ಮಳೆಹಾನಿ: ರಸ್ತೆಗಳ ದುರಸ್ತಿಗೆ ತುರ್ತಾಗಿ ೨೦೦ ಕೋಟಿ ರೂ. ಬಿಡುಗಡೆ ಮಾಡ್ತೇವೆ ಎಂದ ಸಿಎಂ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಒಟ್ಟೂ ೬೧೯ ಕಿ.ಮಿ. ಗ್ರಾಮೀಣ ರಸ್ತೆ ಹಾನಿಯಾಗಿದ್ದರಿಂದ ಜನರು ತೀವ್ರ ತೊಂದರೆಯಲ್ಲಿದ್ದಾರೆ. ಈ ರಸ್ತೆಗಳ ದುರಸ್ತಿಗೆ ತುರ್ತಾಗಿ ೨೦೦ ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಅಂಕೋಲಾದಲ್ಲಿ ನೆರೆ ಹಾವಳಿಯಿಂದ ಹಾನಿಗೊಂಡ ಪ್ರದೇಶನ್ನು … Continued

ಕರ್ನಾಟಕದಲ್ಲಿ ಗುರುವಾರ ಕೊರೊನಾ ದೈನಂದಿನ ಸೋಂಕು ಹೆಚ್ಚಳ..!

ಬೆಂಗಳೂರು: ಕಳೆದ ಕೆಲ ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಹೊಸ ಕೊರೋನಾ ಸೋಂಕಿನ ಸಂಖ್ಯೆ ಗುರುವಾರ ಮತ್ತೆ ಏರಿಕೆಯಾಗಿದೆ. ಗುರುವಾರ ರಾಜ್ಯದಲ್ಲಿ ಎರಡು ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಒಂದೇ ದಿನದಲ್ಲಿ ಹೊಸದಾಗಿ 2052 ಜನರಿಗೆ ಸೋಂಕು ದೃಢಪಟ್ಟಿದ್ದು, 35 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 1332 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 23,253 … Continued

ಉ.ಕ.ಜಿಲ್ಲೆ ನೆರೆ: ಭೂಕುಸಿತವಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ಅಧ್ಯಯನ ವರದಿ ಆಧಾರದ ಮೇಲೆ ಜಿಲ್ಲೆ ನೆರೆ ಹಾನಿ ಶಾಶ್ವತ ಪರಿಹಾರಕ್ಕೆ ಕ್ರಮ

ಉತ್ತರ ಕನ್ನಡ ಜಿಲ್ಲೆ ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆ ನಡೆಸಿದ ಬಸವರಾಜ ಬೊಮ್ಮಾಯಿ ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಭೂಕುಸಿತಕ್ಕೊಳಗಾದ ಕಳಚೆ‌ ಗ್ರಾಮದಲ್ಲಿ ಪರಿಹಾರ ನೀಡಿದರೂ ಮನೆ ಕಟ್ಟುವುದು ಕಷ್ಟಸಾಧ್ಯ ಕೆಲಸ. ಹೀಗಾಗಿ ಗ್ರಾಮವನ್ನೇ ಸಂಪೂರ್ಣ ಸ್ಥಳಾಂತರಿಸಿ. ನಾಳೆಯಿಂದಲೇ ಕೆಲಸ ಮಾಡಬೇಕು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಈ ಸ್ಥಳಾಂತರಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು … Continued

ಹುಬ್ಬಳ್ಳಿಯಲ್ಲಿ ಇಂದು, ನಾಳೆ ೧೦ ಜಿಲ್ಲೆಗಳ ಕಾಂಗ್ರೆಸ್ ಪದಾಧಿಕಾರಿಗಳ ಸಭೆ

ಹುಬ್ಬಳ್ಳಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೆವಾಲಾ ಅಧ್ಯಕ್ಷತೆಯಲ್ಲಿ ನಾಳೆ (ಶುಕ್ರವಾರ) ಹುಬ್ಬಳ್ಳಿಯಲ್ಲಿ ಪಕ್ಷದ ೧೦ ಜಿಲ್ಲೆಗಳ ಪದಾಧಿಕಾರಿಗಳ ಸಭೆಗಳು ನಡೆಯವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಸಂಜೆ ೬ಗಂಟೆಗೆ ವಿಜಯಪುರ ಹಾಗೂ ಹಾವೇರಿ ಜಿಲ್ಲೆಗಳ ಪಕ್ಷದ ಮುಖಂಡರೊAದಿಗೆ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ ೯ಗಂಟೆಗೆ ನಗರದ … Continued

ಪೈಶಾಚಿಕ..ಮಂಗಗಳಿಗೆ ವಿಷವುಣಿಸಿ ಪ್ಲಾಸ್ಟಿಕ್ ಬ್ಯಾಗಿನಲ್ಲಿ ಕಟ್ಟೆಸೆದ ದುಷ್ಕರ್ಮಿಗಳು: 30 ಕೋತಿಗಳು ಸಾವು, ವಿಡಿಯೋ ವೈರಲ್‌..!

ಹಾಸನ: ಮನುಷ್ಯರ ಪೈಶಾಚಿಕ ಕೃತ್ಯಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಸುಮಾರು 60ರಷ್ಟು ಮಂಗಗಳಿಗೆ ವಿಷಹಾರ ನೀಡಿ ಅವುಗಳಿಗೆ ಬಡಿದು ಅವುಗಳನ್ನು ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ರಸ್ತೆ ಬದಿ ಎಸೆದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯ ಗ್ರಾಮವೊಮದರಲ್ಲಿ ವರದಿಯಾಗಿದೆ. ಆಘಾತಕಾರಿ ಘಟನೆಯೊಂದರಲ್ಲಿ, ಕರ್ನಾಟಕದ ಹಾಸನ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುರುವಾರ ಮುಂಜಾನೆ 30 ಕೋತಿಗಳು ಮೃತಪಟ್ಟಿವೆ. ಇತರ … Continued

ತವರೂರು ಹುಬ್ಬಳ್ಳಿಯಲ್ಲಿ ಒಬ್ಬಂಟಿಯಾದ ಸಿಎಂ ಬೊಮ್ಮಾಯಿ: ಚರ್ಚೆಗೆ ಗ್ರಾಸ..!

ಹುಬ್ಬಳ್ಳಿ:ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರಿಂದ ಸ್ವಪಕ್ಷೀಯರೇ ದೂರ ಉಳಿದ ಕಾರಣ ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯಲ್ಲಿಯೇ ಏಕಾಂಗಿಯಾಗಿದ್ದಾರಾ ಎಂಬ ಅನುಮಾನ ಮೂಡುವಂತೆ ಮಾಡಿದೆ. ಮುಖ್ಯಮಂತ್ರ ಸ್ಥಾನಕ್ಕೇರಿದ ಬಳಿಕ ಇದೇ ಮೊದಲ ಬಾರಿಗೆ ಜನಿಸಿದ ಊರಿಗೆ ಭೇಟಿ ನೀಡಿದ್ದ ಬೊಮ್ಮಾಯಿ ಆಗಮನದ ವೇಳೆ ಧಾರವಾಡ ಜಿಲ್ಲೆಯ ಬಿಜೆಪಿಯ ಬೆರಳೆಣಿಕೆ ಮುಖಂಡರು ಹಾಜರಿದ್ದಿದ್ದು … Continued

ಕೃಷ್ಣಾ ಮೇಲ್ದಂಡೆ ಸೇರಿದಂತೆ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ:ಬೊಮ್ಮಾಯಿ

ಹುಬ್ಬಳ್ಳಿ: ಕೃಷ್ನಾ ಮೇಲ್ದಂಡೆ ಯೋಜನೆ ಸೇರಿದಂತೆ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಜಾರಿಗೆ ನನ್ನ ಸರ್ಕಾರ ಬದ್ಧ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಹುಬ್ಬಳ್ಳಿ ಗೋಕುಲ ರಸ್ತೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ನಾ ಮೇಲ್ದಂಡೆ … Continued

ಸಿಎಂ ಆದ ಬಳಿಕ, ತಂದೆ -ತಾಯಿ ಸಮಾಧಿಗೆ ಗೌರವ ಸಲ್ಲಿಸಿದ ಬೊಮ್ಮಾಯಿ

ಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ತಾಯಿ ಗಂಗಮ್ಮ ಹಾಗೂ ತಂದೆ, ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ,ಗೌರವ ಸಮರ್ಪಿಸಿದರು. ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಧ್ಯಾನ ಮಾಡಿದ ಮುಖ್ಯಮಂತ್ರಿ … Continued

ಸಿಎಂ ಬೆಂಗಾವಲು ವಾಹನಕ್ಕೆ ಶಿವರಾಂ ಹೆಬ್ಬಾರ ಕಾರು ಡಿಕ್ಕಿ

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ಕಾರಿಗೆ ಮಾಜಿ ಸಚಿವ ಶಿವರಾಮ ಹೆಬ್ಬಾರ್ ಅವರ ಕಾರು ಗುದ್ದಿರುವ ಘಟನೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಬಳಿ ನಡೆದಿದೆ. . ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮುಖ್ಯಮಂತ್ರಿಗಳ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ … Continued

ಬಾಗಲಕೋಟೆ ಯೋಧ ಶ್ರೀನಗರದಲ್ಲಿ ಸಾವು

posted in: ರಾಜ್ಯ | 0

ಬಾಗಲಕೋಟೆ: ಜಮ್ಮು ಕಾಶ್ಮೀರದ ಶ್ರೀನಗರದ ಕುಪ್ಪಾಡನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆ ಯೋಧ ಮಹಾಂತೇಶ್ ದಾಸಪ್ಪನವರ(೪೧) ಅನಾರೋಗ್ಯದ ಹಿನ್ನೆಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್ ಬಾಗಲಕೋಟೆ ತಾಲೂಕಿನ ಬೆನಕಟ್ಟಿ ಗ್ರಾಮದವರು. ಯೋಧ ಎಮ್‌ಇಜಿ ೨ ಇಂಜಿನಿಯರ್ ಬಟಾಲಿಯನ್ ರೆಜಿಮೆಂಟ್ ನಲ್ಲಿದ್ದರು. ಮಹಾಂತೇಶ್ ೨೦೦೦ರಲ್ಲಿ ಭಾರತೀಯ ಸೇನೆಗೆ ಸೇರಿದ್ದರು. ಭಾರತೀಯ ಸೇನೆಯಲ್ಲಿ ೨೨ ವರ್ಷ ಸೇವೆ ಸಲ್ಲಿಸಿದ ಯೋಧ, ಪತ್ನಿ, ಇಬ್ಬರು ಮಕ್ಕಳನ್ನು … Continued