ಮುಜರಾಯಿ ಇಲಾಖೆ ವಶಕ್ಕೆ ಗಾಳಿ ಆಂಜನೇಯಸ್ವಾಮಿ ದೇವಾಲಯ ; ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಬೆಂಗಳೂರು ಮಹಾನಗರದ ನಗರದ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಸುಪರ್ದಿಗೆ ಪಡೆದು ರಾಜ್ಯ ಮುಜರಾಯಿ ಇಲಾಖೆ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದ ಮನವಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಸರ್ಕಾರದ ಆದೇಶ ರದ್ದು ಕೋರಿ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆಡಳಿ ಮಂಡಳಿ ಸಲ್ಲಿಸಿದ್ದ ಅರ್ಜಿಯ ಮಧ್ಯಂತರ ಕೋರಿಕೆಯನ್ನು ನ್ಯಾಯಮೂರ್ತಿ … Continued

ಶಿರಸಿ : ನಗರಸಭೆ ಸದಸ್ಯ, ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿರಸಿ : ಜಾಗದ ವಿಷಯವೊಂದಕ್ಕೆ ಸಂಬಂಧಿಸಿದಂತೆ ₹3 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ, ಶಿರಸಿ ನಗರಸಭೆಯ ಹಾಲಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ಮತ್ತು ನಗರಸಭೆಯ ಕಂದಾಯ ಅಧಿಕಾರಿ ಆರ್. ಎಂ. ವರ್ಣೇಕರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ಕಂದಾಯ ಅಧಿಕಾರಿ ಆರ್ ಎಂ.ವೆರ್ಣೇಕರ ಹಾಗೂ ಸದಸ್ಯ ಗಣಪತಿ ನಾಯ್ಕ ದೂರುದಾರರಾದ ರಮೇಶ … Continued

ಬೆಂಗಳೂರು | ರೌಡಿಶೀಟರ್​ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ ಸೇರಿ ಐವರ ವಿರುದ್ಧ ಎಫ್​ಐಆರ್​

ಬೆಂಗಳೂರು: ರೌಡಿಶೀಟರ್​​ ಶಿವಪ್ರಕಾಶ ಅಲಿಯಾಸ್​ ಬಿಕ್ಲು ಶಿವ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ನೀಡಿದ ದೂರಿನ ಮೇರೆಗೆ ಮಾಜಿ ಸಚಿವ ಹಾಗೂ ಕೆ.ಆರ್.ಪುರಂ. ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಸೇರಿ ಐವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಬೆಂಗಳೂರಿನ ಭಾರತೀ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ರೌಡಿಶೀಟರ್ ಶಿವಕುಮಾರ ಅಲಿಯಾಸ್ … Continued

ಗೋಕರ್ಣ ಗುಹೆಯಲ್ಲಿದ್ದ ರಷ್ಯಾ ಮಹಿಳೆ ಗೋವಾ ಗುಹೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು ! ತಾನೇ ಹೆರಿಗೆ ಮಾಡಿಕೊಂಡಿದ್ದಳು..!! ಮಕ್ಕಳ ತಂದೆ ಇಸ್ರೇಲಿ ಉದ್ಯಮಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಗುಹೆಯೊಳಗೆ ವಾಸಿಸುತ್ತಿದ್ದ ರಷ್ಯಾದ ಮಹಿಳೆ ನೀನಾ ಕುಟಿನಾ, ಗೋವಾದ ಗುಹೆಯಲ್ಲಿದ್ದಾಗ ಒಬ್ಬ ಮಗಳಿಗೆ ಜನ್ಮ ನೀಡಿರುವುದಾಗಿ ಹೇಳಿಕೊಂಡಿದ್ದು, ಇಸ್ರೇಲಿ ಉದ್ಯಮಿಯೊಬ್ಬರು ಈ ಇಬ್ಬರು ಮಕ್ಕಳ ತಂದೆ ಹೇಳಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ನೀನಾ ಕುಟಿನಾ (40) ಮತ್ತು ಆರು ಮತ್ತು ನಾಲ್ಕು ವರ್ಷ ವಯಸ್ಸಿನ … Continued

ಕರ್ನಾಟಕ ಸರ್ಕಾರ ಭೂಸ್ವಾಧೀನ ಕೈಬಿಟ್ಟ ಬೆನ್ನಲ್ಲೇ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ ಆಂಧ್ರ ಸರ್ಕಾರ

ಅಮರಾವತಿ: ಮೂರು ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ ಬೆನ್ನಲ್ಲೇ, ಆಂಧ್ರಪ್ರದೇಶ ಸರ್ಕಾರ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದೆ. ಆಂಧ್ರ (Andhra Pradesh) ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪುತ್ರ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ನಾರಾ ಲೋಕೇಶ್ (Nara Lokesh) ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ. … Continued

ರಾಜ್ಯ-ಕೇಂದ್ರದಲ್ಲಿ ಅಧಿಕಾರದಲ್ಲಿದ್ದವರಿಗೆ ತೊಂದರೆಯಾಗ್ಬಹುದು, ಭಾರತಕ್ಕೆ ಆಘಾತವಾಗ್ಬಹುದು ; ಕೋಡಿಮಠ ಶ್ರೀಗಳ ಭವಿಷ್ಯ

ಮೈಸೂರು: ರಾಜ್ಯ ಹಾಗೂ ರಾಷ್ಟ್ರದಲ್ಲಿ ಅಧಿಕಾರದಲ್ಲಿ ಇರುವವರಿಗೆ ತೊಂದರೆಯಾಗಬಹುದು ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಭುವಿಷ್ಯ ಹೇಳಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಹೇಳಿರುವ ಸ್ವಾಮೀಜಿ ರಾಜ್ಯ ಸರ್ಕಾರವೂ ಆಗಿರಬಹುದು, ಕೇಂದ್ರ ಸರ್ಕಾರವೂ ಆಗಬಹುದು. ಅಧಿಕಾರದ ಸ್ಥಾನದಲ್ಲಿರುವವರಿಗೆ ಆಪತ್ತು ಬರಬಹುದು ಎಂಬರ್ಥದಲ್ಲಿ ಹೇಳಿದ್ದಾರೆ. ಮೈಸೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅರಸನ ಅರಮನೆಗೆ … Continued

ಮುಂಬೈ | ಬಾಲಿವುಡ್‌ ನಟ-ನಿರ್ಮಾಪಕ ಧೀರಜಕುಮಾರ ನಿಧನ

ಮುಂಬೈ :  ಓಂ ನಮಃ ಶಿವಾಯ ಮತ್ತು ಅದಾಲತ್ ಎಂಬ ಜನಪ್ರಿಯ ದೂರದರ್ಶನ ಕಾರ್ಯಕ್ರಮಗಳನ್ನು ನಿರ್ಮಿಸಿದ ಹಿರಿಯ ನಟ-ನಿರ್ಮಾಪಕ ಧೀರಜಕುಮಾರ ಮಂಗಳವಾರ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಸ್ನೇಹಿತರೊಬ್ಬರು ತಿಳಿಸಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಧೀರಜಕುಮಾರ ತೀವ್ರ ನ್ಯುಮೋನಿಯಾದಿಂದ ಬಳಲುತ್ತಿದ್ದರು ಮತ್ತು ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ … Continued

ಬೆಂಗಳೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ಬೆಂಗಳೂರು : ಮೂಡುಬಿದಿರೆಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಇಬ್ಬರು ಕಾಲೇಜು ಉಪನ್ಯಾಸಕರು ಸೇರಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಉಪನ್ಯಾಸಕರಿಂದ ಬೆದರಿಕೆ ಹಾಗೂ ಬ್ಲ್ಯಾಕ್‌ ಮೇಲ್‌ ಹೆಚ್ಚಾದಾಗ ಸಂಕಷ್ಟ ತಾಳಲಾರದೆ ವಿದ್ಯಾರ್ಥಿನಿ ಪೋಷಕರಿಗೆ ತಿಳಿಸಿದ್ದಾರೆ. ನಂತರ ಪೋಷಕರು ಮಗಳನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು … Continued

ಹಾಸನ : ಚಿಕ್ಕತಿರುಪತಿ ಜಾತ್ರೆಯಲ್ಲಿ ಆಹಾರ ಸೇವಿಸಿ 50 ಭಕ್ತರು ಅಸ್ವಸ್ಥ

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ, ಚಿಕ್ಕತಿರುಪತಿ ಎಂದೇ ಖ್ಯಾತವಾಗಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಜಾತ್ರಾ (Jatre) ಮಹೋತ್ಸವದ ವೇಳೆ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಖಾಸಗಿ ಸಂಸ್ಥೆಯೊಂದರಿಂದ ವಿತರಿಸಲಾದ ಪ್ರಸಾದ ಸೇವಿಸಿದ 50ಕ್ಕೂ ಅಧಿಕ ಭಕ್ತರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಭಾನುವಾರ ರಾತ್ರಿ 7:30ರ ಸುಮಾರಿಗೆ ಸುಮಾರು 1,500 … Continued

ಗಂಗೊಳ್ಳಿ : ಸಮುದ್ರದಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ

ಉಡುಪಿ : ಸಮುದ್ರದಲ್ಲಿ ತೆರೆಗಳಿಗೆ ಸಿಲುಕಿ ನಾಡದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರದಲ್ಲಿ ಮಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ನಾಪತ್ತೆಯಾದ ಮೀನುಗಾರರನ್ನು ಸುರೇಶ ಖಾರ್ವಿ (45), ರೋಹಿತ್ ಖಾರ್ವಿ (38) ಹಾಗೂ ಜಗನ್ನಾಥ ಖಾರ್ವಿ(43) ಎಂದು ಗುರುತಿಸಲಾಗಿದೆ. ಮೀನುಗಾರರು ನಾಪತ್ತೆಯಾಗಿರುವ ಘಟನೆ … Continued