ಬೀದರ : ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥ

ಬೀದರ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೀದರ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ನಿಂಬೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಜೂನ್ 23ರ ಮಧ್ಯಾಹ್ನ ಮಕ್ಕಳು ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದರು. ಆದರೆ, ಸಂಜೆ 5 ಗಂಟೆಯ ವೇಳೆಗೆ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ, ಶಿಕ್ಷಕರು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಮಕ್ಕಳು ‌ಅಸ್ವಸ್ಥರಾದ ಸುದ್ದಿ ತಿಳಿದು, ಹುಮ್ನಾಬಾದ್ ಬಿಜೆಪಿ ಶಾಸಕ ಡಾ. ಸಿದ್ದು ಪಾಟೀಲ್​ ಅವರು ಆಸ್ಪತ್ರೆಗೆ ಹೋಗಿ ಮಕ್ಕಳ ಆರೋಗ್ಯ ವಿಚಾಸಿದ್ದಾರೆ. ಚಿಕಿತ್ಸೆ ನೀಡಿದ ಬಳಿಕ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಮನೆಗೆ ಕಳುಹಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement