸುರಕ್ಷತೆ ಸಂಬಂಧಿಸಿದ ಪ್ರಕರಣವೊಂದನ್ನು ಇದರ ಜೊತೆಗೆ ಸುಪ್ರೀಂಕೋರ್ಟ್ ಟ್ಯಾಗ್ ಮಾಡಿತ್ತು. ಆದರೆ ಇಂದು ವಿಚಾರಣೆ ವೇಳೆ ಕರ್ನಾಟಕ ಮತ್ತು ತಮಿಳುನಾಡು ಪರ ವಾದ ಮಂಡಿಸಿದ ವಕೀಲರು ಮುಲ್ಲೈ ಪೆರಿಯಾರ್ ಮತ್ತು ಮೇಕೆದಾಟಿಗೂ ಯಾವುದೇ ಸಂಬಂಧ ಇಲ್ಲ ಎರಡು ಅರ್ಜಿಗಳು ಪ್ರತ್ಯೇಕ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.
ವಕೀಲರ ಮನವಿಯನ್ನು ಪುರಸ್ಕರಿಸಿದ ಪೀಠ ಜನವರಿ ೨೫ ರಂದು ಮೇಕೆದಾಟು ಪ್ರಕರಣ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಸಮಗ್ರ ಯೋಜನಾ ವರದಿ(ಡಿಪಿಆರ್)ಗೆ ಕೇಂದ್ರ ತಾತ್ವಿಕ ಒಪ್ಪಿಗೆ ನೀಡಿದ ಬಳಿಕ ಯೋಜನೆ ವಿರೋಧಿಸಿ ತಮಿಳುನಾಡು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಈ ಮುಖ್ಯ ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಎನ್‌ಜಿಟಿ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ತಮಿಳುನಾಡು ಮತ್ತೊಂದು ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ಪ್ರಮುಖ ಸುದ್ದಿ :-   ಮೇಕೆದಾಟು : ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement