ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗಳ ಮೇಲೆ ಇ.ಡಿ. ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಡಿಸಿಸಿ) ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿಯ ಮನೆ, ಕಚೇರಿ, ಫಾರಂ ಹೌಸ್‌ಗಳ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳ ತಂಡ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ ಅವರಿಗೆ ಸೇರಿದ ಒಟ್ಟು 3 ನಿವಾಸದ ಮೇಲೆ … Continued

ಬೆಂಗಳೂರಿನಲ್ಲಿ ಶಾಲಾ ಸಮಯದಲ್ಲಿ ಬದಲಾವಣೆ ಬಗ್ಗೆ ಚರ್ಚೆ : ಸಭೆಯ ದಿನಾಂಕ ಬದಲು, ಅಕ್ಟೋಬರ್‌ 9ಕ್ಕೆ ಸಭೆ ನಿಗದಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಶಾಲಾ ಸಮಯ ಬದಲಾವಣೆ ಮಾಡುವ ಕುರಿತು ಚರ್ಚಿಸಲು ಶಿಕ್ಷಣ ಇಲಾಖೆಯು ಅಕ್ಟೋಬರ್ 5ರಂದು ಕರೆದಿದ್ದ ಸಭೆಯನ್ನು ಕಾಋಣಾಂತರಗಳಿಂದ ಅಕ್ಟೋಬರ್ 9ಕ್ಕೆ ಮುಂದೂಡಿದೆ. ನಗರದಲ್ಲಿ ವೈಜ್ಞಾನಿಕವಾಗಿ ಸಂಚಾರ ವ್ಯವಸ್ಥೆ ಮಾಡಿ ಸಂಚಾರ ದಟ್ಟಣೆ ಕಡಿಮೆ ಮಾಡುವಂತೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, … Continued

ಶಿರಸಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವು

ಶಿರಸಿ: ಪುಟ್ಟ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಶಿರಸಿಯ ಸಿ.ಪಿ.ಬಜಾರಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತ ಬಾಲಕಿಯನ್ನು ಅನುಶ್ರೀ ರಾಜಶೇಖರ ನೂಲಾಶೆಟ್ಟರ (೩) ಎಂದು ಗುರುತಿಸಲಾಗಿದೆ. ಈಕೆಯ ತಾಯಿ ಬಾವಿಯಿಂದ ನೀರು ತರಲು ತೆರಳಿದ್ದ ವೇಳೆ ಬಾಲಕಿಯೂ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ … Continued

ಅಕ್ಟೋಬರ್‌ 5ರಂದು ಮಹತ್ವದ ಸಭೆ ಕರೆದ ಶಿಕ್ಷಣ ಇಲಾಖೆ : ಬೆಂಗಳೂರಲ್ಲಿ ಶಾಲಾ ಸಮಯ ಬದಲಾವಣೆ..?

ಬೆಂಗಳೂರು : ಬೆಂಗಳೂರು ನಗರದಲ್ಲಿ ಶಾಲಾ ಸಮಯ ಬದಲಾವಣೆ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ಅಕ್ಟೋಬರ್ 5ರಂದು ಮಹತ್ವದ ಸಭೆ ಕರೆದಿದೆ. ನಗರದಲ್ಲಿ ವೈಜ್ಞಾನಿಕವಾಗಿ ಸಂಚಾರ ವ್ಯವಸ್ಥೆ ಮಾಡಿ ಸಂಚಾರ ದಟ್ಟಣೆ ಕಡಿಮೆ ಮಾಡುವಂತೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಶಾಲಾ … Continued

ರಾಜ್ಯದಲ್ಲಿ ಬರ ಪರಿಸ್ಥಿತಿ : ನಾಳೆಯಿಂದ ಕೇಂದ್ರ ತಂಡದಿಂದ 12 ಜಿಲ್ಲೆಗಳಲ್ಲಿ ಪರಿಶೀಲನೆ

ಬೆಂಗಳೂರು : ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬರ ಸಮೀಕ್ಷೆಗಾಗಿ ನಾಳೆ, ಗುರುವಾರ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಿ ಬರದ ಸ್ಥಿತಿಯ ಕುರಿತು ಪರಿಶೀಲನೆ ನಡೆಸಲಿದೆ. ನಾಳೆಯಿಂದ ಅಕ್ಟೋಬರ್ 9ರ ವರೆಗೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, … Continued

ಇನ್ಮುಂದೆ ಗ್ರಾಮ ಪಂಚಾಯಿತಗಳ ಬಾಪೂಜಿ ಕೇಂದ್ರಗಳಲ್ಲೇ ಆದಾಯ, ಜಾತಿ ಪ್ರಮಾಣ ಪತ್ರ ಸೇರಿದಂತೆ 66 ಸೇವೆಗಳು ಲಭ್ಯ : ಮಾಹಿತಿ ಇಲ್ಲಿದೆ…

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗಗಳ ಜನತೆಗೆ ಹೆಚ್ಚಿನ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನಾಡಕಚೇರಿಗಳಲ್ಲಿ, ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸರ್ಕಾರಿ ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯತಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯವಾಗಲಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. ಈಗ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಲಭ್ಯವಿರುವ … Continued

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು : ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (Salumarada Timmakka) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಉಸಿರಾಟದ ಸಮಸ್ಯೆಯಾದ ಅವರನ್ನು ಮಂಗಳವಾರ (ಅ.03)) ಹಾಸನದಿಂದ ಕರೆದುಕೊಂಡು ಬಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ … Continued

ಬೆಂಗಳೂರು : ನೈಸ್‌ ರಸ್ತೆಯಲ್ಲಿ ಅಪಘಾತ, ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ-ಮಗು ಸಾವು

ಬೆಂಗಳೂರು : ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಸೋಮಪುರ ಬಳಿ ಇಂದು, ಮಂಗಳವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕಾರು ಬೆಂಕಿ ಹೊತ್ತಿ ಉರಿದಿದ್ದು, ಪ್ರಯಾಣಿಸುತ್ತಿದ್ದ ತಾಇ ಹಾಗೂ 2 ವರ್ಷದ ಮಗು ಸಜೀವ ದಹನವಾಗಿದ್ದಾರೆ. ಇನ್ನೊಂದು ಮಗು ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ … Continued

ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ.ಕೆ. ಹರಿಪ್ರಸಾದ ಒತ್ತಾಯ

ಬೆಂಗಳೂರು : ಬಿಹಾರದಲ್ಲಿ ನಡೆಸಿದ ಜಾತಿಗಣತಿ ಮಾದರಿಯಲ್ಲಿ ಕರ್ನಾಟಕದಲ್ಲೂ ರಾಜ್ಯ ಸರ್ಕಾರ ನಡೆಸಿದ್ದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದ್ದಾರೆ. ಕರ್ನಾಟಕವು 2017 ರಲ್ಲಿ ರಾಜ್ಯವು ನಡೆಸಿದ ಜಾತಿ ಗಣತಿಯ ವರದಿ ಬಿಡುಗಡೆ ಮಾಡುವಂತೆ ಅವರು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 9ರ ವರೆಗೆ ಮಳೆ

ಬೆಂಗಳೂರು : ಕರ್ನಾಟಕದಲ್ಲಿ ಅಕ್ಟೋಬರ್ 9 ರವರೆಗೆ ಮಳೆ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಜೋರಾಗಿದ್ದ ಮಳೆ ಕೊಂಚ ಕಡಿಮೆಯಾಗಿದ್ದು, ಈ ಭಾಗದಲ್ಲಿ ಸಾಧಾರಣದಿಂದ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಹ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ. ಉಡುಪಿ, … Continued