ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ

ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ ರೇವಣ್ಣ ಅವರನ್ನು ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ.
ಶನಿವಾರ ರಾತ್ರಿ 7:30ರ ಸುಮಾರಿಗೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರವಾಗಿ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ನಂತರ ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ತುತ್ತಾಗಿರುವ ಡಾ. ಸೂರಜ ರೇವಣ್ಣ ಅವರನ್ನು ಭಾನುವಾರ ಮುಂಜಾನೆಯವರೆಗೂ ಪೊಲೀಸರು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಠಾಣೆಗೆ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದರು. ಈ ವೇಳೆ ಸೂರಜ ರೇವಣ್ಣ ಅವರ ಮೇಲೆ ಸಂತ್ರಸ್ತ ಹಾಗೂ ಸಂತ್ರಸ್ತನ ಮೇಲೆ ಸೂರಝ ರೇವಣ್ಣ ಅವರ ಆಪ್ತ ನೀಡಿರುವ ದೂರಿನ ಬಗ್ಗೆ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಯಿತು. ಭಾನುವಾರ ಮುಂಜಾನೆ ತನಿಖಾಧಿಕಾರಿ ಸಕಲೇಶಪುರದ ಡಿವೈಎಸ್‌ಪಿ ಪ್ರಮೋದಕುಮಾರ ಅವರು ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ದೂರು  ನೀಡಿದ ಸಂತ್ರಸ್ತ ಹಾಸನದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಲು ನಿರಾಕರಿಸಿದ್ದರಿಂದ, ಪೊಲೀಸರು ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ತಡರಾತ್ರಿ ಕರೆದೊಯ್ದು, ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

ಪ್ರಕರಣ ಏನು..?
ಉದ್ಯೋಗ ಕೊಡಿಸಲು ಸಹಾಯ ಮಾಡುವುದಾಗಿ ತಮ್ಮನ್ನು ಕರೆಸಿಕೊಂಡಿದ್ದ ಸೂರಜ್ ರೇವಣ್ಣ ಅವರು ಜೂನ್ 16ರಂದು ಗನ್ನಿಕಡದ ತೋಟದ ಮನೆಯಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ನೀಡಿದ ದೂರಿನ ಆಧಾರದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಹೊಳೆನರಸೀಪುರ ಗ್ರಾಮಾಂತ ಪೊಲೀಸ್​ ಠಾಣೆಯಲ್ಲಿ ಸೆಕ್ಷನ್​​ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸೂರಜ್ ರೇವಣ್ಣ ಅವರ ಆಪ್ತ ಹನುಮನಹಳ್ಳಿಯ ಶಿವಕುಮಾರ ಎಂಬವರು ದೂರುದಾರ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಶುಕ್ರವಾರ ಪ್ರತಿದೂರು ದಾಖಲಿಸಿದ್ದಾರೆ. ದೂರುದಾರ ಜೂ.16ರಂದು ತಮ್ಮ ನಾಯಕ(ಸೂರಜ)ನ ಬಳಿ ಕೆಲಸ ಕೇಳಲು ಬಂದಿದ್ದರು. ಬಳಿಕ, ನಿಮ್ಮ ನಾಯಕರಿಂದ ಕೆಲಸ ಕೊಡಿಸಲು ಸಾಧ್ಯವಿಲ್ಲ. ನನಗೆ ತುಂಬಾ ಕಷ್ಟವಿದೆ ಎಂದು ಹೇಳಿ 5 ಕೋಟಿ ರೂ. ಗಾಗಿ ಬೇಡಿಕೆ ಇಟ್ಟಿದ್ದರು. ಹಣ ನೀಡದಿದ್ದರೆ ಶಾಸಕರ ವಿರುದ್ಧ ಅನೈಸರ್ಗಿಕ ಲೈಂಗಿಕ ದೌರ್ಜನ್ಯದ ಕೇಸು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೂರಜ ರೇವಣ್ಣ ಬಂಧನದಿಂದಾಗಿ ಶಾಸಕ ಎಚ್‌ಡಿ ರೇವಣ್ಣ ಅವರ ಮಕ್ಕಳಿಬ್ಬರೂ ಬಂಧನಕ್ಕೆ ಒಳಗಾದಂತಾಗಿದೆ.

ಪ್ರಮುಖ ಸುದ್ದಿ :-   ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement