ಚಿರತೆ ಸಿಗದೆ ಆತಂಕ, ಶೋಧ ಕಾರ್ಯಾಚರಣೆ : ಬೆಳಗಾವಿಯ 22 ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಇಲ್ಲಿನ ಜಾಧವ ನಗರದಲ್ಲಿ ಚಿರತೆ ಕಾಣಿಸಿಕೊಂಡ ಬಳಿಕ ಕಳೆದ ಮೂರು ದಿನಗಳಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಗಾಲ್ಫ್ ಮೈದಾನದ ಒಂದು ಕಿ.ಮೀ. ವ್ಯಾಪ್ತಿಯ 22 ಶಾಲೆಗಳಿಗೆ ಇಂದು, ಸೋಮವಾರ ರಜೆ ಘೋಷಿಸಲಾಗಿದೆ.
ಇವುಗಳಿಗೆ ಡಿಡಿಪಿಐ ಮೌಖಿಕ ಸೂಚನೆ ಮೇರೆಗೆ ಬೆಳಗಾವಿ ನಗರ, ಗ್ರಾಮೀಣ ಬಿಇಒ ರಜೆ ಘೋಷಿಸಿ ಆದೇಶ ಹೊರಡಿಸಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಲಾಗಿದೆ. ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ಸಹ್ಯಾದ್ರಿ ನಗರ ಕ್ಲಬ್ ರಸ್ತೆ, ಕ್ಯಾಂಪ್ ಪ್ರದೇಶದಲ್ಲಿರುವ ಶಾಲೆಗಳಿಗೆ ರಜೆ ನೀಡಲಾಗಿದೆ.

ಶೋಧ ಹಾಗೂ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರಿದಿದೆ. 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ 7 ಬೋನು ಇರಿಸಿ, ಕ್ಯಾಮೆರಾ ಅಳವಡಿಸಿ ಚಿರತೆ ಸೆರೆ ಪ್ರಯತ್ನ ನಡೆಸಿದ್ದಾರೆ. ಆದರೆ ಚಿರತೆ ಮಾತ್ರ ಪತ್ತೆಯಾಗಿಲ್ಲ.
ಮೂರು ದಿನಗಳ ಹಿಂದೆ ಆಗಸ್ಟ್ 5ರ ಮಧ್ಯಾಹ್ನ ಜಾಧವ ನಗರದಲ್ಲಿ ಚಿರತೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿತ್ತು. ಬೆಳಗಾವಿಯ ಜಾಧವ ನಗರದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಜಾಧವ್ ನಗರದ ಖನಗಾವಿ ಕೆಎಚ್ ಗ್ರಾಮದ ಕಟ್ಟಡ ಕಾರ್ಮಿಕನಾಗಿದ್ದ ಸಿದರಾಯಿ ಮಿರಜಕರ್ (38) ಎಂಬವರ ಮೇಲೆ ನಡೆಸಿತ್ತು. ದಾಳಿಯಲ್ಲಿ ಸಿದರಾಯಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಆ ಬಳಿಕ ಸಾರ್ವಜನಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement