ಹೊಸ ಧರ್ಮಗಳ ಉದಯ ಪಾಠ ಕೈಬಿಟ್ಟಿಲ್ಲ:ಸಚಿವರ ಸ್ಪಷ್ಟನೆ

ಬೆಂಗಳೂರು : ರಾಜ್ಯದ 6ನೇ ತರಗತಿಯ ಸಮಾಜ ವಿಜ್ಞಾನ ಭಾಗ-2ರಲ್ಲಿ ಹೊಸ ಧರ್ಮಗಳ ಉದಯ ಪಾಠ ಕೈಬಿಟ್ಟಿಲ್ಲ. ಅದರಲ್ಲಿದ್ದ ವಿವಾದಿತ ಅಂಶಗಳನ್ನು ಮಾತ್ರವೇ ತೆಗೆದಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು(ಆಡಳಿತ ಮತ್ತು ಅಭಿವೃದ್ಧಿ ಸಾರ್ವಜನಿಕ ಶಿಕ್ಷಣ … Continued

ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಕುರುಬರಿಗೆ ಹೆಚ್ಚು ಅನ್ಯಾಯ: ಎಚ್‌.ವಿಶ್ವನಾಥ ಆರೋಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಕುರುಬರಿಗೆ ಹೆಚ್ಚು ಅನ್ಯಾಯವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ ಅಭಿಪ್ರಾಯಪಟ್ಟಿದ್ದಾರೆ. ಸಿದ್ದರಾಮಯ್ಯ ಕುರುಬರ ಅಭಿವೃದ್ಧಿಗೆ ಏನೂ ಮಾಡಲಿಲ್ಲ. ಅವರ ಸಿಎಂ ಅವಧಿಯಲ್ಲಿಯೇ ಕುರುಬರಿಗೆ ಹೆಚ್ಚು ಅನ್ಯಾಯವಾಗಿದೆ. ಕೇವಲ ದರ್ಪ, ಅಹಂಕಾರದಿಂದ ಸರಕಾರ ನಡೆಸಲು ಸಾಧ್ಯವಿಲ್ಲ. ಸಿದ್ದು ತಮ್ಮ ಅಹಂಕಾರದಿಂದಲೇ ಅಧಿಕಾರ ಕಳೆದುಕೊಂಡರು. ಸಿದ್ದರಾಮಯ್ಯನನ್ನು ಉದ್ಧಾರ ಮಾಡಲು ಹೋಗಿ ನಾನು … Continued

ಫೆ.೨೩ರಂದು ಬೆಂಗಳೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿಭಟನೆ

ಬೆಂಗಳೂರು: ಶಿಕ್ಷಣ ಇಲಾಖೆಯ ದ್ವಂದ್ವ ನಿಲುವು, ಅವೈಜ್ಞಾನಿಕ ಧೋರಣೆಗಳನ್ನು ಖಂಡಿಸಿ ರಾಜ್ಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆ ವತಿಯಿಂದ ಫೆ.೨೩ರಂದು ಪ್ರತಿಭಟನಾ ರ್ಯಾಲಿ ಹಾಗೂ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಫೆ.೨೩ರಂದು ಬೆಳಗ್ಗೆ ೧೦ ಗಂಟೆಗೆ ನಗರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ರ್ಯಲಿ ನಡೆಯಲಿದ್ದು, ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿ … Continued

ರಾಜ್ಯ ಸರಕಾರಕ್ಕೆ ದುಡ್ಡು ಹೊಡೆಯೋದು ಮಾತ್ರ ಗೊತ್ತು: ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಬಿಜೆಪಿ ಸರಕಾರಕ್ಕೆ ದುಡ್ಡು ಹೊಡೆಯುವುದು ಬಿಟ್ಟರೆ ಬೇರೆ ಯಾವ ಕೆಲಸವೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆದರೆ ಸರಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಕೊರೊನಾ ಎರಡನೇ ಅಲೆ ಶುರುವಾಗುತ್ತದೆ ಎಂಬ ಅರಿವಿದ್ದರೂ ಮುಂಜಾಗ್ರತೆ ಕ್ರಮ ಕೈಗೊಳ್ಳುತ್ತಿಲ್ಲ. ಈಗಿನ ಸರ್ಕಾರಕ್ಕೆ ಗಂಭೀರತೆ … Continued

ಪಂಚಮಸಾಲಿ ಸಮುದಾಯ 2ಎ ಸೇರ್ಪಡೆಗೆ ವಿರೋಧವಿಲ್ಲ: ಸಚಿವ ಶೆಟ್ಟರ

ಬೆಂಗಳೂರು: ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವ ವಿಷಯದಲ್ಲಿ ತಾವು ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ, ಪಂಚಮಸಾಲಿ ಸಮುದಾಯ 2ಎ ಗೆ ಸೇರಬೇಕು ಎನ್ನುವ ನಿಲುವು ನನ್ನದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟ … Continued

ರಾಮ ಮಂದಿರಕ್ಕೆ ಒಂದು ಪೈಸೆಯನ್ನೂ ಕೊಡಬೇಡಿ

ಮಂಗಳೂರು: ರಾಮ ಮಂದಿರಕ್ಕೆ ಒಂದು ಪೈಸೆಯನ್ನೂ ಕೊಡಬೇಡಿ ಅದು ರಾಮ ಮಂದಿರವಲ್ಲ ಆರ್ ಎಸ್ ಎಸ್ ಮಂದಿರ ಎಂದು ಪಿಎಫ್ ಐ ಕಾರ್ಯದರ್ಶಿ ಅನಿಸ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಮಾತನಾಡಿದ ಅನೀಸ್ ಅಹ್ಮದ್, ದೇಶದಲ್ಲಿ ಶಾಂತಿ ಸ್ಥಾಪನೆಗೆ ಬಾಬ್ರಿ ಮಸೀದಿ ಜಾಗ ಕೊಡಿ ಎಂದರು. ಕೊಟ್ಟ ಮೇಲೆ ದೇಶದಲ್ಲಿ … Continued

ಮಾರ್ಚ್ 24 ರಿಂದ ಬೆಂಗಳೂರು ಚಲನಚಿತ್ರೋತ್ಸವ

ಬೆಂಗಳೂರು: ೧೩ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 24ರಿಂದ 31 ರವರೆಗೆ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿ “ಭಾರತೀಯ ಪ್ರದರ್ಶನ ಕಲೆಗಳ ಮಹತ್ವ” ವಿಷಯದ ಮೇಲೆ ಚಿತ್ರೋತ್ಸವವನ್ನು ಏರ್ಪಡಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು … Continued

ಕೊವಿಡ್‌ ನಿಯಮ ಪಾಲಿಸಿ, ಮಧ್ಯಾಹ್ನದ ಊಟ ತನ್ನಿ

ಬೆಂಗಳೂರು: ಇದೇ ತಿಂಗಳು 22ರಿಂದ 6 ರಿಂದ 8ನೇ ತರಗತಿಗಳ ಆರಂಭವಾಗುತ್ತಿರುವುದರಿಂದ ಮಕ್ಕಳ ಸಂಖ್ಯೆ ಶಾಲೆಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. 6ರಿಂದ 8ನೇ ತರಗತಿಗಳ ಆರಂಭಕ್ಕೆ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶುಕ್ರವಾರ ಸುತ್ತೋಲೆ ಹೊರಡಿಸಿದ್ದು, … Continued

ಕರ್ನಾಟಕ: ಕೋವಿಡ್‌ ಲಸಿಕೆ ನಂತರ ಒಬ್ಬ ಸಾವು, ಮೂವರು ಗಂಭೀರ

ಚಿಕ್ಕಬಳ್ಳಾಪುರ: ಕೊವಿಡ್‌ಗೆ ರೋಗನಿರೋಧಕ (ಎಇಎಫ್‌ಐ) ತೆಗೆದುಕೊಂಡ ನಂತರದ ಪ್ರತಿಕೂಲ ಘಟನೆಗಳ ನಂತರ ಜಯದೇವ ಆಸ್ಪತ್ರೆಗೆ ದಾಖಲಾದ ಚಿಕ್ಕಬಳ್ಳಾಪುರದ 56 ವರ್ಷದ ವಾಟರ್‌ಮ್ಯಾನ್ ಅವರನ್ನು ಫೆಬ್ರವರಿ 18ರಂದು ಬಿಡುಗಡೆ ಮಾಡಲಾಯಿತು. ಆದಾಗ್ಯೂ, ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತು, ಮತ್ತು ಆಸ್ಪತ್ರೆಗೆ ಒಯ್ಯುವಾಗ ಅವರು ನಿಧನರಾದರು. ಮತ್ತೊಂದು ಪ್ರಕರಣದಲ್ಲಿ, ಜನವರಿ 20ರಂದು ಲಸಿಕೆ … Continued

ರಾಜ್ಯದಲ್ಲಿ ೨ನೇ ಹಂತದ ಕೊರೊನಾ ಅಲೆ ಶಂಕೆ: ಕಟ್ಟೆಚ್ಚರಕ್ಕೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಕೊರೊನಾ ಅಲೆ ಆರಂಭವಾಗುವ ಸಾಧ್ಯತೆ ಇದೆ ಹೀಗಾಗಿ ಕೇರಳ, ಮಹಾರಾಷ್ಟ್ರದ ಗಡಿ ಜಿಲ್ಲೆ ಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ‌ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಪತ್ರ ಬರೆಯಲಾಗಿದೆ.‌ ನಾಳೆ ಗಡಿ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸರ್ಕಾರ ವಿಡಿಯೋ … Continued