ಹುಬ್ಬಳ್ಳಿ-ಧಾರವಾಡ ಉತ್ತುಂಗಕ್ಕೆ ಒಯ್ಯುವೆ ಎಂದು ಭರವಸೆ, ಶೆಟ್ಟರ ಜೊತೆ ಮಾತನಾಡುವೆ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಸ್ಥಳ. ನನ್ನ ಎಲ್ಲ ಶಿಕ್ಷಣ ಮುಗಿದಿದ್ದು ಇಲ್ಲಿಯೇ. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ ಎಂದು ಕರ್ನಾಟಕದ ನೂತನ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಹುಬ್ಬಳ್ಳಿಯನ್ನು ಹೀಗೆ ನೆನಪಿಸಿಕೊಂಡರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾದ ನಂತರ ಹುಬ್ಬಳ್ಳಿಗೆ ಪ್ರಪ್ರಥಮವಾಗಿ ಆಗಮಿಸಿದ ನಂತರ ಅವರು ಗುರುವಾರ ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued

ಹುಬ್ಬಳ್ಳಿಯಲ್ಲಿ  ಕೇಶವಕುಂಜಕ್ಕೆ ಸಿಎಂ ಭೇಟಿ, ಆರೆಸ್ಸೆಸ್‌ ಪ್ರಮುಖ ಮಂಗೇಶ ಭೇಂಡೆ ಆಶೀರ್ವಾದ ಪಡೆದ ಬೊಮ್ಮಾಯಿ

ಹುಬ್ಬಳ್ಳಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದರು. ನಂತರ ಹುಬ್ಬಳ್ಳಿಯ ಕೇಶವ ಕುಂಜಕ್ಕೆ ಭೇಟಿ ನೀಡಿದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ( ಆರೆಸ್ಸೆಸ್)‌ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಹುಬ್ಬಳ್ಳಿಯ ಆರ್ ಎಸ್ ಎಸ್ ನ … Continued

ನಾಳೆ ಹುಬ್ಬಳ್ಳಿಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ಸಿಗೆ ಸೇರ್ಪಡೆ

ಹುಬ್ಬಳ್ಳಿ: ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಜುಲೈ 30ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಜೆಡಿಎಸ್ ತೊರೆದು ಕಾಂಗ್ರೆಸ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಅವರು ಕಾಂಗ್ರೆಸ್ಸಿನ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ. ನಾಳೆ (ಜುಲೈ 30ರಂದು) ಬೆಳಿಗ್ಗೆ 9 :30ಕ್ಕೆ ಹುಬ್ಭಳ್ಳಿಯ ಗೋಕುಲ ಗಾರ್ಡನ್‌ನಲ್ಲಿ … Continued

ಇಂದು ಸಿಎಂ ಉತ್ತರ ಕನ್ನಡ ಜಿಲ್ಲೆ ಪ್ರವಾಸ, ದೆಹಲಿ ವರಿಷ್ಠರ ಭೇಟಿಗೆ ಸಮಯ ಕೇಳಿದ ಬೊಮ್ಮಾಯಿ

ಬೆಂಗಳೂರು: ಸಂಪುಟ ರಚನೆ ವೇಳೆ ಎಲ್ಲಾ ಸಮುದಾಯದ ಶಾಸಕರಿಂದ ಒತ್ತಡ ಬರುವುದು ಸಹಜ, ಎಲ್ಲರಿಗೂ ಪ್ರಾತಿನಿಧ್ಯ ನೀಡುವುದು ಎಲ್ಲರನ್ನೂ ಸಮಾಧಾನಗೊಳಿಸಿ, ಪ್ರಾದೇಶಿಕ ಸಮತೋಲನ ಕಾಪಾಡಿಕೊಂಡು ಸಚಿವ ಸಂಪುಟ ರಚನೆ ಮಾಡುವುದು ಸವಾಲಿನ ಕೆಲಸ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನನಗೆ ಈಗ ತಕ್ಷಣಕ್ಕೆ ಮಳೆ … Continued

ಪೊಲೀಸರು ಬಂದಿದ್ದು ನೋಡಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಶಂಕಿತ ಸರಗಳ್ಳ !

ಬೆಂಗಳೂರು: ಪೊಲೀಸರು ಬೆನ್ನಟ್ಟಿ ಬಂದಿದ್ದನ್ನು ನೋಡಿ ಶಂಕಿತ ಸರಗಳ್ಳ ಸೈನೈಡ್ ಸೇವಿಸಿ ಸಾವಿಗೀಡಾದ್ದಾನೆ. ಆರೋಪಿಯ ಬಂಧನಕ್ಕೆ ತೆರಳಿದ ಪೊಲೀಸರಿಗೆ ಇದೀಗ ಸೈನೈಡ್ ಕಂಟಕ ಎದುರಾಗಿದೆ. ಬೆಂಗಳೂರು ಹೊರವಲಯದ ಹೊಸಕೋಟೆ ಸಮೀಪ ಪಿಳ್ಳಂಗುಪ್ಪೆ ಕೈಗಾರಿಕ ಪ್ರದೇಶದಲ್ಲಿ ಸರಗಳ್ಳತನ ಪ್ರಕರಣದ ಶಂಕಿತ ಅರೋಪಿ ಶಂಕರ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಕೆ.ಆರ್. ಪುರ ಪೊಲೀಸರು ಮುಂದಾಗಿದ್ದರು. ಈ … Continued

ನಾಳೆ ಧಾರವಾಡ- ಉತ್ತರ ಕನ್ನಡಕ್ಕೆ ಸಿಎಂ ಪ್ರವಾಸ

ಹುಬ್ಬಳ್ಳಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 29ರಂದು ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಜುಲೈ 29ರಂದು ಬೆಳಗ್ಗೆ 10:30 ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವರು. 10:45 ಕ್ಕೆ ರಸ್ತೆಯ ಮೂಲಕ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. . ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ … Continued

ಆಪ್ತನ ಮೂಲಕವೇ ಯಡಿಯೂರಪ್ಪ ನೆರಳಿನಿಂದ ಸರ್ಕಾರ ಹೊರತರಲು ಬಿಜೆಪಿ ಹೈಕಮಾಂಡ್‌ ಪ್ರಯತ್ನ, ಸಂಪುಟ ರಚನೆಯಲ್ಲಿ ಇನ್ನಷ್ಟು ಸ್ಪಷ್ಟ..?!

ರಘುಪತಿ ಯಾಜಿ ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೂಗುಚ್ಛನ್ನು ಬಸವರಾಜ್ ಬೊಮ್ಮಾಯಿಗೆ ನೀಡಿದಾಗಲೇ ಬೊಮ್ಮಾಯಿ ಅವರನ್ನು ಕರ್ನಾಟಕದ ನುತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಎಲ್ಲರಿಗೂ ಗೊತ್ತಾಗಿ ಹೋಗಿತ್ತು.. ಮಂಗಳವಾರ ಸಂಜೆ 5.30 ಕ್ಕೆ ಬೊಮ್ಮಾಯಿ ಅವರ ಮನೆಯ ಹೊರಗಿನ ಭದ್ರತೆಯನ್ನು ಹೆಚ್ಚಿಸಿದಾಗ, ಯಡಿಯೂರಪ್ಪನ … Continued

ಕರ್ನಾಟಕದಲ್ಲಿ ಬುಧವಾರ ಮೂರು ತಿಂಗಳಲ್ಲೇ ಕಡಿಮೆ ದೈನಂದಿನ ಕೊರೊನಾ ಸಾವು

ಬೆಂಗಳೂರು: ರಾಜ್ಯದಲ್ಲಿ ಬುಧವಾರ 1,531 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 19 ಜನರು ಮೃತಪಟ್ಟಿದ್ದಾರೆ. ಮೂರು ತಿಂಗಳ ನಂತರದಲ್ಲಿ ಇದೇ ಮೊದಲ ಸಲ ದೈನಂದಿನ ಕೋವಿಡ್‌ ಸಾವು 20ಕ್ಕಿಂತ ಕಡಿಮೆ ದಾಖಲಾಗಿದೆ. ಇದೇ ಸಮಯದಲ್ಲಿ 1,430 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 22,569 ಸಕ್ರಿಯ ಪ್ರಕರಣಗಳಿವೆ. ಮರಣ ಪ್ರಮಾಣ ಶೇ.1.24ಕ್ಕೆ ಇಳಿಕೆ ಕಂಡಿದ್ದರೆ … Continued

ನೂತನ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಸೇರಲ್ಲ ಎಂದ ಜಗದೀಶ ಶೆಟ್ಟರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರುವುದಿಲ್ಲ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ನಾನು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಆಗಿರುವುದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಬಿ.ಎಸ್. ಯಡಿಯೂರಪ್ಪ ಜೊತೆ ಕೆಲಸ ಮಾಡಿರುವುದರಿಂದ ಹೀಗೆ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ ಹಿಂದೆ ನಾನು ರಾಜ್ಯಾದ್ಯಂತ ಪಕ್ಷ … Continued

ನಾಳೆ ಉತ್ತರ ಕನ್ನಡ ಜಿಲ್ಲೆ ಪ್ರವಾಹಪೀಡಿತ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಭೇಟಿ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಭೀಕರ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಿಗೆ ನಾಳೆಯಿಂದಲೇ (ಗುರುವಾರದಿಂದ) ಪ್ರವಾಸ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನಾಳೆ ಅವರು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಬುಧವಾರ … Continued