ಧರ್ಮಸ್ಥಳ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆಗಳ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ಕು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ(SIT)ವನ್ನು ರಚಿಸಿದೆ. ಎಸ್‌ಐಟಿಯ ನೇತೃತ್ವವನ್ನು … Continued

ಕಾರವಾರ: ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು

ಕಾರವಾರ : ಗಾಳಿ ಮಳೆಗೆ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜಿಲ್ಲಾಧಿಕಾರಿ ಸನಿಹದ ಆಸ್ಪತ್ರೆಯ ಮುಂಭಾಗದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಸಂತೆಯ ದಿ‌ನವಾದ ಕಾರಣ ಪಿಕಳೆ ರಸ್ತೆಯಲ್ಲಿ ಜನ ಸಂಚಾರ ಹೆಚ್ಚಾಗಿತ್ತು‌. ಮರದ ಕೆಳಗಿದ್ದ … Continued

20 ವರ್ಷಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ‘ಸ್ಲೀಪಿಂಗ್ ಪ್ರಿನ್ಸ್’ ಅಲ್ ವಲೀದ್ ಬಿನ್ ಖಲೀದ್ ನಿಧನ

ನವದೆಹಲಿ:  “ಸ್ಲೀಪಿಂಗ್ ಪ್ರಿನ್ಸ್” ಎಂದು ವ್ಯಾಪಕವಾಗಿ ಕರೆಯಲ್ಪಡುವ ಸೌದಿ ರಾಜಮನೆತನದ ಪ್ರಿನ್ಸ್ ಅಲ್ ವಲೀದ್ ಬಿನ್ ಖಲೀದ್ ಬಿನ್ ತಲಾಲ್ ಅಲ್ ಸೌದ್ ಕೋಮಾಕ್ಕೆ ಜಾರಿದ ಸುಮಾರು 20 ವರ್ಷಗಳ ನಂತರ ನಿಧನರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ಏಪ್ರಿಲ್ 1990 ರಲ್ಲಿ ಜನಿಸಿದ ಪ್ರಿನ್ಸ್ ಅಲ್ ವಲೀದ್, ಪ್ರಮುಖ ಸೌದಿ ರಾಜಮನೆತನದವರೂ ಮತ್ತು ಬಿಲಿಯನೇರ್ … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ವಿಪರೀತ ಮಳೆಯಾಗುವ ಮುನ್ಸೂಚನೆ; ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜುಲೈ 20ರಿಂದ ಎರಡು ದಿನ ಕೆಲ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್‌ ಅಲರ್ಟ್‌ ನೀಡಲಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಜುಲೈ ಜುಲೈ 20ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, … Continued

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಕ್ರು ಪ್ರಮಾಣ ವಚನ

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನ 35ನೇ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಕ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾ. ವಿಭು ಬಕ್ರು ಅವರಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾ. ಬಕ್ರು ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾಮಿಕ್ ಪುಸ್ತಕಗಳಲ್ಲಿ ಅಡಗಿಸಿಟ್ಟಿದ್ದ 40 ಕೋಟಿ ರೂ. ಮೌಲ್ಯದ ಕೊಕೇನ್ ವಶ

ಬೆಂಗಳೂರು : ಶನಿವಾರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೂಪರ್ ಹೀರೋ ಕಾಮಿಕ್ ಪುಸ್ತಕಗಳ ಒಳಗೆ ಅಡಗಿಸಿಟ್ಟಿದ್ದ ನಾಲ್ಕು ಕಿಲೋಗ್ರಾಂಗಳಷ್ಟು ಕೊಕೇನ್ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ 40 ಕೋಟಿ ರೂ.ಗಳು ಎಂದು ಹೇಳಲಾಗಿದೆ. ಈ ಸಂಬಂಧ ಒಬ್ಬ ಪ್ರಯಾಣಿಕನನ್ನು ಬಂಧಿಸಲಾಗಿದೆ. ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಶನಿವಾರ (ಜುಲೈ 18) … Continued

ಡಿಸಿಎಂ ಡಿಕೆ ಶಿವಕುಮಾರ ಬೆಂಗಾವಲು ವಾಹನ ಪಲ್ಟಿ

ಮಂಡ್ಯ: ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಎಕ್ಸ್‌ಪ್ರೆಸ್ ಹೈವೇಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ … Continued

ಕನ್ನಡ-ಕರ್ನಾಟಕದ ಬಗ್ಗೆ ಅವಹೇಳನ ; ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ

ಬೆಂಗಳೂರು: ಕರ್ನಾಟಕ (Karnataka) ಮತ್ತು ಕನ್ನಡ ಭಾಷಿಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ 17 ರಂದು ಬೆಳಗ್ಗೆ 9:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಆರ್ಡರ್ ಮಾಡಿದ್ದ ಟಿ-ಶರ್ಟ್ ತಲುಪಿಸಲು ವಿಳಾಸ ದೃಢೀಕರಣಕ್ಕಾಗಿ ಡೆಲಿವರಿ ಎಕ್ಸಿಕ್ಯೂಟಿವ್ ರಂಜಿತ್ … Continued

ಆಗಸ್ಟ್ 11 ರಿಂದ ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ

ಬೆಂಗಳೂರು: ರಾಜ್ಯದ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22ರವರೆಗೆ 9 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಆಗಸ್ಟ್ 11 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ರೋಹಿತ್ ವೇಮುಲಾ ಮಸೂದೆ, ಕರ್ನಾಟಕ … Continued

ಶಾಸಕರಿಗೆ ಬಂಪರ್ : ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ. ಅನುದಾನ ಬಿಡುಗಡೆ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡುತ್ತಿಲ್ಲ ಎಂದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ, ಅದರಲ್ಲಿಯೂ ಕಾಂಗ್ರೆಸ್‌ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುಷಿ ಸುದ್ದಿ ನೀಡಿದ್ದಾರೆ. ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ. ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ. … Continued