ಅನೂಪ್‌ ಮಂಡಲ್‌ ಸಂಘಟನೆ ವಿರುದ್ಧ ನಾಳೆ ಜೈನ ಸಂಘಟನೆಗಳ ಪ್ರತಿಭಟನೆ

ಧಾರವಾಡ: ಸಮಾಜ ವಿರೋಧಿ ಮತ್ತು ಅರಾಜಕತಾವಾದಿ ಸಂಘಟನೆಯಾದ “ಅನೂಪ್ ಮಂಡಲ್” ಸಂಘಟನೆಯನ್ನು ಕಾನೂನುಬಾಹಿರ ಸಂಘಟನೆಯೆಂದು ಘೋಷಿಸಲು ರಾಷ್ಟ್ರವ್ಯಾಪಿ ಆಂದೋಲನ ಆಯೋಜಿಸಲು ಭಾರತೀಯ ಜೈನ್ ಸಂಘಟನೆ ಕರೆ ನೀಡಿದೆ. ಧಾರ್ಮಿಕ ವಿರೋಧಿ ಭಾವನೆಗಳನ್ನು ಪ್ರಚಾರ ಮಾಡಿ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ “ಅನೂಪ್ ಮಂಡಲ್” ಸಂಘಟನೆಯನ್ನು ನಿಷೇಧಿಸಲು ಆಗ್ರಹಿಸಿ ಜೂ.೨೩ರಂದು ದೇಶಾದ್ಯಂತ ಪ್ರತಿಭಟನೆ ನಡೆಯಲಿದೆ. . ಧಾರವಾಡ … Continued

ಮುಂದಿನ ಸಿಎಂ ಬಗ್ಗೆ ನಾವು ನಿರ್ಧರಿಸ್ತೇವೆ: ಸಿಎಂ ಚರ್ಚೆಗೆ ಬ್ರೇಕ್‌ ಹಾಕಿದ ಕಾಂಗ್ರೆಸ್‌ ಹೈಕಮಾಂಡ್‌

ಬೆಂಗಳೂರು:ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದ ಮಧ್ಯೆಯೇ ಈಗ ಕಾಂಗ್ರೆಸ್‌ ಹೈಕಮಾಂಡ್‌ ಇದಕ್ಕೆ ಬ್ರೇಕ್‌ ಹಾಕಿದೆ. ಮುಖ್ಯಮಂತ್ರಿ ಹುದ್ದೆ ಕುರಿತ ಸಂಘರ್ಷಕ್ಕೆ ಕೊನೆಹಾಡಬೇಕು. ಪಕ್ಷದ ಸಂಘಟನೆಗೆ ಒತ್ತುನೀಡಬೇಕು ಹಾಗೂ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಪ್ರಬಲ ಹೋರಾಟ ನಡೆಸಬೇಕು ಎಂದು ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಪಕ್ಷದ ಉಸ್ತುವಾರಿ ರಣದೀಪ್‌ … Continued

ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ನಿಯಮ ಸಡಿಲಿಸಿದ ಸರ್ಕಾರ: ಎಲ್ಲ ಅಂಗಡಿ ತೆರೆಯಲು ಅವಕಾಶ

ನವದೆಹಲಿ: ದಕ್ಷಿಣ ಕನ್ನಡ, ಹಾಸನ, ದಾವಣಗೆರೆ, ಮತ್ತು ಚಾಮರಾಜನಗರ ಈ ನಾಲ್ಕು ಜಿಲ್ಲೆಗಳಲ್ಲಿ ಕೋವಿಡ್ -19 ನಿರ್ಬಂಧಗಳನ್ನು ಕರ್ನಾಟಕ ಸರ್ಕಾರ ಮಂಗಳವಾರ ಸಡಿಲಿಸಿದೆ. ತಕ್ಷಣದ ಜಾರಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 1 ರ ವರೆಗೆ ಎಲ್ಲ ಅಂಗಡಿಗಳ (ಹವಾನಿಯಂತ್ರಿತ ಅಂಗಡಿಗಳು, ಹವಾನಿಯಂತ್ರಿತ ಶಾಪಿಂಗ್ ಸಂಕೀರ್ಣಗಳು ಮತ್ತು ಮಾಲ್‌ಗಳನ್ನು ಹೊರತುಪಡಿಸಿ) ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದು, ಇದು … Continued

ಮಹತ್ವದ ಸುದ್ದಿ.. ಶಾಲಾ-ಕಾಲೇಜು ಯಾವಾಗ ಆರಂಭ..?: ಮಾತನಾಡಿದ ಸಿಎಂ ಬಿಎಎಸ್‌ವೈ

ಬೆಂಗಳೂರು: ಕರ್ನಾಟದಲ್ಲಿ ಸದ್ಯಕ್ಕೆ 10ನೇ ತರಗತಿಯ ವರೆಗೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ.ರಾಜ್ಯದಲ್ಲಿ ಸದ್ಯಕ್ಕೆ ಕಾಲೇಜುಗಳನ್ನು ಮಾತ್ರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, 18 ವರ್ಷಕ್ಕೆ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಿದ ನಂತರ ಕಾಲೇಜುಗಳು ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಡಾ.ದೇವಿ ಪ್ರಸಾದ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ವರದಿ ಸಭೆಯ ಬಳಿಕ … Continued

ಮಹತ್ವದ ಸುದ್ದಿ… ಕರ್ನಾಟಕದಲ್ಲಿ ಶಾಲೆ ಆರಂಭಕ್ಕೆ ತಜ್ಞರ ಸಮಿತಿ ಏನು ಹೇಳಿದೆ..? ಇಲ್ಲಿದೆ ಮಾಹಿತಿ

ಬೆಂಗಳೂರು: ಕೋವಿಡ್‌ ಕಾರಣದಿಂದಾಗಿ ಕರ್ನಾಟಕದಲ್ಲಿ ಬಂದ್‌ ಆಗಿದ್ದ ಶಾಲೆಗಳ ಪುನರಾರಂಭ ಮಾಡುವ ಕುರಿತು ನಾರಾಯಣ ಹೃದಯಾಲಯದ ಡಾ.ದೇವಿಶಟ್ಟಿ ನೇತೃತ್ವದ ತಜ್ಞರ ಸಮಿತಿ ವರದಿ ಸಿದ್ಧಪಡಿಸಿದ್ದು, ಇಂದು (ಮಂಗಳವಾರ) ಮಧ್ಯಾಹ್ನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಲ್ಲಿಸಲಿದೆ. ತಜ್ಞರು ನೀಡುವ ವರದಿಯನ್ನು ಆಧರಿಸಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಂದು (ಮಂಗಳವಾರ) ತಜ್ಞರ ಸಮಿತಿ ಸದಸ್ಯರು ಮತ್ತು ಹಿರಿಯ ಸಚಿವರ … Continued

ನೈಸ್ ಕಂಪನಿ ವಿರುದ್ಧ ಆರೋಪ; ಮಾಜಿ ಪ್ರಧಾನಿ ದೇವೇಗೌಡರಿಗೆ 2 ಕೋಟಿ ರೂ. ದಂಡ!

ಬೆಂಗಳೂರು:ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸ್ (ನೈಸ್) ಲಿಮಿಟೆಡ್‌ಗೆ 2 ಕೋಟಿ ರೂ.ಗಳನ್ನು ಪಾವತಿಸುವಂತೆ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರಿಗೆ ನಿರ್ದೇಶನ ನೀಡಿದೆ. ನೈಸ್ ಕಂಪನಿ (NICE) ವಿರುದ್ಧ  ಆರೋಪ ಮಾಡಿದ್ದ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರು ತಮ್ಮ ಆರೋಪ ಸಾಬೀತುಪಡಿಸಲು ವಿಫಲರಾದ ಕಾರಣಕ್ಕೆ ನೈಸ್ … Continued

ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭ: ಆತುರದ ನಿರ್ಧಾರವಿಲ್ಲ

ಬೆಂಗಳೂರು: ಮಕ್ಕಳ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿರುವ ಸಚಿವ ಡಾ.ಕೆ.ಸುಧಾಕರ್, ಶಾಲಾ ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ತರಾತುರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾ ಶಾಲಾಕಾಲೇಜುಗಳನ್ನು ಆರಂಭಿಸಲು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಇದೊಂದು ಸೂಕ್ಷ್ಮ ವಿಷಯ. ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅವರ ಆರೋಗ್ಯವೂ ಅಷ್ಟೇ ಮುಖ್ಯ. ಹೀಗಾಗಿ ಯಾವುದೇ … Continued

10 ದಿನಗಳಲ್ಲಿ ಮೈಸೂರು ಜಿಲ್ಲೆಯಲ್ಲಿ 769 ಮಕ್ಕಳಿಗೆ ಕೋವಿಡ್ ಸೋಂಕು ದೃಢ..!

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ ಹೆಚ್ಚಿನ ಮಕ್ಕಳು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸುವ ಆತಂಕಕಾರಿ ಪ್ರವೃತ್ತಿ ಹೆಚ್ಚಾಗಿದೆ. ಮಕ್ಕಳನ್ನು ಹೊಡೆಯುವ ಸಾಧ್ಯತೆಯಿರುವ ಮೂರನೇ ಅಲೆಯು ಮಕ್ಕಳನ್ನು ಬಾಧಿಸಲಿದೆ ಎಂಬ ಭೀತಿ ಮಧ್ಯೆಯೇ ಇದು ಪೋಷಕರಿಗೆ ಆಘಾತವನ್ನುಂಟು ಮಾಡಿದೆ. ಟಿಎನ್‌ಎಸ್‌ಇಯೊಂದಿಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ಜೂನ್ 9 ಮತ್ತು 18 ರ … Continued

ಜನ ಪ್ರತಿನಿಧಿಗಳ ವಿಶೇಷ ಪೀಠಕ್ಕೆ ಜಾರಕಿಹೊಳಿ ಪ್ರಕರಣ ವರ್ಗಾವಣೆ

ಬೆಂಗಳೂರು; ಸಿಡಿ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಬ್ಲಾಕ್ ಮೇಲ್ ಪ್ರಕರಣದ ರದ್ದು ಕೋರಿ ಸಂತ್ರಸ್ತ ಯುವತಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಜನಪ್ರತಿನಿಧಿಗಳ ವಿಶೇಷ ಪೀಠಕ್ಕೆ ವರ್ಗಾವಣೆ ಮಾಡಿದೆ. ರಮೇಶ್ ಜಾರಕಿಹೊಳಿ ದಾಖಲಿಸಿರುವ ಬ್ಲಾಕ್ ಮೇಲ್ ಪ್ರಕರಣ ರದ್ದು ಕೋರಿ ಸಂತ್ರಸ್ತ ಯುವತಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ … Continued

ಯೋಗ ದಿನದ ಲಸಿಕೆ ಅಭಿಯಾನ:ಡೋಸ್‌ ನೀಡುವಲ್ಲಿ ಬೆಂಗಳೂರು ನಗರ ದೇಶದಲ್ಲೇ ಪ್ರಥಮ, ಕರ್ನಾಟಕಕ್ಕೆ ಎರಡನೇ ಸ್ಥಾನ

ಬೆಂಗಳೂರು: ವಿಶ್ವ ಯೋಗ ದಿನದಂದು ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕೊವಿಡ್ ಲಸಿಕೆ ಅಭಿಯಾನದಲ್ಲಿ ಲಸಿಕೆ ಪಡೆದುಕೊಂಡವರಲ್ಲಿ ಬೆಂಗಳೂರು ನಗರ ಜಿಲ್ಲೆ ದೇಶದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದೇ ದಿನ 2,09,256 ಡೋಸ್ ಕೊವಿಡ್ ಲಸಿಕೆ ಡೋಸ್‌ ನೀಡಲಾಗಿದೆ. ಈ ಮೂಲಕ ಬೆಂಗಳೂರು ದೇಶದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ ಮಧ್ಯ ಪ್ರದೇಶದ 2,01,339 ಡೋಸ್ … Continued