ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ನಿಧನ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ ಅವರ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತ ಶಾರದಾ ಪಾಟೀಲ ಅವರು, ಮಾಜಿ ಶಾಸಕ ಕೈಲಾಸನಾಥ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶಾರದಾ ಪಾಟೀಲ ಅವರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲು ಕುಟಂಬಸ್ಥರು ತೀರ್ಮಾನಿಸಿದ್ದು, ಚಿಂಚೋಳಿಯಲ್ಲಿ … Continued

ಸೆಪ್ಟೆಂಬರ್‌ 28-29ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರ್ಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು (ಮಂಗಳವಾರ) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 29 ಮತ್ತು 30ರಂದು ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮಳೆಯಾಗಲಿದೆ ಎಂದು … Continued

ಮಧುಗಿರಿ ಬಳಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ಸಾವು

ತುಮಕೂರು : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನ ಆಕಾಶ (20), ಹೇಮಂತ(28) ಹಾಗೂ ಶಿವಕುಮಾರ ಎಂದು ಗುರುತಿಸಲಾಗಿದೆ. ಮತ್ತೋರ್ವ ಉಜ್ವಲ್ ಕೃಷ್ಣ ಎಂಬಾತ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಂಗಳೂರಿನಿಂದ ಪಾವಗಡ ಕಡೆ, … Continued

ಬೆಂಗಳೂರು ಬಂದ್‌ : ಶಾಲೆ-ಕಾಲೇಜಿಗಳಿಗೆ ರಜೆ ಘೋಷಣೆ

ಬೆಂಗಳೂರು: ಮಂಗಳವಾರ (ಸೆ.26) ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಪ್ರಕಟನೆ ನೀಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ ತಮಿಳುನಾಡಿಗೆ “ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ ಸಂಘಟನೆಗಳು ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಘೋಷಿಸಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದ … Continued

ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಜಾಮೀನು

ಬೆಂಗಳೂರು : ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಆರೋಪಿಯಾಗಿದ್ದ ಹಿರಿಯ ಪೊಲೀಸ್‌ ಅಧಿಕಾರಿ ಅಮೃತ ಪೌಲ್‌ ಅವರಿಗೆ ಸೋಮವಾರ ಕರ್ನಾಟಕ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿದೆ. 545 ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮಗಳ ಹಗರಣದ ಪ್ರಕರಣದಲ್ಲಿ 25ನೇ ಆರೋಪಿಯಾಗಿರುವ ಅಮೃತ್‌ ಪೌಲ್‌ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. … Continued

₹2000 ನೋಟು ಬದಲಾವಣೆಗೆ 5 ದಿನ ಮಾತ್ರ ಬಾಕಿ ಇದೆ…

ಮುಂಬೈ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ಮೇ 23ರಂದು ಘೋಷಿಸಿದ ಪ್ರಕಾರ ಎರಡು ಸಾವಿರ ಮುಖಬೆಲೆಯ ನೋಟುಗಳ ಬಳಕೆ ಸೆಪ್ಟೆಂಬರ್ 30ಕ್ಕೆ ಕೊನೆಗೊಳ್ಳಲಿದೆ. ಈ ನೋಟುಗಳನ್ನು ಬ್ಯಾಂಕಿಗೆ ಹಿಂದಿರುಗಿಸಲು ಇನ್ನು ಕೇವಲ ಐದು ದಿನಗಳು ಮಾತ್ರ ಬಾಕಿಯಿದೆ. ವರದಿಗಳ ಪ್ರಕಾರ, ದೇಶದಾದ್ಯಂತ ಇನ್ನೂ 2,400 ಕೋಟಿ ರೂ.ಗಳ ಮೌಲ್ಯದ ನೋಟುಗಳು ಚಲಾವಣೆಯಲ್ಲಿದೆ. ಸೆಪ್ಟೆಂಬರ್ 1ರವರೆಗೆ … Continued

ಸೆ. 26 ರಂದು ಬೆಂಗಳೂರು ಬಂದ್‌ : ಯಾವುದೆಲ್ಲ ಸ್ಥಗಿತವಾಗಲಿದೆ..?

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಸೆ.26ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೀಡಿರುವ ‘ಬೆಂಗಳೂರು ಬಂದ್‌’ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ರಾಜಧಾನಿ ಬಹುತೇಕ ಸ್ತಬ್ಧವಾಗುವ ಸಾಧ್ಯತೆಯಿದೆ. ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, 100 ಕ್ಕೂ ಹೆಚ್ಚು ಸಂಘಟನೆಗಳು, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನೌಕರರ ಸಂಘ, ಓಲಾ, ಉಬರ್‌ ಚಾಲಕರು ಮತ್ತು … Continued

ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ

ಬೆಂಗಳೂರು : ಕರ್ನಾಟಕ ಹಾಗೂ ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ … Continued

ವಂಚನೆ ಪ್ರಕರಣ: ಆರೋಪಿ ಚೈತ್ರಾ ಹೆಸರಿನೊಂದಿಗೆ ʼಕುಂದಾಪುರʼ ಬಳಸದಂತೆ ಕೋರ್ಟ್‌ ನಿರ್ಬಂಧ

ಬೆಂಗಳೂರು : ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಐದು ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಶನಿವಾ ಮಧ್ಯಂತರ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಮಾಧಾನದ ನೀಡಿದೆ. ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮತ್ತು ಮುಂದಿನ 5 ದಿನಗಳಲ್ಲಿ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಒಳನಾಡಿನಲ್ಲೂ ಸಾಕಷ್ಟು ವ್ಯಾಪಕ ಮಳೆಯಾಗುವ … Continued