ಅರುಣ್‌ ಸಿಂಗ್‌ ಭೇಟಿ ನಂತರ ಬಿಎಸ್‌ವೈ ನಾಯಕತ್ವ ಸದ್ಯಕ್ಕೆ ಗಟ್ಟಿ, ಆದರೆ ಸರ್ಕಾರದಲ್ಲಿ ಕುಟುಂಬದ ಹಸ್ತಕ್ಷೇಪಕ್ಕೆ ಕಡಿವಾಣ..?!

ರಘುಪತಿ ಯಾಜಿ ಹುಬ್ಬಳ್ಳಿ: ಕರ್ನಾಟಕದಲ್ಲಿ ರಾಜಕೀಯ ತಲ್ಲಣಕ್ಕೆ ಕಾರಣವಾದ ಹೈಕಮಾಂಡ್‌ ಹೇಳಿದ ತಕ್ಷಣವೇ ರಾಜೀನಾಮೆ ನೀಡುವೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಹಲವಾರು ನಾಯಕರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಯಡಿಯೂರಪ್ಪ ಹೇಳಿಕೆಯಿಂದ ಉದ್ಭವಿಸಿದ ಬಿಕ್ಕಟ್ಟು ತಿಳಿಗೊಳಿಸಲು ಯತ್ನಿಸಿದರು. ಇದರ ಬೆನ್ನಲ್ಲೇ ಕರ್ನಾಟಕಕ್ಕೆ ಮೂರು ದಿನಗಳ ಪ್ರವಾಸಕ್ಕೆ ಆಗಮಿಸಿದ ಕರ್ನಾಟಕದ ಬಿಜೆಪಿ ಉಸ್ತುವಾರಿ ಅರುಣ … Continued

ಕೋವಿಡ್‌ ಸಂಕಷ್ಟದಲ್ಲಿ ಸ್ವಿಮ್ಮಿಂಗ್‌ ಪೂಲ್‌ ನಿರ್ಮಾಣ : ರೋಹಿಣಿ ಸಿಂಧೂರಿ ನೈತಿಕ ಪ್ರಜ್ಞೆ ಪ್ರಶ್ನಿಸಿದ ಐಪಿಎಸ್‌ ಅಧಿಕಾರಿ ಡಿ.ರೂಪಾ

ಬೆಂಗಳೂರು: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಸರ್ಕಾರಿ ಮನೆಯಲ್ಲಿ ಕಟ್ಟಿಸಿಕೊಂಡಿದ್ದ ಈಜುಕೊಳ ಅಕ್ರಮ ಎಂಬ ತನಿಖಾ ವರದಿ ಬೆನ್ನಲ್ಲೇ ಸಾರ್ವಜನಿಕರ ಹಣದಲ್ಲಿ ಸ್ವಿಮ್ಮಿಂಗ್​ಪೂಲ್​ ಕಟ್ಟಿಸಿಕೊಂಡಿದ್ದಕ್ಕೆ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್​​​​​​ ಅಧಿಕಾರಿ ಡಿ. ರೂಪಾ ಕಿಡಿಕಾರಿದ್ದಾರೆ. ಅಸಮಾಧಾನ ವ್ಯಕ್ತಪಡಿಸಿ ಫೇಸ್​​ಬುಕ್​ನಲ್ಲಿ ಪೋಸ್ಟ್​​ ಹಾಕಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಈಜುಕೊಳ ನಿರ್ಮಾಣ ಪ್ರಕರಣ ರೋಹಿಣಿ ಸಿಂಧೂರಿ … Continued

ಗುಡ್‌ನ್ಯೂಸ್‌…ಮೋಟಾರು ವಾಹನಗಳ ಮೇಲೆ ಶೇ.50ರಷ್ಟು ತೆರಿಗೆ ವಿನಾಯ್ತಿ

ಬೆಂಗಳೂರು: ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಈ ಕುರಿತು ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಕುರಿತು ಪ್ರಕರಣೆ ಬಿಡುಗಡೆ ಮಾಡಿರುವ ಅವರು, ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು … Continued

ಅಂತರ್ ಮತೀಯ ಪ್ರೇಮಿಗಳ ಬರ್ಬರವಾಗಿ ಹತ್ಯೆ ಮಾಡಿದ ಯುವತಿ ಕುಟುಂಬ

ವಿಜಯಪುರ: ಹಿಂದೂ ಹುಡುಗನನ್ನ ಪ್ರೀತಿಸಿದ ಕಾರಣಕ್ಕೆ ಮುಸ್ಲಿಂ ಹುಡುಗಿಯ ತಂದೆ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮರ್ಯಾದ ಹತ್ಯೆ ಕಂಡು ಗುಮ್ಮಟನಗರಿ ಬೆಚ್ಚಿಬಿದ್ದಿದೆ. ಯುವಕನ ತಾಯಿ ಕಣ್ಣು ಮುಂದೆಯೇ ಇಡೀ ಘಟನೆ ನಡೆದಿದ್ದು, ಅನ್ಯ ಕೋಮಿನ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ಬಾಲಕಿಯ ತಂದೆ ಹಾಗೂ ಆಕೆಯ ಸಹೋದರ ಸೇರಿ ಮಗಳು ಹಾಗೂ ಆಕೆಯ ಪ್ರಿಯಕರನ್ನು ಭರ್ಬರವಾಗಿ … Continued

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‍ ವಿತರಣೆ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಉಂಟಾಗಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ವಿದ್ಯಾರ್ಥಿಗಳ ಕಲಿಕೆ ನಿರಾತಂಕವಾಗಿ ಮುಂದುವರೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಡಿಜಿಟಲ್ ಲರ್ನಿಂಗ್ ಯೋಜನೆ ಅನುಷ್ಠಾನಗೊಳಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪಹೇಳಿದ್ದಾರೆ. ಅಲ್ಲದೆ ಈ ವರ್ಷವೂ ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಎಲ್ಲ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಿದೆ ಎಂದು ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿಂದು … Continued

ಕರ್ನಾಟಕದಲ್ಲಿ ಬುಧವಾರ ದೈನಂದಿನ ಸೋಂಕು ತುಸು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಕೊರೊನಾ ಸೋಂಕು ಮಂಗಳವಾರಕ್ಕೆ ಹೋಲಿಸಿದರೆ ತುಸು ಏರಿಕೆಯಾಗಿದ್ದು ಸಾವಿನ ಸಂಖ್ಯೆ ಕಡಿಮೆಯಾಗಿದೆ. ರಾಜ್ಯದಲ್ಲಿ ಬುಧವಾರ 4436 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 123 ಮಂದಿ ಮೃತಪಟ್ಟಿದ್ದಾರೆ‌ .ಇದೇ ಸಮಯದಲ್ಲಿ 6455 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿ ಪ್ರಮಾಣ ಶೇ. 2.59 ಕ್ಕೆ ಹಾಗೂ ಸೋಂಕಿನ ಸಾವಿನ ಪ್ರಮಾಣ ಶೇ. … Continued

ಕೆನರಾ ಬ್ಯಾಂಕ್ ಎಟಿಎಂ ಬದಲಾಗುತ್ತದೆ ಎಂದು ಅನೇಕರಿಗೆ ಮೊಬೈಲ್‌ ಕರೆ: ಮೋಸಕ್ಕೆ ಯತ್ನ

ಕುಮಟಾ; ಕೆನರಾ ಬ್ಯಾಂಕ್-ಸಿಂಡಿಕೇಟ್ ಬ್ಯಾಂಕ್ ವಿಲೀನವಾಗುತ್ತಿದೆ. ಆದ್ದರಿಂದ ಈ ಹಿಂದಿನ ಎಟಿಎಂ ನಂಬರ್ ಬದಲಾಗುತ್ತದೆ. ನಿಮ್ಮ ಕೆನರಾ ಬ್ಯಾಂಕ್ ಎಟಿಎಂ ಕಾರ್ಡ ನಂಬರ್ ಮತ್ತು ಕೋಡ್ ನಂಬರ್ ತಿಳಿಸಿ ಇಲ್ಲದಿದ್ದರೆ ಕೆನರಾ ಬ್ಯಾಂಕಲ್ಲಿ ನಿಮ್ಮ ಎಟಿಎಂ ನಂಬರ್ ಬ್ಲಾಕ್ ಆಗುತ್ತದೆ ಎಂದು ಬುಧವಾರ ಕುಮಟಾಸೇರಿದಂತೆ ಉತ್ತರಕನ್ನಡ ಜಿಲ್ಲೆಯಾದ್ಯಂತ ಪೊನ್ ಕರೆಗಳು ಬರತೊಡಗಿದೆ. ಎಟಿಎಂ ನಂಬರ್ ತಪ್ಪು … Continued

ಮಹತ್ವದ ಸುದ್ದಿ..ಎಸ್‌ಎಸ್‌ಎಲ್‌ಸಿ ಪರೀಕ್ಷೆ -2021: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜುಲೈ ತಿಂಗಳಿನಲ್ಲಿ ನಡೆಯುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಪ್ರತಿಯೊಬ್ಬ ಶಿಕ್ಷಕರು ಇದರ ಪ್ರಕಾರ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಜೂ.28 ರಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‌ಪಿಗಳು, ಡಿಎಚ್‌ಒ, ಖಜಾನಾಧಿಕಾರಿಗಳು ಸೇರಿದಂತೆ … Continued

ಕಾಂಗ್ರೆಸ್ಸಿನಲ್ಲಿ ಮುಗಿಯದ ಮುಂದಿನ ಸಿಎಂ ವಿವಾದ: ಸಿದ್ದರಾಮಯ್ಯಗೆ ಹೈಕಮಾಂಡ್‌ ಬುಲಾವ್‌..?

ಬೆಂಗಳೂರು: ಇನ್ನು ಚುನಾವಣೆಯೇ ನಡೆದಿಲ್ಲ, ಆದರೂ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ವಿವಾದ ಕಾಂಗ್ರೆಸ್‌ನ್ಲಿ ಈಗಲೇ ತಾರಕಕ್ಕೇರಿದ್ದು, ಹೈಕಮಾಂಡ್‌ ಈ ಬಗ್ಗೆ ಮಾತನಾಡಬೇಡಿ ಎಂದು ಸೂಚನೆ ನೀಡಿದ್ದರೂ ಮುಂದುವರಿದಿದೆ. ಈ ಬೆನ್ನಲ್ಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದಾಮಯ್ಯ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್‌ ಬುಲಾವ್ ನೀಡಿದೆ ಎಮದು ಹೇಳಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ … Continued

ಮುಂದಿನ ಸಿಎಂ ಸಿದ್ದರಾಮಯ್ಯನವರೇ ಆಗಲಿ; ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಧಿಕ್ಕರಿಸಿ ಮತ್ತಿಬ್ಬರು ಶಾಸಕರ ಹೇಳಿಕೆ

ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದರೂ ಈಗ ಮತ್ತಿಬ್ಬರು ಶಾಸಕರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ. ಮುಂದಿನ ಮುಖ್ಯಮಂತ್ರಿಯನ್ನಾಗಿ ಸಿದ್ದರಾಮಯ್ಯ ಅವರನ್ನೇ ಮಾಡಬೇಕು ಎಂದು ಬೆಂಗಳೂರು ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಹರಿಹರ … Continued