ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ 3 ದಿನ ಮಳೆ ಅಬ್ಬರ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್‌ 16 ರಿಂದ 18 ರವರೆಗೆ  ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 16 ರಂದು ಕರಾವಳಿಯ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಜೂನ್‌ 17, 18ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಜೂ.16 ರಂದು ಆರೆಂಜ್‌ … Continued

ಭಾರಿ ಮಳೆ ಮುನ್ಸೂಚನೆ : ಜೂನ್ 16 ರಂದು ದ.ಕ. ಜಿಲ್ಲೆಯ 5 ತಾಲೂಕುಗಳೂ, ಉಡುಪಿ ಜಿಲ್ಲೆ ಎಲ್ಲ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು/ಉಡುಪಿ : ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳು ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಜೂನ್ 16ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ ಮತ್ತು ಮೂಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 16ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯ … Continued

ಭಾರಿ ಮಳೆಗೆ ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್

ಚಿಕ್ಕಮಗಳೂರು : ರಾಜ್ಯದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂ ಕುಸಿತಗಳು ಸಂಭವಿಸುತ್ತಿವೆ. ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರ ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಶೃಂಗೇರಿ-ಮಂಗಳೂರು ಮಾರ್ಗದ ರಸ್ತೆ ಸಂಚಾರವನ್ನು  ಬಂದ್ ಮಾಡಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನೆಮ್ಮಾರು ಗ್ರಾಮದ ಬಳಿ ಗುಡ್ಡ … Continued

ಶಿರಸಿ | ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ: ಶಿರಸಿ- ಕುಮಟಾ ರಸ್ತೆ ಸಂಪರ್ಕ ಕಡಿತ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಕುಮಟಾ ಸಂಪರ್ಕ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಇಂದು (ಭಾನುವಾರ) ನಸುಕಿನಲ್ಲಿ ಭೂಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766 (ಇ) ರ ದೇವಿಮನೆ ಘಟದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಹೆದ್ದಾರಿ ಮೇಲೆ ಕಲ್ಲು, ಮರಗಳು ಬಂದು … Continued

ಜೂನ್‌ 15ರಿಂದ ಆಗುಂಬೆ ಘಾಟ್‌ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ಭಾರಿ ಮಳೆಯಿಂದ ಭೂ ಕುಸಿತ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಮುಂಗಾರು ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟ್‌ನಲ್ಲಿ (Agumbe Ghat) ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ … Continued

ಜೂನ್‌ 17ರ ವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಜೋರಾದ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 14ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ … Continued

ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

ಬೆಂಗಳೂರು : ಧಾರಾಡದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ವಿನಯ … Continued

ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಇಂದು (ಜೂನ್ 13) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದರಲ್ಲಿಯೂ ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಶುಕ್ರವಾರ (ಜೂನ್ 13) ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ (ಜೂನ್ 13) ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ … Continued

ವ್ಯಾಪಕ ಮಳೆ | ಇಂದು ಧಾರವಾಡ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ : ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಇರುವುದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಂಜೆಯಿಂದ ವ್ಯಾಪಕವಾಗಿ ಮಳೆ ಆಗುತ್ತಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ಜೂ.12 ರಂದು ಒಂದು … Continued

ಭಾರಿ ಮಳೆ : ಇಂದು (ಜೂನ್ 12) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.