ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಶಿಷ್ಯ ವೇತನ, ವೃದ್ಧರು-ವಿಧವೆಯರು, ಅಂಗವಿಕಲರಿಗೆ ಮಾಸಾಶನ ಹೆಚ್ಚಳ:ಮೊದಲ ದಿನವೇ ನೂತನ ಸಿಎಂ ಘೋಷಣೆ

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಮೊದಲ ದಿನವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಬಸವರಾಜ ಬೊಮ್ಮಾಯಿ ಮೊದಲ ರಾಜ್ಯದ ಪ್ರಮುಖ ಅಧಿಕಾರಿಗಳ ಜೊತೆ ಸಭೆ ಮಾಡಿ ಹಲವು ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ, ಆಡಳಿತದಲ್ಲಿ ತೊಂದರೆ ಆಗದಂತೆ … Continued

ಬಣ್ಣಿಸಲು ಪದಗಳಿಲ್ಲ : ಬಿಎಸ್ ವೈ ಕೊಂಡಾಡಿದ ಪ್ರಧಾನಿ ಮೋದಿ

ನವದೆಹಲಿ : ರಾಜ್ಯದ ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಯಡಿಯೂರಪ್ಪ ಅವರನ್ನು ಹೊಗಳಿ ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ. ಯಡಿಯೂರಪ್ಪನವರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ರೀತಿ ಅವಿಸ್ಮರಣೀಯ.ಕರ್ನಾಟಕದಲ್ಲಿ ಪಕ್ಷದ ಅಭಿವೃದ್ಧಿಗೆ ಯಡಿಯೂರಪ್ಪ ಕೊಡುಗೆ ಬಣ್ಣಿಸಲು ಪದಗಳಿಲ್ಲ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಕೊಂಡಾಡಿದ್ದಾರೆ. … Continued

ಸದ್ಯ ನನ್ನ ಮುಂದಿರುವ ಸವಾಲುಗಳಲ್ಲಿ ಪ್ರವಾಹ, ಕೋವಿಡ್ 3.0 ಸಹ ಸೇರಿದೆ, ಹೈಕಮಾಂಡ್‌ ನಿರೀಕ್ಷೆ ಉಳಿಸಿಕೊಳ್ಳುತ್ತೇನೆ : ನೂತನ ಸಿಎಂ ಬೊಮ್ಮಾಯಿ

ಟಾಟಾ ಮೋಟಾರ್ಸ್ ಉದ್ಯೋಗಿಯಿಂದ ಕರ್ನಾಟಕದ ಮುಖ್ಯಮಂತ್ರಿಯಾಗುವ ವರೆಗೆ, ರಾಜಕೀಯದಲ್ಲಿ ಬಸವರಾಜ್ ಬೊಮ್ಮಾಯಿ ನಡೆದು ಬಂದ ದಾರಿ ತಿರುವುಗಳಿಂದ ಕೂಡಿದೆ. ಬುಧವಾರ ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತನ್ನನ್ನು ಉನ್ನತ … Continued

ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ಬೆಂಗಳೂರು: ಬಸವರಾಜ ಬೊಮ್ಮಾಯಿ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೊಮ್ಮಾಯಿ ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ನೂತನ ಮುಖ್ಯಮಂತ್ರಿ ಕಡತಕ್ಕೆ ಸಹಿ ಹಾಕಿದರು. … Continued

ಆಗಸ್ಟ್ ೧೩ ರಿಂದ ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನಯಾನ ಸೇವೆ

posted in: ರಾಜ್ಯ | 0

ಬೆಂಗಳೂರು: ೨೦೨೧ ಆಗಸ್ಟ್ ೧೩ ರಿಂದ ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನಯಾನ ಸೇವೆ ಆರಂಭಿಸುವುದಾಗಿ ಸ್ಪೈಸ್ ಜೆಟ್ ಸೇರಿದಂತೆ ಹಲವು ವಿಮಾನಗಳು ಸಂಚಾರವನ್ನು ಆರಂಭಿಸಲಿವೆ. ಬೆಳಗಾವಿ ವಿಮಾನ ನಿಲ್ದಾಣದಿಂದ ನೇರ ವಿಮಾನಯಾನಕ್ಕೆ ಅಲ್ಲಿನ ಸಂಸದರು, ಶಾಸಕರು, ಮಂತ್ರಿಗಳು ಸೇರಿದಂತೆ ಉದ್ಯಮಿಗಳು, ನಾಗರಿಕರು ಬೇಡಿಕೆ ಇಟ್ಟಿದ್ದರು. ವ್ಯಾಪಾರ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ವಾಯುಪಡೆ, ರಾಜ್ಯ ಹಾಗೂ ಕೇಂದ್ರ … Continued

ಅಧಿಕಾರಿಗಳ ಜೊತೆಗೆ ಇಂದು ನೂತನ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಬಳಿಕ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಬುಧವಾರ ಬೆಳಿಗ್ಗೆ ಬಸವರಾಜ ಬೊಮ್ಮಾಯಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಶ್ರೀ ಮಾರುತಿ ಮಂದಿರಕ್ಕೆ ನಿಯೋಜಿತ ಮುಖ್ಯಮಂತ್ರಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಾಜಿ ಸಚಿವ ಭೈರತಿ ಬಸವರಾಜ, … Continued

ಸೋತು ಗೆದ್ದ ಯಡಿಯೂರಪ್ಪ..:ಕಿಂಗ್‌ ಸ್ಥಾನದಿಂದ ಕೆಳಗಿಳಿದು ಕಿಂಗ್‌ ಮೇಕರ್‌ ಆದ ಬಿಎಸ್‌ ವೈ..!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನಂತರ ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನವುದು ಯಕ್ಷ ಪ್ರಶ್ನೆ ಆಗಿತ್ತು‌. ಬಸವರಾಜ ಬೊಮ್ಮಾಯಿ ಆಯ್ಕೆ ಆಗುವ ಮೂಲಕ ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಆಯ್ಕೆ ಮೂಲಕ ಸೋಮವಾರದ ವರೆಗೆ ಕಿಂಗ್‌ ಆಗಿದ್ದ ಯಡಿಯೂರಪ್ಪ ಈಗ ಕಿಂಗ್ ಮೇಕರ್ ಆದರು. ಬಸವರಾಜು ಬೊಮ್ಮಾಯಿ ಮುಖ್ಯಮಂತ್ರಿಯಾಗಲು ಮುಖ್ಯ … Continued

ಬೊಮ್ಮಾಯಿ ನೂತನ ಸಿಎಂ: ಕರ್ನಾಟಕದಲ್ಲಿ ತಂದೆ- ಮಗ ಇಬ್ಬರೂ ಮುಖ್ಯಮಂತ್ರಿಯಾದ ಎರಡನೇ ಕುಟುಂಬ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ನೇಮಕವಾಗಿರುವ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ, ಎಸ್ .ಆರ್. ಬೊಮ್ಮಾಯಿಯವರ ಪುತ್ರ. ತಂದೆ, ಮಗ ಮುಖ್ಯಮಂತ್ರಿಯಾದ ರಾಜ್ಯದ ಎರಡನೇ ರಾಜಕೀಯ ಕುಟುಂಬ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅಪ್ಪ, ಮಗ ಇಬ್ಬರೂ ರಾಜ್ಯದ ಮುಖ್ಯಮಂತ್ರಿಯಾಗುತ್ತಿರುವುದು ರಾಜ್ಯದಲ್ಲಿ ಎರಡನೇ ಬಾರಿಯಾಗಿದೆ. ಇದಕ್ಕೂ ಮೊದಲು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿ … Continued

ನೂತನ ಸಿಎಂ ಬೊಮ್ಮಾಯಿಯವರಿಗೆ ಕೇಂದ್ರ ಸಚಿವ ಜೋಶಿ ಅಭಿನಂದನೆ

ನವದೆಹಲಿ: ಯಡಿಯೂರಪ್ಪನವರ ಸಂಪುಟದಲ್ಲಿ ಗೃಹ ಖಾತೆ ಸಚಿವರಾಗಿಯಶಸ್ವಿ ಕಾರ್ಯ ನಿರ್ವಹಿಸಿ ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ತಂದೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೇರುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ ಎಂದು … Continued

ಇಂದು ಬೆಳಿಗ್ಗೆ 11ಕ್ಕೆ ಸಿಎಂ ಆಗಿ ಬೊಮ್ಮಾಯಿ ಪ್ರಮಾಣವಚನ

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬೆಂಗಳೂರಿನ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದು, ಜುಲೈ 28ರ ಮಧ್ಯಾಹ್ನ 11ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಆಗಿ ಆಯ್ಕೆಯಾಗುತ್ತಿದ್ದಂತೆ ಬೊಮ್ಮಾಯಿ ಅವರು ಯಡಿಯೂರಪ್ಪ ಕಾಲಿಗೆ ಬಿದ್ದು ನಮಸ್ಕರಿಸಿದರು. ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಎಲ್ಲ ಶಾಸಕರು … Continued