ಪಶ್ಚಿಮ ಬಂಗಾಳದಲ್ಲಿ ಕೋವಿಡ್ ಲಸಿಕಾ ಕೇಂದ್ರದ ಬಳಿ ಕಾಲ್ತುಳಿತಕ್ಕೆ 20 ಜನರಿಗೆ ಗಾಯ..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಲ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರವೊಂದರ ಬಳಿ ಕಾಲ್ತುಳಿತದಿಂದ ಸುಮಾರು 20 ಜನರು ಗಾಯಗೊಂಡಿದ್ದಾರೆ. ಸುಮಾರು 30 ಜನ ಗಾಯಗೊಂಡಿದ್ದರೂ ಪೊಲೀಸರು 20 ಜನ ಗಾಯಗೊಂಡಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ. ಗಾಯಾಳುಗಳ ಪೈಕಿ ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಉತ್ತರ ಬಂಗಾಳದ ಜಲಪೈ ಗುರಿಯ ದುಪ್ಗುರಿ ಬ್ಲಾಕ್ ನಲ್ಲಿ ಶಾಲೆಯೊಂದನ್ನು ಲಸಿಕಾ ಕೇಂದ್ರವಾಗಿ ಪರಿವರ್ತಿಸಲಾಗಿತ್ತು. ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಟೀ ಗಾರ್ಡನ್ ಜನರಿಂದ ಒಮ್ಮೆಲ್ಲೆ ನೂಕು ನೂಗಲು ಉಂಟಾದ್ದರಿಂದ ಈ ಘಟನೆ ಸಂಭವಿಸಿದೆ. ಸುಮಾರು 2 ಸಾವಿರ ಜನರು ಲಸಿಕಾ ಕೇಂದ್ರದ ಬಳಿ ನೆರೆದಿದ್ದರು. ಅಲ್ಲಿ ಯಾವುದೇ ಪೊಲೀಸರನ್ನು ನಿಯೋಜಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಪೊಲೀಸರು ಸ್ಥಳಕ್ಕೆ ಆಗಮಿಸಿದ ನಂತರ ಪರಿಸ್ಥಿತಿ ತಹಬದಿಗೆ ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಸ್ಥಳೀಯರು ನೆರವಾಗಿದ್ದಾರೆ. ಘಟನೆಯಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ. ಆದರೆ ಅವರಲ್ಲಿ 15 ಜನರಿಗೆ ಪ್ರಾಥಮಿಕ ಉಪಚಾರದ ನಂತರ ವಾಪಸ್ ಕಳುಹಿಸಲಾಗಿದೆ. ಐವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಜಲ್ ಪೈಗುರಿ ಪೊಲೀಸ್ ಮಹಾನಿರ್ದೇಶಕ ದೆಬೊರ್ಷಿ ದತ್ತ ಹೇಳಿದ್ದಾರೆ.
ಆದಾಗ್ಯೂ, ಘಟನೆಯಲ್ಲಿ ಸುಮಾರು 30 ಮಂದಿ ಗಾಯಗೊಂಡಿದ್ದು, 8 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವುದಾಗಿ ಸ್ಥಳೀಯರು ಹೇಳುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.

ಪ್ರಮುಖ ಸುದ್ದಿ :-   ಸರಿಯಾಗಿ ಅಡುಗೆ ಮಾಡಲಿಲ್ಲ ಎಂಬ ಕಾರಣಕ್ಕೆ ಅಜ್ಜಿಗೆ ಬರ್ಬರವಾಗಿ ಥಳಿಸಿದ ಮೊಮ್ಮಗ-ಆತನ ಪತ್ನಿ : ವೀಡಿಯೊ ವೈರಲ್‌, ಇಬ್ಬರ ಬಂಧನ

ಪಶ್ಚಿಮ ಬಂಗಾಳ ಸರ್ಕಾರವು ಕೋವಿಡ್ ಲಸಿಕೆಗಾಗಿ ಕೂಪನ್‌ಗಳನ್ನು ಮನೆ ಮನೆಗೆ ತೆರಳಿ ವಿತರಿಸಲಾಗುತ್ತದೆ. ದಿನಾಂಕ ಮತ್ತು ಸಮಯ ನಿಗದಿಪಡಿಸಲಾಗುತ್ತದೆ. ಇದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ಪುನರಾವರ್ತನೆಯಾಗುವುದಿಲ್ಲ ಎಂದು ಹೇಳಿದೆ.
ಮಂಗಳವಾರ ಸಂಜೆ ತರಾತುರಿಯಲ್ಲಿ ಕರೆದ ಸಭೆಯಲ್ಲಿ, ಮುಖ್ಯ ಕಾರ್ಯದರ್ಶಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಪ್ರತಿ ಜಿಲ್ಲೆಯ ಆರೋಗ್ಯ ಮುಖ್ಯ ವೈದ್ಯಕೀಯ ಅಧಿಕಾರಿಗಳನ್ನು ಲಸಿಕೆ ಕೇಂದ್ರಗಳನ್ನು ಸಮನ್ವಯಗೊಳಿಸಲು ಮತ್ತು ನಿರ್ವಹಿಸಲು ಸೂಚಿಸಿದರು.
ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತರು ಲಸಿಕೆಗಾಗಿ ಕೂಪನ್‌ಗಳನ್ನು ಮನೆ ಮನೆಗೆ ತೆರಳಿ ವಿತರಿಸುತ್ತಾರೆ. ಪ್ರತಿ ಕೂಪನ್‌ಗೆ ಒಂದು ದಿನಾಂಕ ಮತ್ತು ಸಮಯದ ಸ್ಲಾಟ್ ಇರುತ್ತದೆ.
ಎಲ್ಲಾ ಲಸಿಕೆ ಕೇಂದ್ರಗಳಲ್ಲಿ ಜನಸಂದಣಿಯನ್ನು ಮೇಲ್ವಿಚಾರಣೆ ಮಾಡಲು ಪೊಲೀಸರನ್ನು ಕೇಳಲಾಗಿದೆ ಎಂದು ಬಂಗಾಳದ ಆರೋಗ್ಯ ಸೇವೆಗಳ ನಿರ್ದೇಶಕ ಡಾ.ಅಜೋಯ್ ಚಕ್ರವರ್ತಿ ಹೇಳಿದರು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement