ಕಾಂಗ್ರೆಸ್‌ ಶಾಸಕರಾರೂ ಬಿಜೆಪಿಗೆ ಸೇರಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ಹಿಂದೆ ೧೦ ಜನ ಕಾಂಗ್ರೆಸ್‌ನಿಂದ ಬಿಜೆಪಿಗೆ ಬರುತ್ತಾರೆ ಎಂದು ಹೇಳುತ್ತಿದ್ದರು, ಈಗ ಐದು ಶಾಸಕರು ಬರಲಿದ್ದಾರೆ ಎಂದು ಹೇಳುತ್ತಿದ್ದಾರೆ. ಯಾವುದೇ ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರು … Continued

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ: ಸಿದ್ದರಾಮಯ್ಯ

ಸದ್ಯ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ವಿವಾದಿತವಾಗಿರುವುದರಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೇಳಲು ನನ್ನ ಬಳಿಯೂ ಬಂದಿದ್ದರು. ಆದರೆ ವಿವಾದಿತ ಮಂದಿರಕ್ಕೆ ಹಣ ಕೊಡುವುದಿಲ್ಲ ಎಂದು ಹೇಳಿ ಅವರನ್ನು ಹಿಂದೆ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಒಂದು ವೇಳೆ ಬೇರೆ … Continued

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ವರದಿ ನೀಡಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ

ಬೆಂಗಳೂರು: ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದಿಂದ ಹೋರಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದೆ. ಕರ್ನಾಟಕ ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗದಿಂದ ತಮ್ಮ ಜನಾಂಗವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಕೋರಿ ಮನವಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ. ರಾಜ್ಯದ ಪಂಚಮಸಾಲಿ ಜನಾಂಗದವರು … Continued

ಫೆ.22ರಿಂದ ಶಾಲೆಗಳಲ್ಲಿ ಪೂರ್ಣ ಪ್ರಮಾಣದ ತಗತಿ ಶುರು ಆದರೆ ಕೆಲಭಾಗದಲ್ಲಿ 6-7ನೇ ತರಗತಿ ಆರಂಭವಿಲ್ಲ

  ಬೆಂಗಳೂರು: ಕೋವಿಡ್​ ಮಾರ್ಗಸೂಚಿಯನ್ವಯ 9 ರಿಂದ ದ್ವಿತೀಯ ಪಿಯುಸಿ ವರೆಗೆ ತರಗತಿಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ, ಇದೀಗ ಉಳಿದ ತರಗತಿಗಳ ಆರಂಭಕ್ಕೆ ಅನಮತಿ ನೀಡಿದೆ. ಫೆ.22ರಿಂದ 6ರಿಂದ 8 ನೇ ತರಗತಿ ವರೆಗೆ ಪೂರ್ಣ ಪ್ರಮಾಣದಲ್ಲಿ ತರಗತಿ ಶುರುವಾಗಲಿದೆ. 1ರಿಂದ5 ನೇ ತರಗತಿ ವರೆಗೆ ವಿದ್ಯಾಗಮ ಪ್ರಾರಂಭವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.​ಸುರೇಶ್​ … Continued

ರಾಮಮಂದಿರ ನಿರ್ಮಾಣಕ್ಕೆ ಹಣ ಕೊಡದವರ ಮನೆಗಳ ಗುರುತು: ಎಚ್​ಡಿಕೆ ಆತಂಕ

ಬೆಂಗಳೂರು: ‘ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ ಮತ್ತು ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಏಕೆ ಹೀಗೆ ಮಾಡುತ್ತಿದ್ದಾರೆ ಎಂದು ಮಾತ್ರ ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುಲಿದೆ’ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ … Continued

ಯಡಿಯೂರಪ್ಪ ಕುಟುಂಬದ ಮಾರಿಷಿಸ್‌ ಪ್ರವಾಸದ ಗುಟ್ಟು ರಟ್ಟಾಗಬೇಕು: ಯತ್ನಾಳ

ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಇತ್ತೀಚಿಗೆ ಮಾರಿಷಿಸ್‌ಗೆ ವಿಮಾನದಲ್ಲಿ ಯಾಕೆ ಹೋಗಿತ್ತು? ಅಲ್ಲಿ ಏನು ಹಣದ ವ್ಯವಹಾರ ನಡೆದಿದೆ ಎಂಬುದು ರಾಜ್ಯದ ಜನರಿಗೆ ತಿಳಿಯಬೇಕು ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಸತ್ಯ ಸಂಗತಿ ಜನರ ಎದುರು ಬರಬೇಕು ಎಂದು ಆಗ್ರಹಿಸಿದರು. ಯಡಿಯೂರಪ್ಪ ಅವರ ಕುಟುಂಬದ ಸದಸ್ಯರೇ ಅವರಿಗೆ … Continued

ಎಸ್‌ಟಿ ಮೀಸಲಿಗೆ ಆಗ್ರಹಿಸಿ ಫೆ.೧೯ರಂದು ಕುರುಬರ ಪ್ರತಿಭಟನೆ

ಪರಿಶಿಷ್ಟ ಪಂಗಡ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ ಕುರುಬರು ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ ಹಾಗೂ ಸಮಾವೇಶ ನಡೆಸಿದ ಕುರುಬರು ಫೆ.೧೯ರಂದು ಬೆಂಗಳೂರಿನ ಮೌರ್ಯ ಹೊಟೇಲ್‌ ವೃತ್ತದ ಮಹಾತ್ಮ ಗಾಂಧಿ ಮೂರ್ತಿ ಎದುರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಕುಲಶಾಸ್ತ್ರ ಅಧ್ಯಯನದ ವರದಿಯನ್ನು ಪರಾಮರ್ಷಿಸಿ ಕೂಡಲೇ ಕೂಡಲೇ ಕೇಂದ್ರ ಸರಕಾರಕ್ಕೆ ಶಿಫಾರಸು ಕಳಿಸಬೇಕು … Continued

ಬಿಪಿಎಲ್‌ ನಿಯಮಾವಳಿಯಲ್ಲಿ ಬದಲಾವಣೆ ಮಾಡಿಲ್ಲ: ಸಚಿವ ಉಮೇಶ ಕತ್ತಿ

ಬೆಂಗಳೂರು: ಸರಕಾರ ಬಿಪಿಎಲ್‌ ಕಾರ್ಡ್‌ ನಿಯಮಾವಳಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ಟಿವಿ, ಬೈಕ್‌, ಫ್ರಿಡ್ಜ್‌ ಇರುವವರ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುವುದು ಎಂಬ ಸಚಿವರ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದಾರೆ. ಹಿಂದಿನ ಸರಕಾರಗಳು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನು … Continued

ಸಿದ್ದರಾಮಯ್ಯ ದೆಹಲಿ ದೌಡ್:‌ ನಾಳೆ ರಾಹುಲ್‌ ಗಾಂಧಿ ಭೇಟಿ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದು, ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ದಿಢೀರ್‌ ಆಗಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತಿರುವುದು ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಂಗಳವಾರ ಬೆಳಗ್ಗೆ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ರಾಹುಲ್ ಗಾಂಧಿ … Continued

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈಗ ಕೃಷಿ ಇಲಾಖೆ ಹೊಸ ರಾಯಭಾರಿ

ಬೆಂಗಳೂರು: ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಸ್ಯಾಂಡಲ್‌ವುಡ್‌ ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಚಾರ ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಪ್ರಸಿದ್ಧ ನಟರಾದ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಲಾಗಿದೆ. ಅವರು ಯಾವುದೇ … Continued