ಕರ್ನಾಟಕ ಬಂದ್‌ : ಶಾಲಾ-ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಸೆಪ್ಟಂಬರ್ 29ರಂದು, ಶುಕ್ರವಾರ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆಯು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ. ಇನ್ನು ಜಿಲ್ಲಾಧಿಕಾರಿಗಳು … Continued

ನಾಗಮಂಗಲ ಬಳಿ ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್​​​ಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ … Continued

ಗೋಕಾಕ: ಸೈನಿಕನಿಗೆ ಗುಂಡು ಹಾರಿಸಿದ ಇನ್ನೊಬ್ಬ ಸೈನಿಕ

ಬೆಳಗಾವಿ: ಹಣಕಾಸಿನ ವಿಚಾರಕ್ಕಾಗಿ ನಡೆದ ಜಗಳದಲ್ಲಿ ಒಬ್ಬ ಸೈನಿಕ ಇನ್ನೊಬ್ಬ ಸೈನಿಕನಿಗೆ ಗುಂಡು ಹಾರಿಸಿದ ಘಟನೆ ಜಿಲ್ಲೆಯ ಗೋಕಾಕ ತಾಲ್ಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರಾಜನಕಟ್ಟೆ ಗ್ರಾಮದವರಾದ ಯೋಧ ನಂಜುಂಡಿ ಬೂದಿಹಾಳ (32) ಗುಂಡು ಹಾರಿಸಿದ ಆರೋಪಿ. ಇದೇ ಊರಿನ ಬಸಪ್ಪ ಮೈಲಪ್ಪ ಬಂಬರ್ಗಾ (32) ಎಂಬವರು ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಬಸಪ್ಪ ಅವರ ಹೊಟ್ಟೆಗೆ … Continued

ಹುಕ್ಕೇರಿ : ಹಳ್ಳದ ನೀರಿನಲ್ಲಿ ಸಿಲುಕಿದ ಶಾಲಾ ಬಸ್‌ ; ತಪ್ಪಿದ ಅನಾಹುತ

ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಎಲಿಮುನ್ನೊಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಶಾಲಾ ಬಸ್ ನುಗ್ಗಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದ್ದು ಗ್ರಾಮಸ್ಥರು ಮಕ್ಕಳನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಧಾರಾಕಾರ ಮಳೆಯಿಂದಾಗಿ ಗ್ರಾಮದ ಹಳ್ಳದ ರಸ್ತೆಯ ಮೇಲೆ ಅಪಾರ ನೀರು ಹರಿಯುತ್ತಿತ್ತು. ಇದನ್ನು ಗಮನಿಸಿಯೂ … Continued

ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿ ರಚನೆ

ಬೆಂಗಳೂರು : ರಾಜ್ಯ ಸರ್ಕಾರ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದ್ದು, ಇದಕ್ಕಾಗಿ ಐದು ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಕನ್ನಡ ಪ್ರಥಮ ಭಾಷೆ, ಕನ್ನಡ ದ್ವಿತೀಯ ಭಾಷೆ, ಕನ್ನಡ ತೃತೀಯ ಭಾಷೆ, 6, 7ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 8, 9, 10ನೇ ತರಗತಿಯ ಸಮಾಜ ವಿಜ್ಞಾನಕ್ಕೆ … Continued

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ವ್ಯಾಪಾರ- ವಹಿವಾಟು ಸ್ತಬ್ಧ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಇಂದು, ಮಂಗಳವಾರ ಕರೆ ನೀಡಿದ್ದ ʼಬೆಂಗಳೂರು ಬಂದ್ʼಗೆ ರಾಜಧಾನಿ ಸ್ತಬ್ಧಗೊಂಡಿತು. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ಬೆಂಗಳೂರು ಬಂದ್ ಗೆ ಕರೆ ನೀಡಿತ್ತು. ಬಂದ್‌ಗೆ ೫೦ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬಹುತೇಕ … Continued

ಕರ್ನಾಟಕಕ್ಕೆ ತಪ್ಪದ ಸಂಕಷ್ಟ: ಅಕ್ಟೋಬರ್‌ 15ರ ವರೆಗೆ 3000 ಕ್ಯೂಸೆಕ್ ನೀರು ಬಿಡಲು ಸಿಡಬ್ಲ್ಯುಆರ್​ಸಿ ಶಿಫಾರಸು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದರ ವಿರುದ್ಧ ಬೆಂಗಳೂರಿನಲ್ಲಿ ಬಂದ್​​ ನಡೆಯುತ್ತಿರುವ ಮಧ್ಯೆಯೇ ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕ ಮತ್ತೆ ಶಾಕ್‌ ನೀಡಿದೆ. ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸೆಪ್ಟೆಂಬರ್ 28ರಿಂದ ತಮಿಳುನಾಡಿಗೆ ಮುಂದಿನ 18 ದಿನಗಳ ಕಾಲ ಪ್ರತಿ ದಿನ ಮತ್ತೆ 3 ಸಾವಿರ … Continued

ರಾಮದುರ್ಗ : ಬಸ್ ಪಲ್ಟಿ, 20ಕ್ಕೂ ಅಧಿಕ ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರಿಗೆ ಗಾಯ

ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ಇಂದು, ಮಂಗಳವಾರ ಬೆಳಗ್ಗೆ ಎನ್‌ ಡಬ್ಲ್ಯು ಕೆ ಆರ್‌ ಟಿ ಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯಗೊಂಡಿದ್ದಾರೆ. ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗ ಕಡೆ ಹೋಗುತ್ತಿದ್ದ ವೇಳೆ ಬಸ್ಸಿನ ಪ್ಲೇಟ್ ಕಟ್ … Continued

ಹಿರಿಯ ಹಾಸ್ಯನಟ ಬ್ಯಾಂಕ್‌ ಜನಾರ್ಧನಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ದನ (74 ವರ್ಷ) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು ಇರಿಸಿ, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಕುಟುಂಬದ ಸಮೀಪವರ್ತಿಗಳಿಂದ ತಿಳಿದುಬಂದಿದೆ. ಇವರಿಗೆ ಆಂಜಿಯೋಗ್ರಾಂ ಆಪರೇಷನ್‌ ಮಾಡುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ. ಕನ್ನಡ ಸಿನಿಮಾ,ಟಿವಿ ಗಳಲ್ಲಿ ಹಾಸ್ಯನಟನಾಗಿ … Continued

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ನಿಧನ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ ಅವರ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತ ಶಾರದಾ ಪಾಟೀಲ ಅವರು, ಮಾಜಿ ಶಾಸಕ ಕೈಲಾಸನಾಥ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶಾರದಾ ಪಾಟೀಲ ಅವರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲು ಕುಟಂಬಸ್ಥರು ತೀರ್ಮಾನಿಸಿದ್ದು, ಚಿಂಚೋಳಿಯಲ್ಲಿ … Continued