ಕಾರವಾರ: ಮನೆ ಕುಸಿದು ಓರ್ವ ಸಾವು, ಮತ್ತೊಬ್ಬ ಆಸ್ಪತ್ರೆಗೆ ದಾಖಲು

ಕಾರವಾರ:ಮನೆ ದುರಸ್ತಿ ವೇಳೆ ಗೋಡೆ ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿದ್ದು ಇನ್ನೊಬ್ಬ ಕಾರ್ಮಿಕ ಗಂಭೀರ ಗಾಯಗೊಂಡಿರುವ ಘಟನೆ ಕಾರವಾರದ ಸದಾಶಿವಘಡದ ವೈಶ್ಯಾವಾಡಾದಲ್ಲಿ ನಡೆದಿದೆ. ಕಾರವಾರದ ಸದಾಶಿವಗಡದ ವೈಶ್ಯಾವಾಡದಲ್ಲಿ ತುಳಸಿ ಬಾಯಿ ಎಂಬುವವರ ಮನೆ ದುರಸ್ತಿ ವೇಳೆ ಗೋಡೆ ಕುಸಿದಿದೆ. ಘಟನೆಯಲ್ಲಿ ಕಾರ್ಮಿಕ, ಬಾಗಲಕೋಟ ಮೂಲದ ಹುಚ್ಚಪ್ಪ (35) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತ ಗೋಡೆಯ ಅಡಿಯಲ್ಲೇ ಸಿಲುಕಿಕೊಂಡಿದ್ದ. ತಕ್ಷಣ … Continued

ಮುಂದಿನ ಸಿಎಂ ಎಂಬ ಹೇಳಿಕೆ ಕೊಡಬೇಡಿ: ಶಾಸಕರಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು : ಮುಂದಿನ ಮುಖ್ಯಮಂತ್ರಿ ಕುರಿತು ಇನ್ನು ಮುಂದೆ ಯಾವುದೇ ಬಹಿರಂಗ ಹೇಳಿಕೆ ನೀಡಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗ ಶಾಸಕರಿಗೆ ಮನವಿ ಮಾಡಿದ್ದಾರೆ. “ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ” ಎಂದು ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಈ … Continued

ಗಾಜಿಯಾಬಾದ್ ‘ಹಲ್ಲೆ’ ವಿಡಿಯೋ ಪ್ರಕರಣ: ಟ್ವಿಟ್ಟರ್‌ ಎಂಡಿ ವಿರುದ್ಧ ಯಾವುದೇ ಬಲವಂತದ ಕ್ರಮವಿಲ್ಲ ಎಂದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬೆಳಕಿಗೆ ಬಂದ ಘಜಿಯಾಬಾದ್ ಹಲ್ಲೆ ವಿಡಿಯೋಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ಮಧ್ಯಂತರ ಪರಿಹಾರ ನೀಡಿದೆ. ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಎಂದು ಹೈಕೋರ್ಟ್ ಗಾಜಿಯಾಬಾದ್ ಪೊಲೀಸರಿಗೆ ನಿರ್ದೇಶನ ನೀಡಿದೆ. ಗಾಜಿಯಾಬಾದ್ ಪೊಲೀಸರು ಟ್ವಿಟರ್ ಎಂಡಿ ಪರೀಕ್ಷಿಸಲು … Continued

ಕಾರವಾರ; ಕದಂಬ ನೌಕಾನೆಲೆಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಗುರುವಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನೌಕಾನೆಲೆಯ ಎರಡನೇ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆ ನಡೆಸಿದರು. ರಾಜನಾಥ್ ಸಿಂಗ್ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್‌ ಜೊತೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐಎನ್‌ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್‌ಗೆ ಆಗಮಿಸಿದರು. ರಕ್ಷಣಾ … Continued

ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲ 82 ವಾರ್ಡಗಳಲ್ಲೂ ಸ್ಪರ್ಧೆ: ಆಪ್‌ ಘೋಷಣೆ..!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಯಾವ ಸಂದರ್ಭದಲ್ಲಿ ನಡೆದರೂ ಆಮ್ ಆದ್ಮಿ ಪಕ್ಷ ಸಿದ್ಧವಿದೆ.ಈ ಸಲದ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸೇವಾ ಮನೋಭಾವವುಳ್ಳ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಕೆಲಸವನ್ನು ಅರವಿಂದ ಕೇಜ್ರಿವಾಲ್ ನಿರ್ದೇಶನದ ಮೇರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದರು. ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಕೃಷಿ ಕಾಯ್ದೆ ವಿರೋಧಿಸಿ ರಾಜಭವನದ ಮುಂದೆ ಜೂ.26ಕ್ಕೆ ರೈತರ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ರಾಜ ಭವನದ ಎದುರು ಜೂ.26ರಂದು ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಲಿದ್ದು, ಈ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ವಿದ್ಯುತ್ ಖಾಸಗೀಕರಣ ಮಾಡುವುದನ್ನು ವಿರೋಧಿಸಿ ದೆಹಲಿಯಲ್ಲಿ … Continued

ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಹಂಪಿ ಸ್ಮಾರಕಗಳು ಮುಕ್ತ

ಹಂಪಿ: ದೇಶದೆಲ್ಲೆಡೆ ಕೊರೊನಾ ಸೋಂಕು 2ನೇ ಅಲೆ ವ್ಯಾಪಕವಾಗಿ ಹರಡಿದ್ದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪ್ರವಾಸಿ ತಾಣಗಳನ್ನು ಮುಚ್ಚಲಾಗಿತ್ತು. ಕೊರೊನಾ ಸೋಂಕು ಪ್ರಕರಣಗಳು ಕಡಿಮೆಯಾದ ಕಾರಣ ಇದೀಗ ಹಂಪಿಯ ಸ್ಮಾರಕಗಳನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ವಿಶ್ವವಿಖ್ಯಾತ ಹಂಪಿ ಸ್ಮಾರಕಗಳನ್ನು ನೋಡಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹಿಂದೂ ಧಾರ್ಮಿಕ ದತ್ತಿ … Continued

ಬೆಂಗಳೂರು ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಬರ್ಬರ ಹತ್ಯೆ

ಬೆಂಗಳೂರು: ಛಲವಾದಿ ಪಾಳ್ಯದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನುಗುರುವಾರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ಕೋವಿಡ್‌ ಸಂದರ್ಭದಲ್ಲಿ ಅನ್ನದಾನ ಮಾಡಲು ಹೋಗಿದ್ದ ರೇಖಾ ಅವರನ್ನು ಹೊರಗೆ ಕರೆಯಿಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ ಮಾಡುವ ಮುನ್ನ ಕಚೇರಿ ಮುಂದಿದ್ದ ಸಿಸಿಟಿವಿ ಕ್ಯಾಮರಾಗಳನ್ನು ತಿರುಗಿಸಿ … Continued

ಯುವತಿಯ ಮನವಿ ನಿರಾಕರಿಸಿದ ಹೈಕೋರ್ಟ್;ಬಂಧನ ಭೀತಿಯಲ್ಲಿ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನನ್ನು ಬಂಧಿಸದಂತೆ ಎಸ್‌ಐಟಿಗೆ ನಿರ್ದೇಶಿಸಬೇಕು ಎಂದು ಕೋರಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಮನವಿಗೆ ಹೈಕೋರ್ಟ್‌ ನಿರಾಕರಿಸಿದೆ. ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ ರಮೇಶ್‌ ಜಾರಕಿಹೊಳಿ ಅವರು ಸದಾಶಿವನಗರ ಪೊಲೀಸ್‌ ಠಾಣೆಗೆ ದಾಖಲಿಸಿರುವ ದೂರು ರದ್ದುಪಡಿಸುವಂತೆ ಕೋರಿ ಯುವತಿ … Continued

ಸ್ನೇಹಿತ ಔಷಧ ಚುಚ್ಚಿದ ನಂತರ ಬೆಂಗಳೂರು ಹುಡುಗ ತೋಳು ಕಳೆದುಕೊಂಡ, ಜನ್ಮದಿನದ ಸಂತೋಷಕೂಟದಲ್ಲಿ ನಡೆಯಿತು ಘಟನೆ

ಬೆಂಗಳೂರು: 17 ವರ್ಷದ ಬಾಲಕ ಜನ್ಮದಿನದ ಸಂತೋಷಕೂಟಕ್ಕಾಗಿ ಬೆಂಗಳೂರಿನಲ್ಲಿ ಸ್ನೇಹಿತನನ್ನು ಭೇಟಿ ಮಾಡಿದ್ದ ಮತ್ತು ಕೆಲ ದಿನಗಳ ನಂತರ ವೈದ್ಯರು ಅವನ ಮುಂದೋಳಿನಲ್ಲಿ ವಿಷಕಾರಿ ವಸ್ತುವನ್ನು ಕಂಡುಕೊಂಡ ನಂತರ ಆತನ ತೋಳನ್ನು ಕತ್ತರಿಸಬೇಕಾಯಿತು. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಬಾಲಕನ ಕುಟುಂಬವು ಆರೋಪಿಗಳು ಅಪ್ರಾಪ್ತ ವಯಸ್ಕನ ಕೈಗೆ ಔಷಧಿಗಳನ್ನು ಚುಚ್ಚಿದ್ದಾರೆ ಎಂದು ಹೇಳಿಕೊಂಡಿದ್ದಾರೆ, ಇದು … Continued