ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: 7 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಸೋಮವಾರ ಕೆಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಪ್ರದೇಶವಾದ ಶಿವಮೊಗ್ಗ, ಚಿಕ್ಕಮಗಳೂರು, . ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಏಳು … Continued

ನನಗೆ ಸಂಪುಟದರ್ಜೆ ಸ್ಥಾನಮಾನ ಬೇಡ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಬಿಎಸ್ ವೈ

ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನ-ಮಾನ ನೀಡಿ ಆದೇಶಿಸಿದ್ದರು. ಾದರೆ ಅದನ್ನು ಪಡೆಯಲು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ದಿನಾಂಕ 07-08-2021ರಲ್ಲಿ ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ತನಗೆ ಮುಖ್ಯಮಂತ್ರಿ ಬೊಮ್ಮಾಯಿ ಅವಧಿ ಇರುವವರೆಗೆ … Continued

ಚಿನ್ನ ಗೆದ್ದ ನೀರಜಗೆ ಕ್ರೀಡಾ ಸಚಿವರಿಂದ ಅಭಿನಂದನೆ: ತರಬೇತಿ ನೀಡಿದ ಕನ್ನಡಿಗ ಕಾಶಿನಾಥ್​​ಗೆ 10 ಲಕ್ಷ ರೂ.ಘೋಷಣೆ

ಬೆಂಗಳೂರು:ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್‌ ಎಸೆತದಲ್ಲಿ ಭಾರತಕ್ಕೆ ಚಿನ್ನ ತಂದುಕೊಟ್ಟ ನೀರಜ್ ಛೋಪ್ರಾಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಾಧನೆಗೆ ತರಬೇತಿ ನೀಡಿದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ನಗದು 10 ಲಕ್ಷ ರೂ.ಗಳ ಬಹುಮಾನ ಘೋಷಿಸಿದ್ದಾರೆ. ನೀರಜ್ ಛೋಪ್ರಾ ಚಿನ್ನದ ಪದಕ ಗೆಲ್ಲುವಲ್ಲಿ ಕನ್ನಡಿಗನ ಪಾತ್ರವೂ ಇದೆ. … Continued

ಲೈಂಗಿಕ ದೌರ್ಜನ್ಯ ಆರೋಪ: ಪ್ರಾಧ್ಯಾಪಕ ದಂಪತಿಗೆ ಮೈಸೂರು ವಿವಿಯಿಂದ ನೊಟೀಸ್

ಮೈಸೂರು: ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಆಧರಿಸಿ ಮೈಸೂರು ವಿಶ್ವವಿದ್ಯಾನಿಲಯವು ಪ್ರಾಧ್ಯಾಪಕ ದಂಪತಿಗೆ ಕಾರಣ ಕೇಳಿ ಪ್ರತ್ಯೇಕ ನೋಟಿಸ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ. ಮಾನಸಗಂಗೋತ್ರಿಯ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಜಿ.ಟಿ.ರಾಮಚಂದ್ರಪ್ಪ ಹಾಗೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕಿ ಡಾ.ಎನ್.ಕೆ.ಲೋಲಾಕ್ಷಿ ಅವರಿಗೆ … Continued

ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆ

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಕಣ್ಣೂರು ಗ್ರಾಮದ ಮಕ್ಕಳ ದೇವರ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆಯಾಗಿವೆ. ಮಠದ ಜಮೀನಿನಲ್ಲಿರುವ ತೆಂಗಿನ ಸಸಿಗಳಿಗೆ ನೀರಾವರಿ ಪೈಪ್ ಅಳವಡಿಸಲು ಜೆಸಿಬಿ ಮೂಲಕ ಜಮೀನಿನಲ್ಲಿ ಗುಂಡಿ ತೆಗೆಯುತ್ತಿದ್ದಾಗ ಇವು ಸಿಕ್ಕಿವೆ. ಜೆಸಿಬಿ ಮೂಲಕ ಜಮೀನಿನಲ್ಲಿ ಗುಂಡಿ ತೆಗೆಯುತ್ತಿದ್ದಾಗ ಇದ್ದಕಿದ್ದಂತೆ ಭೂಮಿ ಕುಸಿದು, ಸುಮಾರು ಹತ್ತು ಆಡಿ ಆಳಕ್ಕೆ … Continued

ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧ

ಯಾದಗಿರಿ : ಈ ಭಾಗದ ಆರಾದ್ಯ ದೈವ ಹೊರ ರಾಜ್ಯಗಳಿಂದಲೂ ಅಪಾರ ಭಕ್ತರು ಆಗಮಿಸುವ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಇಂದಿನಿಂದ ಶ್ರಾವಣ ಮುಗಿಯುವ ವರೆಗೆ ದರ್ಶನಕ್ಕೆ ಭಕ್ತರ ಪ್ರವೇಶ ನೀಷಧಿಸಿ ಜಿಲ್ಲಾಡಳಿತ ಆದೇಶ ಮಾಡಿದೆ. ರಾಜ್ಯದಲ್ಲಿ ಮೂರನೆಯ ಕೊರೊನಾ ಅಲೆ ಭೀತಿ ಹಿನ್ನೆಲೆಯಲ್ಲಿ ಮೈಲಪುರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ೧ ಕಿಮೀ ಸುತ್ತ ಸ್ಥಳೀಯ … Continued

ಇಂದು ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ, ಫಲಿತಾಂಶ ನೋಡಲು ಹೀಗೆ ಮಾಡಿ..

ಬೆಂಗಳೂರು :ಸೋಮವಾರ (ಆಗಸ್ಟ್‌ 9) ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿವ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಆಗಸ್ಟ್‌ 9ರಂದು (ನಾಳೆ … Continued

ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ನೀರಜ್​ಗೆ ಕೆಎಸ್​ಆರ್​ಟಿಸಿಯಿಂದ ಜೀವಿತಾವಧಿ ಕೊಡುಗೆ, ಕನ್ನಡತಿ ಅದಿತಿ​ಗೂ ಗೌರವ

ಬೆಂಗಳೂರು: ಟೋಕಿಯೊ ಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ನೀರಜ್​ ಚೋಪ್ರಾಗೆ ಅವರ ಸಾಧನೆಗೆ ಕೆಎಸ್​ಆರ್​ಟಿಸಿ ಜೀವಿತಾವಧಿ ಕೊಡುಗೆ ನೀಡಿದೆ. ಪದಕ ಜಸ್ಟ್‌ ಮಿಸ್‌ ಆದ ಗಾಲ್ಫರ್‌ ಕನ್ನಡತಿ ಅದಿತಿ ಅಶೋಕ್​ಗೂ ಗೌರವ ನೀಡಿದೆ. ಕೆಎಸ್​ಆರ್​ಟಿಸಿ ಕೊಡಮಾಡುವ ಗೋಲ್ಡನ್​ ಪಾಸ್​ ಪ್ರಕಟಸಿದ್ದು, ಬಸ್ಸಿನಲ್ಲಿ ರಾಜ್ಯ ಹಾಗೂ ಅಂತಾರಾಜ್ಯಗಳಲ್ಲಿ ಜೀವಿತಾವಧಿವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಟೋಕಿಯೋ ಒಲಿಂಪಿಕ್ಸ್​ನ (Tokyo Olympics) ಜಾವೆಲಿನ್‌ … Continued

ರಾಜ್ಯ ಸರ್ಕಾರದಿಂದ ರೈತರ ಮಕ್ಕಳ ವಾರ್ಷಿಕ ವಿದ್ಯಾರ್ಥಿ ವೇತನ ಪ್ರಕಟ

ಬೆಂಗಳೂರು: ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ರಾಜ್ಯ ಸರ್ಕಾರ ವಾರ್ಷಿಕ ಶಿಷ್ಯವೇತನ ಪ್ರಕಟಿಸಿದೆ. ಕೋರ್ಸ್‍ಗಳಿಗೆ ಅನುಸಾರವಾಗಿ ಶಿಷ್ಯವೇತನದ ಹಣ ನಿಗದಿಪಡಿಸಲಾಗಿದೆ. ಪಿಯುಸಿ, ಐಟಿಐ, ಡಿಪ್ಲೋಮಾ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ 2,500, ವಿದ್ಯಾರ್ಥಿನಿಯರಿಗೆ 3,000 ರೂಪಾಯಿ ಸ್ಕಾಲರ್‍ಶಿಪ್ ಸಿಗಲಿದೆ. ಬಿಎ, ಬಿಎಸ್ಸಿ, ಬಿಕಾಂ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ 5,000, ವಿದ್ಯಾರ್ಥಿನಿಯರಿಗೆ 5,500 ರೂಪಾಯಿ ಶಿಷ್ಯವೇತನ ಸಿಗಲಿದೆ. ಎಲ್‍ಎಲ್‍ಬಿ, ಪ್ಯಾರಾ ಮೆಡಿಕಲ್, … Continued

ಅಧಿಕಾರ ಸ್ವೀಕರಿಸಿದ ದಿನವೇ ಉನ್ನತ ಶಿಕ್ಷಣ ಸಚಿವರಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಹಿ, ಈ ವರ್ಷದಿಂದಲೇ ಜಾರಿ

ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ, ಐಟ-ಬಿಟಿ, ವಿಜ್ಞಾನ-ತಂತ್ರಜ್ಞಾನ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಾ.ಸಿ.ಎನ್.‌ಅಶ್ವತ್ಥನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2021-22ನೇ ಸಾಲಿನಿಂದಲೇ ಜಾರಿ ಮಾಡುವ ಆದೇಶಕ್ಕೆ ಸಹಿ ಹಾಕಿದ್ದಾರೆ. ಈಗ ದೇಶದಲ್ಲೇ ಕರ್ನಾಟಕವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮೊದಲನೆಯದಾಗಿ ಅನುಷ್ಠಾನಗೊಳಿಸುತ್ತಿರುವ ರಾಜ್ಯವಾಗಲಿದೆ. ತಮ್ಮ ಗೃಹ ಕಚೇರಿಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ … Continued