ಧಾರವಾಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನ ; ಇಬ್ಬರು ಕಳ್ಳತನದ ಆರೋಪಿಗಳಿಗೆ ಪೊಲೀಸರ ಗುಂಡೇಟು

ಧಾರವಾಡ: ನಗರದಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರ ಕಳ್ಳರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಧಾರವಾಡದ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಜಾಮಿಲ್ ಸೌದಾಗಾರ​, ವಿಜಯ ಅಣ್ಣಿಗೇರಿ​ ಎಂಬವರು ಪೊಲೀಸರಿಂದ ಗುಂಡೇಟಿನಿಂದ ಗಾಯಗೊಂಡ ಆರೋಪಿಗಳಾಗಿದ್ದಾರೆ. ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡದ ಗಿರಿನಗರದ ಬಡಾವಣೆಯಲ್ಲಿ … Continued

ಬೆಂಗಳೂರು ಕಾಲ್ತುಳಿತದ ಪ್ರಕರಣ: ಆರ್​ಸಿಬಿ, ಡಿಎನ್​ಎ ವಿರುದ್ಧ ಕ್ರಿಮಿನಲ್‌ ಪ್ರಕರಣ, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿ, ಅನೇಕರು ಗಾಯಗೊಂಡ ಘಟನೆಯ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮತ್ತು ಡಿಎನ್‌ಎ (DNA) ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್‌ ಸಂಸ್ಥೆಗಳ … Continued

ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಪರವಾನಗಿ ರದ್ದುಗೊಳಿಸಿದ ಆರ್‌ಬಿಐ

ಮುಂಬೈ: ದಿ ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ಬುಧವಾರ ತಿಳಿಸಿದೆ, ಏಕೆಂದರೆ ಬ್ಯಾಂಕಿನಲ್ಲಿ ಸಾಕಷ್ಟು ಬಂಡವಾಳ ಇಲ್ಲ ಮತ್ತು ಗಳಿಕೆಯ ನಿರೀಕ್ಷೆಗಳನ್ನು ಹೊಂದಿಲ್ಲ ಎಂದು ಆರ್‌ಬಿಐ (RBI) ತಿಳಿಸಿದೆ. ಜುಲೈ 23, 2025 ರಂದು ವ್ಯವಹಾರ ಮುಕ್ತಾಯವಾಗುವಾಗ ಜಾರಿಗೆ ಬರುವಂತೆ ಬ್ಯಾಂಕ್ ಬ್ಯಾಂಕಿಂಗ್ ವ್ಯವಹಾರವನ್ನು ಮುಂದುವರಿಸುವುದನ್ನು ಅದು ಸ್ಥಗಿತಗೊಳಿಸಲಿದೆ. … Continued

ಶಿರಸಿ | ಇಸ್ಪೀಟ್ ಜೂಜಾಟದ ಮೇಲೆ ದಾಳಿ : 19 ಮಂದಿ ಬಂಧನ ; ₹49.50 ಲಕ್ಷ ನಗದು ವಶಕ್ಕೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೈರುಂಬೆ ಗ್ರಾಮ ಪಂಚಾಯತ ವ್ಯಾಪ್ತಿಯ ಅಗಸಾಲ ಗ್ರಾಮದ ಸಮೀಪದ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್‌-ಬಾಹರ್‌ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿ 49 ಲಕ್ಷ ನಗದು, ನಾಲ್ಕು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ … Continued

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿದ್ದ ಯೂ ಟ್ಯೂಬ್‌ ವಾಹಿನಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ ಡಿ ಅವರ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ವಿಧಿಸಿದ್ದ ನಿರ್ಬಂಧ ಪ್ರಶ್ನಿಸಿ ಥರ್ಡ್ ಐ ಯೂಟ್ಯೂಬ್ ಚಾನೆಲ್ ಸಲ್ಲಿಸಿದ್ದ ಅರ್ಜಿಯನ್ನು ನೇರವಾಗಿ ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಗುರುವಾರ … Continued

ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಮರು ಸಮೀಕ್ಷೆ; ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಹೊಸದಾಗಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ನಡೆಸಲು ನಿರ್ಧರಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಬುಧವಾರ (ಜುಲೈ ೨೪) ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಮೀಕ್ಷೆ … Continued

ವಿಪರೀತ ಮಳೆ ಮುನ್ಸೂಚನೆ ; ಇಂದು (ಜುಲೈ 24) ಉಡುಪಿ ಜಿಲ್ಲೆ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮತ್ತು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಜುಲೈ 24ರಂದು ಬುಧವಾರ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯು ಕಾಲೇಜುಗಳು ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ … Continued

ವಾಯುಭಾರ ಕುಸಿತ | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 29ರ ವರೆಗೆ ವಿಪರೀತ ಮಳೆ ; ರೆಡ್‌ ಅಲರ್ಟ್‌, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 29ರ ವರೆಗೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಜುಲೈ 24ರಿಂದ ಜುಲೈ 26ವರೆಗೂ ಈ ಮೂರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ನಂತರ … Continued

ಸಣ್ಣ ವ್ಯಾಪಾರಿಗಳಿಗೆ ರಿಲೀಫ್‌ | 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಜಿಎಸ್‌ಟಿ ನೋಟಿಸ್‌ ಪಡೆದ ಸಣ್ಣ ವ್ಯಾಪಾರಿಗಳಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇದರ ಬೆನ್ನಲ್ಲೇ ಸಣ್ಣ ವ್ಯಾಪಾರಿಗಳು ಪ್ರತಿಭಟನೆ ಹಿಂಪಡೆದಿದ್ದಾರೆ. 40 ಲಕ್ಷ ರೂ. ಮೇಲ್ಪಟ್ಟು ವ್ಯವಹಾರ ನಡೆಸಿದ ಸಣ್ಣ ವರ್ತಕರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ನೋಟಿಸ್‌ ಜಾರಿ ಮಾಡಿದ್ದಕ್ಕೆ ಭಾರೀ … Continued

ಕುಮಟಾ | ಹಿಂದೂಸ್ತಾನಿ ಗಾಯನ ; ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ರಿಷಾ ನಾಯಕ ಆಯ್ಕೆ

ಕುಮಟಾ : ಚಿಕ್ಕ ಪ್ರತಿಭಾವಂತ ಮಕ್ಕಳಿಗೆ ನೀಡುವ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ (CCRT)ದ ಸಾಂಸ್ಕೃತಿಕ ಪ್ರತಿಭಾ ಶೋಧ ವಿದ್ಯಾರ್ಥಿ ವೇತನಕ್ಕೆ (Cultural Talent Search Scholarship) ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಐದನೇ ತರಗತಿಯ ವಿದ್ಯಾರ್ಥಿನಿ ರಿಷಾ ನಾಯಕ ಆಯ್ಕೆಯಾಗಿದ್ದಾಳೆ. ರಿಷಾ ನಾಯಕ ಕಳೆದ … Continued