ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ (87) ಇಂದು ವಿಧಿವಶರಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಅಭಿನಯ ಶಾರದೆ ಎಂದು ಹೆಸರು ಪಡೆದಿದ್ದ ಇವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಹಲವು ಭಾಷೆಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದ ಇವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸರೋಜಾದೇವಿ ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ … Continued

ಕೃತಿಕಾರ ಕೃತಿಯ ಒಳಹೊಕ್ಕು ತಲ್ಲೀನವಾದರೆ ಅತ್ಯುತ್ತಮ ಕೃತಿಗಳು ಹೊರಬರಲು ಸಾಧ್ಯ ; ‘ಕರ್ಮಫಲ’ ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಸುಚೇಂದ್ರಪ್ರಸಾದ

ಶಿರಸಿ : ಕೃತಿಯಲ್ಲಿ ಕೃತಿಕಾರ ತಲ್ಲೀನವಾದರೆ ಮಾತ್ರ ಅತ್ಯುತ್ತಮ, ಜೀವಂತಿಕೆ ಇರುವ ಕೃತಿಗಳು ಹೊರಬರಲು ಸಾಧ್ಯ. ಬರಹಗಾರನ ತಲ್ಲಣ, ತುಡಿತದ ಸಂವಹನದಿಂದ ಕೃತಿ ರಚನೆ ಸಾಧ್ಯವಾಗುತ್ತದೆ. ಆದರೆ ಅಂಥ ಕೃತಿಗಳು ಅಧ್ಯಯನಶೀಲವೂ ಆಗುವ ಅಗತ್ಯವಿದೆ ಎಂದು ವಾಗ್ಮಿ, ಖ್ಯಾತ ನಟ, ನಿರ್ದೇಶಕ ಸುಚೇಂದ್ರಪ್ರಸಾದ ತ್ರಿವೇದಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಂಗಧಾಮದಲ್ಲಿ ಭಾನುವಾರ ನಡೆದ … Continued

ಬೆಳಗಾವಿ : 5 ಸಾವಿರ ರೂಪಾಯಿಗಾಗಿ ಯುವ ಗಾಯಕನ ಭೀಕರ ಹತ್ಯೆ

ಬೆಳಗಾವಿ : ಕೇವಲ 5000 ರೂಪಾಯಿಗಾಗಿ ಯುವ ಗಾಯಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 22 ವರ್ಷದ ಯುವಕ ಮಾರುತಿ ಅಡಿವೆಪ್ಪ ಲಠ್ಠೆ (22) ಎಂದು ಗುರುತಿಸಲಾಗಿದೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಹಾಡುಗಳನ್ನು ರಚಿಸಿ ಹಾಡುವ ಮೂಲಕ ಇವರು … Continued

ಮಂತ್ರಾಲಯ : ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನಾಪತ್ತೆ

ರಾಯಚೂರು : ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದಾಗ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವಕರನ್ನು ಹಾಸನದ ಅರಸೀಕೆರೆ ತಾಲೂಕಿನ ಜಾಗವಲ್ ಗ್ರಾಮದ ಅಜಿತ (20), ಪ್ರಮೋದ (19) ಹಾಗೂ ಸಚಿನ್ (20) ಎಂದು ಗುರುತಿಸಲಾಗಿದೆ. ಶನಿವಾರ (ಜುಲೈ 12) ಸ್ನೇಹಿತರ ತಂಡ ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಬಂದಿತ್ತು. … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 18ರ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 18ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳಿಗೆ  ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜುಲೈ 13ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ  ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, … Continued

ಶತಮಾನದ ಸಂಭ್ರಮದಲ್ಲಿ ನಿವೃತ್ತ ಕುಲಸಚಿವ ಎಸ್. ಆರ್. ಹಿರೇಮಠ

( ೧೩-೦೭-೨೦೨೫ ರಂದು ಹುಬ್ಬಳ್ಳಿಯ  ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲಿನಲ್ಲಿ ಎಸ್‌. ಆರ್. ಹಿರೇಮಠ ಅವರ ಜನ್ಮ ಶತಮಾನೋತ್ಸವ ಜರುಗಲಿದ್ದು ಆ ನಿಮಿತ್ತ ಲೇಖನ) ಸೋಮಶೇಖರ ರಾಚಯ್ಯ ಹಿರೇಮಠ ಅವರು ಶೈಕ್ಷಣಿಕ ವಲಯದಲ್ಲಿ ಎಸ್.ಆರ್. ಹಿರೇಮಠ ಎಂದೇ ಚಿರಪರಿಚಿತರು. ಎಸ್.ಆರ್. ಹಿರೇಮಠರದು ಲಕ್ಷ್ಮೇಶ್ವರದ ಹತ್ತಿರದ ಬಟ್ಟೂರ ಗ್ರಾಮದಲ್ಲಿ ಶ್ರದ್ಧಾ ಭಕ್ತಿಯ ಹಿರೇಮಠ ಕುಟುಂಬದಲ್ಲಿ ಜನಿಸಿದವರು. … Continued

ಶಿವಮೊಗ್ಗದ ಕೇಂದ್ರ ಕಾರಾಗೃಹದ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ…!

ಶಿವಮೊಗ್ಗ : ನಗರದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ ಮೊಬೈಲ್ ಫೋನ್ ನುಂಗಿದ್ದು, ಅದನ್ನು ಜುಲೈ ೮ರಂದು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ಬಳಿಕ ಮೊಬೈಲ್ ಅನ್ನು ಜೈಲು ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ದೌಲತ್ ಅಲಿಯಾಸ್ ಗುಂಡ (30) ಎಂಬ ಕೈದಿಯ ಹೊಟ್ಟೆಯಲ್ಲಿ ಮೂರು ಇಂಚು ಉದ್ದದ ಒಂದು ಇಂಚು ಅಗಲದ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ಗೆ … Continued

ವೀಡಿಯೊ…| ಗೋಕರ್ಣ ರಾಮತೀರ್ಥ ಗುಡ್ಡದ ಮೇಲಿನ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ-ಇಬ್ಬರು ಪುಟ್ಟ ಮಕ್ಕಳ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಾಮತೀರ್ಥ ಗುಡ್ಡದ ಮೇಲಿನ ಅಪಾಯಕಾರಿ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ ಹಾಗೂ ಅವರ ಇಬ್ಬರು ಚಿಕ್ಕ ಹೆಣ್ಣು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಗೋಕರ್ಣ ಪಿಎಸ್‌ಐ ಶ್ರೀಧರ ಎಸ್‌.ಆರ್‌. ಹಾಗೂ ಸಿಬ್ಬಂದಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜುಲೈ 9ರಂದು ರಾಮತೀರ್ಥ ಗುಡ್ಡದ ಮೇಲೆ … Continued

ದಾಂಡೇಲಿ : ಮಾಡಿಕೊಂಡ ಸಾಲ ತೀರಿಸಲು 20 ದಿನದ ಮಗು ಮಾರಾಟ ಮಾಡಿದ ದಂಪತಿ‌…!

ಕಾರವಾರ : ಮಾಡಿಕೊಂಡ ಸಾಲ ತೀರಿಸಲು ದಂಪತಿ‌ ತಮ್ಮ 20 ದಿನದ ಮಗುವನ್ನು ಮಾರಾಟ ಮಾಡಿರುವ ಘಟನೆ ಉತ್ತರ ಕ‌ನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಳೇ ದಾಂಡೇಲಿಯಲ್ಲಿ ನಡೆದಿದೆ. ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬ ಮಹಿಳೆ ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. … Continued

ಕಿರುತೆರೆ ನಟಿ-ನಿರೂಪಕಿಗೆ ಚಾಕುವಿನಿಂದ ಇರಿದ ಗಂಡ…

ಬೆಂಗಳೂರು: ಕಿರುತೆರೆ ಧಾರಾವಾಹಿ ನಟಿ ಹಾಗೂ ನಿರೂಪಕಿಗೆ ಆಕೆಯ ಗಂಡನೇ ಚಾಕುವಿನಿಂದ ಇರಿದಿರುವ ಘಟನೆ ಶುಕ್ರವಾರ ವರದಿಯಾಗಿದೆ. ವರದಿಗಳ ಪ್ರಕಾರ, ಧಾರಾವಾಹಿ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಮಂಜುಳಾ ಅಲಿಯಾಸ್‌ ಶ್ರುತಿ ಎಂಬವರಿಗೆ ಚಾಕು ಇರಿಯಲಾಗಿದ್ದು,  ಆಕೆಯ ಗಂಡನೇ ಆಕೆಯ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಬಳಿಕ ಆಕೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ … Continued