ನದಿಯಲ್ಲಿ ಕೊಚ್ಚಿಹೋಗಿ ಮರದಕೊಂಬೆ ಹಿಡಿದುಕೊಂಡಿದ್ದ ವ್ಯಕ್ತಿ ಪಾರು

ಬೆಳಗಾವಿ: ಉಕ್ಕಿ ಹರಿಯುತ್ತಿದ್ದ ವೇದಗಂಗಾ ನದಿ ದಾಟಲು ಹೋಗಿ ಆಯತಪ್ಪಿ ನದಿಗೆ ಬಿದ್ದು, ಸೇತುವೆಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಎನ್‍ಡಿಆರ್‍ಎಫ್ ತಂಡ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಪಾರು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಕ್ಕೋಳ-ಸಿದ್ನಾಳ ಗ್ರಾಮದ ಸಂಪರ್ಕ ಸೇತುವೆ ದಾಟುವಾಗ ನೀರಿನ ರಭಸಕ್ಕೆ ದಿಗ್ವಿಜಯ ಕುಲಕರ್ಣಿ ಎಂಬಾತ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಸೇತುವೆಯ ಬಳಿ … Continued

ಜೂನ್​ 21ರಿಂದ ಕೋವಿಡ್‌ ವ್ಯಾಕ್ಸಿನೇಶನ್​​​ ಮೇಳ: ಸಚಿವ ಡಾ. ಸುಧಾಕರ್

ಬೆಂಗಳೂರು: ಜೂನ್​ 21ರಂದು ಕೋವಿಡ್‌ ವ್ಯಾಕ್ಸಿನೇಶನ್​ ಮೇಳ ಆರಂಭಿಸಲಾಗುವುದು. 18ರಿಂದ 45ವರ್ಷದವರಿಗೆ ವ್ಯಾಕ್ಸಿನ್​ ಹಾಕುವ ಗುರಿಯಿದೆ. ಸೋಮವಾರ ಅಂದಾಜು 5-7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ ಹೇಳಿದರು. ಕೋವಿಡ್ ಸ್ಥಿತಿಗತಿ ಹಾಗೂ ನಿಯಂತ್ರಣ ಕ್ರಮಗಳ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲಸಿಕೆ ಎರಡು ಡೋಸ್ ಪಡೆದವರಿಗೆ … Continued

ರಾಜ್ಯದಲ್ಲಿ ಮೊದಲ ಬಾರಿಗೆ ರಾಜ್ಯ ಪ್ರವಾಹ ನಿರ್ವಹಣಾ ಕ್ರಿಯಾ ಯೋಜನೆ -2021 ಸಿದ್ಧ:  20 ಡಿಸಿಗಳೊಂದಿಗೆ ಸಿಎಂ ಬಿಎಸ್‌ವೈ ವಿಡಿಯೊ ಕಾನ್ಫರೆನ್ಸ್ 

ಬೆಂಗಳೂರು:ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈ ಬಗ್ಗೆ ಇಂದು (ಶನಿವಾರ) ಪ್ರವಾಹಕ್ಕೆ ಒಳಗಾಗುವ ಸಾಧ್ಯತೆ ಇರುವ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್  ಯಡಿಯೂರಪ್ಪ ವಿಡಿಯೊ ಕಾನ್ಫರೆನ್ಸ್ ನಡೆಸಿದರು. ರಾಜ್ಯ ಮಟ್ಟದಲ್ಲಿ ಅಪರ ಪ್ರಧಾನ ಕಾರ್ಯದರ್ಶಿಗಳು, ಕಂದಾಯ ಇಲಾಖೆ (ವಿ.ನಿ) ಹಾಗೂ ಅಭಿವೃದ್ಧಿ ಆಯುಕ್ತರು ಅಧ್ಯಕ್ಷತೆಯಲ್ಲಿ ಪ್ರತಿ 15 ದಿನಗಳಿಗೊಮ್ಮೆ ಋತುಮಾನ ಪರಿಸ್ಥಿತಿ … Continued

ಮಹಾರಾಷ್ಟ್ರ ಅಣೆಕಟ್ಟಿನಿಂದ ನೀರು ಬಿಡುವ ವಿಚಾರ: ಸಮನ್ವಯದಿಂದ ಉ.ಕರ್ನಾಟಕದಲ್ಲಿ ಪ್ರವಾಹ ತಪ್ಪಿಸಲು ಕರ್ನಾಟಕ-ಮಹಾರಾಷ್ಟ್ರ ಒಪ್ಪಿಗೆ

ಬೆಂಗಳೂರು: ಮಳೆಗಾಲದಲ್ಲಿ ಪ್ರವಾಹದ ಸಂದರ್ಭದಲ್ಲಿ ಮಹಾರಾಷ್ಟ್ರದ ಡ್ಯಾಂಗಳಿಂದ ನೀರು ಬಿಡುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಶನಿವಾರ ನಡೆದ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿ ಸಭೆ ನಡೆಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಗೆ ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ, ಗೃಹ ಸಚಿವ ಬಸವರಾಜ ಬೊಮ್ಮಾಯಿ‌, … Continued

ಕರಾವಳಿ ಜಿಲ್ಲೆಗಳಲ್ಲಿ ಇಂದು ರೆಡ್​ ಅಲರ್ಟ್​ ಘೋಷಣೆ; ಬೆಳಗಾವಿ ಜಿಲ್ಲೆಯ ನದಿ ತೀರ ಪ್ರದೇಗಳಲ್ಲಿ ಪ್ರವಾಹ ಭೀತಿ

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2-3 ದಿನಗಳ ಕಾಲ ಅತ್ಯಧಿಕ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮಲೆನಾಡಿನ ಹಲವೆಡೆ ಮರಗಳು ಧರೆಗುರುಳಿವೆ, ರಸ್ತೆ ಹಾಗೂ ಸೇತುವೆಗಳು ಜಲಾವೃತವಾಗಿವೆ. ಕೃಷಿ ಭೂಮಿಗಳು ಮಳೆ … Continued

ಕರ್ನಾಟಕಕ್ಕೆ 4.38 ಲಕ್ಷ ಡೋಸ್‌ ಕೋವಿಡ್‌ ಲಸಿಕೆ ಪೂರೈಕೆ

ಬೆಂಗಳೂರು: ರಾಜ್ಯಕ್ಕೆ ಶುಕ್ರವಾರ ಹೊಸದಾಗಿ 4.83 ಲಕ್ಷ ಡೋಸ್‌ ಕೋವಿಶೀಲ್ಡ್ ಲಸಿಕೆ ಬಂದಿದೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಸಚಿವ ಡಾ. ಕೆ ಸುಧಾಕರ್‌‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ರಾಜ್ಯಕ್ಕೆ ಶುಕ್ರವಾರ ಹೊಸದಾಗಿ ಆಗಮಿಸಿರುವ 4.83 ಲಕ್ಷ ಡೋಸ್ ಲಸಿಕೆಯ ಪೈಕಿ 3.15 ಲಕ್ಷ ಡೋಸ್ ಕೇಂದ್ರ ಸರ್ಕಾರ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ … Continued

ಕರ್ನಾಟಕದಲ್ಲಿ ಶುಕ್ರವಾರ 5,783 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ (ಶುಕ್ರವಾರ) ಅವಧಿಯಲ್ಲಿ 5,783 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಮಯದಲ್ಲಿಸೋಂಕಿನಿಂದ ಇಂದು 168 ಮಂದಿ ಮೃತಪಟ್ಟಿದ್ದಾರೆ ಹಾಗೂ 15,290 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್- 19 ಒಟ್ಟು ಸೋಂಕಿತರ ಸಂಖ್ಯೆ 2796121ಕ್ಕೆ ಏರಿದೆ. ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 2625447ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು … Continued

ಮೇಕೆದಾಟು ಯೋಜನೆಗೆ ಎನ್​ಜಿಟಿ ಹಸಿರು ನಿಶಾನೆ, ಇದು ನಮಗೆ ಶುಭ ಸುದ್ದಿ: ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ಸಿಕ್ಕಿದೆ. ಇದು ನಮಗೆ ಶುಭದಾಯಕ ವಿಚಾರ. ಕರ್ನಾಟಕದ ಪ್ರಕರಣವನ್ನು ಮುಕ್ತಾಯಗೊಳಿಸಿರುವ ರಾಷ್ಟ್ರೀಯ ಹಸಿರು ಪೀಠ (ಎನ್​ಜಿಟಿ) ಯೋಜನೆಗೆ ಹಸಿರು ನಿಶಾನೆ ತೋರಿದೆ ಎಂದು ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ತಿಳಿಸಿದರು. ಮೇಕೆದಾಟು ಸ್ಥಳ ಪರಿಶೀಲನೆಗಾಗಿ ಸಮಿತಿ ರಚಿಸಿ ದಕ್ಷಿಣ ಪೀಠ ನೀಡಿದ್ದ ಆದೇಶ ಪ್ರಶ್ನಿಸಿದ್ದ ಕರ್ನಾಟಕ ಸಲ್ಲಿಸಿದ್ದ … Continued

ಬ್ಲಾಕ್ ಫಂಗಸ್‌: ಹುಬ್ಬಳ್ಳಿ ಕಿಮ್ಸ್‌ನಲ್ಲಿ 116 ಜನರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ, 40 ರೋಗಿಗಳ ಶಸ್ತ್ರಚಿಕಿತ್ಸೆಗೆ ತಯಾರಿ  

ವರದಿ : ವೇಣುಗೋಪಾಲ.ಪಿ.ಎಂ. ಹುಬ್ಬಳ್ಳಿ: ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಕೋವಿಡ್ ಸಂದರ್ಭದಲ್ಲಿ ಜನರಿಗೆ ಸಂಜೀವಿನಿಯಾಗಿದೆ. ಕೊರೊನಾ ಎರಡನೇ ಅಲೆಯಲ್ಲಿ, ಕೋವಿಡ್ ಚಿಕಿತ್ಸೆ ಒಳಗಾದ ರೋಗಿಗಳಲ್ಲಿ ಬ್ಲಾಕ್ ಫಂಗಸ್ (ಮ್ಯೂಕಸ್ ಮೈಕ್ರೋಸಿಸ್) ಕಂಡು ಬಂದು ಆತಂಕ ಮೂಡಿಸಿದೆ. ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ದಾವಣಗೆರೆ, ಉತ್ತರ ಕನ್ನಡ ಜಿಲ್ಲೆಗಳಿಂದ ಬ್ಲಾಕ್ ಫಂಗಸ್ ರೋಗಿಗಳು … Continued

ಸಿಎಂ ಬಿಎಸ್‌ವೈ ನಾಯಕತ್ವದಲ್ಲಿ ಬದಲಾವಣೆ ಇಲ್ಲ; ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸಚಿವ ಅಶೋಕ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನಮ್ಮ ನಾಯಕರು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷ, ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. … Continued