ಮುಳುಗಡೆಯಾದ ವಿಶ್ವವಿಖ್ಯಾತ ಹಂಪಿ ಸ್ಮಾರಕಗಳು

ಹೊಸಪೇಟೆ : ಇಲ್ಲಿನ‌ ತುಂಗಭದ್ರಾ ಜಲಾಶಯದಿಂದ ಭಾನುವಾರ ಹೆಚ್ಚುವರಿ ನೀರನ್ನು‌ ನದಿಗೆ ಹರಿಸಿದ‌ ಪರಿಣಾಮ ವಿಶ್ವವಿಖ್ಯಾತ ಹಂಪಿಯ ಅನೇಕ ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇದ್ದು, ಮುಂಜಾಗ್ರತಾ ಕ್ರಮವಾಗಿ ತುಂಗಭದ್ರಾ ಜಲಾಶಯದ 12 ಕ್ರಸ್ಟ್ ಗೇಟ್​​ಗಳ ಮೂಲಕ ಸದ್ಯ 36,217 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. … Continued

ಕರ್ನಾಟಕದಲ್ಲಿ ಮಳೆ: 10ಕ್ಕೆ ಏರಿದ ಸಾವಿನ ಸಂಖ್ಯೆ, ಸಂತ್ರಸ್ತರಿಗೆ ಸರ್ಕಾರದ ಸಹಾಯದ ಅಭಯ ನೀಡಿದ ಸಿಎಂ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಬ್ಬರದ ಮಳೆಯ ಪರಿಣಾಮವಾಗಿ ಕರ್ನಾಟಕದ ಕೆಲವು ಭಾಗಗಳಲ್ಲಿ ಬಿಗಡಾಯಿಸಿದ್ದ ಪ್ರವಾಹ ಪರಿಸ್ಥಿತಿ ಭಾನುವಾರ ಬೆಳಿಗ್ಗೆಯಿಂದ ಸುಧಾರಿಸಿದೆ. ಹಿಂದಿನ 12 ಗಂಟೆಗಳ ಅವಧಿಯಲ್ಲಿ ಮಳೆ ಕಡಿಮೆಯಾಗಿದೆ. ಆದರೆ, ಮಳೆಯಿಂದ ಸಾವಿನ ಸಂಖ್ಯೆ 10 ಕ್ಕೆ ಏರಿದೆ. ಮತ್ತೊಂದು ಸಾವು ಉತ್ತರ ಕನ್ನಡ ಜಿಲ್ಲೆಯಿಂದ ವರದಿಯಾಗಿದೆ. ಜುಲೈ 22 ರಿಂದ ಮಳೆಯಿಂದಾಗಿ ಪ್ರವಾಹ … Continued

ತುಂಗಭದ್ರಾ ಜಲಾಶಯದಿಂದ 36,217 ಕ್ಯೂಸೆಕ್ ನೀರು ಬಿಡುಗಡೆ, ಡ್ಯಾಂ ಕೆಳಗಡೆ ಪ್ರದೇಶದಲ್ಲಿ ಪ್ರವಾಹದ ಭೀತಿ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇದ್ದು, ಮುಂಜಾಗ್ರತಾ ಕ್ರಮವಾಗಿ ತುಂಗಭದ್ರಾ ಜಲಾಶಯದ 12 ಕ್ರಸ್ಟ್ ಗೇಟ್​​ಗಳ ಮೂಲಕ ಸದ್ಯ 36,217 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಭಾನುವಾರ ಜಲಾಶಯದಿಂದ ನದಿಗೆ ನೀರು ಬಿಡಲಾಗಿದೆ. ತುಂಗಭದ್ರಾ ಜಲಾಶಯ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಜೀವನಾಡಿಯಾಗಿದೆ. ಅಪಾರ ಪ್ರಮಾಣದ ನೀರು … Continued

ಪ್ರವಾಹದಿಂದ ಬೆಳಗಾವಿ ಜಿಲ್ಲೆಯಲ್ಲಿ 1200 ಕೋಟಿ ಹಾನಿ; ತಕ್ಷಣವೇ 170 ಕೋಟಿ ರೂ.ಗಳ ಬಿಡುಗಡೆಗೆ ಮನವಿ

ಬೆಳಗಾವಿ: ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ.‌ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಗಮನಕ್ಕೆ ತಂದು ರಿಸ್ಥಿತಿ ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ (ಜು.25) ಬೆಳಗಾವಿ ಜಿಲ್ಲೆ ಪ್ರವಾಹ ಹಾನಿ ವೀಕ್ಷಣೆ … Continued

ಹೈಕಮಾಂಡ್ ಸಂದೇಶಕ್ಕೆ ಕಾದು ನೋಡೋಣ ಎಂದ ಸಿಎಂ: ನಾಳೆ ಉತ್ತರ ಕನ್ನಡ ಜಿಲ್ಲೆ ಪ್ರವಾಹ ಹಾನಿ ಪರಿಶೀಲನೆಗೆ ಹೊರಟ ಬಿಎಸ್‌ ವೈ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಹಾನಿ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ (ಜುಲೈ 26) ಉತ್ತರ ಕನ್ನಡ ಜಿಲ್ಲೆಗೆ ಭೇಟಿ ಪ್ರವಾಹ ಪರಿಸ್ಥಿತಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಬಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್‌ನಿಂದ ಸಂದೇಶ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾದು ನೋಡೋಣ, ಕಾದು ನೋಡೋಣ ಎಂದಷ್ಟೇ … Continued

ಸಿಎಂ ಬದಲಾವಣೆ ಡ್ರಾಮಾಕ್ಕೆ ಟ್ವಿಸ್ಟ್: ಬಿಎಸ್‌ವೈ ಹಾಡಿಹೊಗಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ..!

ಪಣಜಿ: ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿ ಬಿ.ಎಸ್‌. ಯಡಿಯೂರಪ್ಪ ಮತ್ತೆ ಕೆಲಕಾಲ ಮುಂದುವರಿಯಲಿದ್ದಾರೆಯೇ..? ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಪಟ್ಟಂತೆ ಭಾನುವಾರ ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, “ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಉತ್ತಮವಾಗಿ ನಡೆಯುತ್ತಿದೆ. ಉಳಿದಂತೆ, ಯಡಿಯೂರಪ್ಪನವರು ಕೂಡ ಎಲ್ಲ ವಿಷಯಗಳನ್ನೂ ಉತ್ತಮವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ ರಾಜಕೀಯ … Continued

ನಾಳೆಯಿಂದ ಕರ್ನಾಟಕದಲ್ಲಿ ಕಾಲೇಜುಗಳು ಓಪನ್, ಮಾರ್ಗಸೂಚಿಗಳು ಇಲ್ಲಿವೆ

ಬೆಂಗಳೂರು: ನಾಳೆಯಿಂದ (ಜುಲೈ 26 ) ರಾಜ್ಯಾದ್ಯಂತ ಪದವಿ ಕಾಲೇಜುಗಳು ಆರಂಭವಾಗುತಿದ್ದು, ಲೇಜುಗಳು ಮತ್ತೆ ವಿದ್ಯಾರ್ಥಿಗಳಿಗೆ ಬಾಗಿಲು ತೆರೆದಿವೆ. ಕೋವಿಡ್ ಮೊದಲನೇ ಮತ್ತು ಎರಡನೇ ಅಲೆಯ ಆರ್ಭಟದಲ್ಲಿ ಮನೆಗಳಲ್ಲೇ ಉಳಿದುಹೋಗಿದ್ದ ವಿದ್ಯಾರ್ಥಿಗಳು ಈಗ ಕಾಲೇಜಿಗೆ ತೆರಳಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಹಂತಹಂತವಾಗಿ ಶಾಲಾ ಕಾಲೇಜುಗಳನ್ನು ತೆರೆಯಲಾಗುತ್ತದೆ ಎಂದು ಈಗಾಗಲೇ ರಾಜ್ಯ ಸರ್ಕಾರ ತಿಳಿಸಿದೆ. ಇದರಲ್ಲಿ ಮೊದಲ ಹಂತವಾಗಿ … Continued

6 ತಿಂಗಳು ಸಿಎಂ ಆಗಿ ಯಡಿಯೂರಪ್ಪ ಮುಂದುವರಿಸಿ, ಮಠಾಧೀಶರ ಮಾತಿಗೆ ಗೌರವ ನೀಡಿ; ಬಿಜೆಪಿಗೆ ನಿಡುಮಾಮಿಡಿ ಶ್ರೀಗಳು

ಬೆಂಗಳೂರು:ಯಡಿಯೂರಪ್ಪನವರನ್ನು ಬಲವಂತವಾಗಿ ಕೆಳಗಿಳಿಸಲಾಗುತ್ತದೆ. ಇದಕ್ಕಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ, ಅವರನ್ನು ಇಳಿಸುವುದು ಸರಿಯಲ್ಲ ಎಂದು ನಿಡುಮಾಮಿಡಿ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗೆ ಇಳಿಸಿದರೆ ವೀರಶೈವ ಲಿಂಗಾಯತರಿಗೆ ಅಧಿಕಾರ ನೀಡಬೇಕು. ಇಲ್ಲದಿದ್ದರೆ ಬಿಜೆಪಿ ಲಿಂಗಾಯಿತ ಮತಗಳನ್ನು ಕಳೆದುಕೊಳ್ಳಲಿದೆ. ಬಿಜೆಪಿಯಿಂದ ಲಿಂಗಾಯಿತರು ದೂರವುಳಿಯುತ್ತಾರೆ ಎಂದು ನಿಡುಮಾಮಿಡಿ ಸ್ವಾಮೀಜಿ ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ದಕ್ಷತೆ … Continued

ಇಂದು ಸಂಜೆ ಯಡಿಯೂರಪ್ಪ ಕೈ ಸೇರಲಿದೆಯೇ ಸಂದೇಶ; ಬಿಜೆಪಿ ಹೈಕಮಾಂಡ್​ ನಿರ್ಧಾರಕ್ಕೆ ಕ್ಷಣಗಣನೆ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ನಾಯಕತ್ವ ಬದಲಾವಣೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ದೆಹಲಿಯ ಹೈಕಮಾಂಡ್ ನಾಯಕರು ಸೂಚನೆ ನೀಡಲಿದ್ದಾರೆ. ಸದ್ಯ ಗೋವಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು (ಭಾನುವಾರ) ಸಂಜೆ 5 ಗಂಟೆ ಸುಮಾರಿಗೆ … Continued

ಪ್ರವಾಹಕ್ಕೆ ತತ್ತರಿಸಿದ ಉತ್ತರ ಕನ್ನಡ: 108 ಗ್ರಾಮಗಳಿಗೆ ಹಾನಿ, ನಾಲ್ವರು ಸಾವು

ಕಾರವಾರ: ಧಾರಾಕಾರವಾಗಿ ಸುರಿದ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ನದಿಗಳು ಉಕ್ಕಿ ಹರಿದ ಪರಿಣಾಮ ಈ ಬಾರಿ ದೊಡ್ಡ ಮಟ್ಟದಲ್ಲಿಯೇ ಹಾನಿ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಒಟ್ಟು 108 ಗ್ರಾಮಗಳಿಗೆ ನೆರೆಯಿಂದ ಹಾನಿಯಾಗಿದ್ದು, ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಮೂವರು ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಮೂರು ದಿನಗಳಿಂದ ಜಿಲ್ಲೆಯ ಘಟ್ಟದ ಮೇಲೆ ಹಾಗೂ … Continued