ಗೋ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಗೋ ಮಾತಾ ಸಹಕಾರ ಸಂಘ ಸ್ಥಾಪನೆಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರಾಯೋಗಿಕವಾಗಿ ಗೋ ಮಾತಾ ಸಹಕಾರ ಸಂಘ ಸ್ಥಾಪಿಸುವ ನಿಟ್ಟಿನಲ್ಲಿ ರೂಪುರೇಷೆಗಳನ್ನು ಸಿದ್ದಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ನಡೆದ ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ.
ಗೋವಿನ ಅನೇಕ ಉತ್ಪನ್ನಗಳನ್ನು ಜನರು ಖರೀದಿ ಮಾಡುತ್ತಾರೆ. ರೈತರೂ ಸಹ ಹಾಲು ಅಷ್ಟೇ ಅಲ್ಲದೆ, ಅದರ ಉಪ ಉತ್ಪನ್ನಗಳ ಕಡೆಯೂ ಆಸಕ್ತಿ ವಹಿಸಬೇಕು. ಈ ಹಿನ್ನೆಲೆಯಲ್ಲಿ ಗೋ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಸಹಕಾರ ಸಂಘ ಸ್ಥಾಪಿಸಿ ಇದರ ಪ್ರಾಯೋಗಿಕ ಅಧ್ಯಯನ ನಡೆಸಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸೂಚಿಸಿದರು.

ಗೋ ತಳಿಗಳನ್ನು ಸಂರಕ್ಷಿಸಲು ಮತ್ತು ಅವುಗಳ ಸಂತತಿಯನ್ನು ಹೆಚ್ಚಿಸಲು ಕೆಎಂಎಫ್ ಮೂಲಕ 2000 ಗೋವುಗಳ ವಿವಿಧ ತಳಿಗಳನ್ನು ರೈತರಿಗೆ ಹಂಚಿಕೆ ಮಾಡಬೇಕು. ಈ ವರ್ಷ ಇದಕ್ಕಾಗಿ 4 ಕೋಟಿ ಅನುದಾನ ಒದಗಿಸುವುದು ಎಂದು ಹೇಳಿದರು.
ಗೋಶಾಲೆಗಳ ಸಂಖ್ಯೆಯನ್ನು 31 ರಿಂದ 100 ಕ್ಕೆ ಹೆಚ್ಚಿಸುವ ಸಂಬಂಧ 70 ಹೊಸ ಗೋಶಾಲೆಗಳನ್ನು ಸ್ಥಾಪಿಸಲು ನಿವೇಶನಗಳನ್ನು ನಿಗದಿ ಮಾಡುವುದು. ಪುಣ್ಯಕೋಟಿ ದತ್ತು ಯೋಜನೆಯ ಪೋರ್ಟಲ್ ಅನ್ನು ಜೂನ್ ತಿಂಗಳ ಅಂತ್ಯದಲ್ಲಿ ಪ್ರಾರಂಭಿಸಬೇಕು ಎಂಬುದರ ಬಗ್ಗೆ ಚರ್ಚಿಸಲಾಯಿತು.

ಪ್ರಮುಖ ಸುದ್ದಿ :-   ಕೆಪಿಸಿಸಿ ಸೋಶಿಯಲ್‌ ಮೀಡಿಯಾ ವಿಭಾಗದ ಅಧ್ಯಕ್ಷರಾಗಿ ಐಶ್ವರ್ಯಾ ಮಹಾದೇವ ನೇಮಕ

ಗ್ರಾಮೀಣ ಪ್ರದೇಶಗಳ ಪಶುಚಿಕಿತ್ಸಾಲಯಗಳನ್ನು ಹೊಸ ಮಾದರಿಯಲ್ಲಿ ಮಾಡಬೇಕು. 50 ಪಶುಚಿಕಿತ್ಸಾಲಯಗಳನ್ನು ಬಾಡಿಗೆ ಆಧಾರದ ಮೇಲೆ ಪ್ರಾರಂಭಿಸಲು ಅನುಮತಿ ನೀಡುವುದು. ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ ಗೋ ಉತ್ಪನ್ನಗಳ ತಾಂತ್ರಿಕತೆ ಮತ್ತು ಪ್ರಾಮಾಣೀಕರಣದ ಅಭಿವೃದ್ಧಿಗಾಗಿ ಸಂಶೋಧನಾ ಕೋಶವನ್ನು ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಹಾವೇರಿ ಜಿಲ್ಲೆಯಲ್ಲಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿಯಡಿ ಯುಹೆಚ್‌ಟಿ ಘಟಕಕ್ಕೆ ಅಗತ್ಯವಿರುವ 20 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಕುರಿಗಾಹಿಗಳಿಗೆ ವಸತಿ ಸೌಕರ್ಯದ ಜೊತೆಗೆ ಕುರಿ ದೊಡ್ಡಿ ನಿರ್ಮಿಸಲು ಐದು ಲಕ್ಷ ಸಹಾಯಧನ ನೀಡುವ ಬಗ್ಗೆ ಚರ್ಚಿಸಲಾಯಿತು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement