ಎಸ್‌ಟಿಗೆ ಸೇರಿಸಲು ಒತ್ತಾಯಿಸಿ ಕುರುಬರ ಬಲಪ್ರದರ್ಶನ

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ರಾಜಧಾನಿಯಲ್ಲಿ ಕುರುಬ ಸಮುದಾಯದವರ ಬಲಪ್ರದರ್ಶನ ನಡೆಯಿತು. ಬೆಂಗಳೂರು ಹೊರವಲಯದ ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಸಮಾವೇಶದಲ್ಲಿ ಸಚಿವರಾದ ಕೆಎಸ್ ಈಶ್ವರಪ್ಪ, ಬೈರತಿ ಬಸವರಾಜ, ಎಂ ಟಿ ಬಿ ನಾಗರಾಜ್, ಆರ್. ಶಂಕರ್ ಸೇರಿದಂತೆ ಕಾಂಗ್ರೆಸ್ ಬಿಜೆಪಿ … Continued

ಸಾಹಿತ್ಯ ಕ್ಷೇತ್ರ ಸಮಾಜ ಪರಿವರ್ತನೆಗೆ ಪೂರಕ: ಕಾಗೇರಿ

ಸಿದ್ದಾಪುರ:ಸಾಹಿತ್ಯ ಕ್ಷೇತ್ರ ಸಮಾಜದ ಪರಿವರ್ತನೆಗೆ ಹಾಗೂ ಮೌಲ್ಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವವರ ಬಗ್ಗೆ ಯಾವತ್ತೂ ಗೌರವವಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು ಪಟ್ಟಣದ ಬಾಲಭವನದಲ್ಲಿ ನಡೆದ ಗಂಗಾಧರ ಕೊಳಗಿಯವರ ಯಾನ- ಅಲೆಮಾರಿಯ ಅನುಭವ ಕಥನ ಕೃತಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಹಿತ್ಯ … Continued

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತರಿಂದ ೧ ಕೋಟಿ ರೂ.ದೇಣಿಗೆ

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯ ಕೈಜೋಡಿಸಿದ್ದು, ಒಂದು ಕೋಟಿ ರೂ.ಗಳಿಗೂ  ಹೆಚ್ಚು ದೇಣಿಗೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ   ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ  ಶಿಕ್ಷಣ ತಜ್ಞರು, ಉದ್ಯಮಿಗಳು,ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿ ರಾಮ ಮಂದಿರ ನಿರ್ಮಾಣಕ್ಕೆ ತಮ್ಮ … Continued

ಶ್ರೀರಾಮ ಮಂದಿರ ನಿಧಿ ಸಮರ್ಪಣೆ: ಡಿಕೆಶಿ ಭೇಟಿ ಮಾಡಿದ ವಿಎಚ್‌ಪಿ ಪ್ರಮುಖರು

ಬೆಂಗಳೂರು: ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ವಿಶ್ವ ಹಿಂದೂ ಪರಿಷತ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾದರು. ವಿಎಚ್‌ಪಿ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ .ಶಿವಕುಮಾರ ಮತ್ತು ಸಂಸದ ಡಿ.ಕೆ ಸುರೇಶ ಅವರನ್ನು ಭೇಟಿಯಾದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿದ ವಿಶ್ವ ಹಿಂದು ಪರಿಷತ್ತಿನ … Continued

ಕಾಂಗ್ರೆಸ್‌ ಹೆಗಲ ಮೇಲೆ ಬಂದೂಕಿಟ್ಟು ಸ್ವಪಕ್ಷೀಯರಿಗೆ ಗುರಿ ಇಟ್ಟ ಬಿಎಸ್‌ವೈ

ಕಾಂಗ್ರೆಸ್‌ ಅನ್ನು ರಾಜ್ಯದಲ್ಲಿ ಶಾಶ್ವತವಾಗಿ ಪ್ರತಿಪಕ್ಷದಲ್ಲಿರುವಂತೆ ಮಾಡುತ್ತೇನೆ… ಮುಂದಿನ ಚುನಾವಣೆಯಲ್ಲಿ ೧೫೦ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರಕ್ಕೆ ತರುತ್ತೇನೆ. ನಾನು ಅನೇಕ ಸವಾಲುಗಳನ್ನು ಎದುರಿಸಿ, ಮೆಟ್ಟಿನಿಂತು ಮುಖ್ಯಮಂತ್ರಿಯಾಗಿದ್ದೇನೆ…ಕಳೆದ ೬ ತಿಂಗಳಿನಿಂದ ಪ್ರತಿಪಕ್ಷದ ನಾಯಕರು ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ಈಗ ರಾಜೀನಾಮೆ ಕೊಡ್ತಾರೆ, ಆಗ ರಾಜೀನಾಮೆ ಕೊಡ್ತಾರೆ ಎಂದು ಹೇಳುತ್ತಲೇ ಬಂದಿದ್ದಾರೆ… ಆದರೆ ಪ್ರಧಾನಿ ಮೋದಿ ಹಾಗೂ … Continued

ಸಭಾಪತಿ ಸ್ಥಾನಕ್ಕೆ ಸೋಮವಾರ ಹೊರಟ್ಟಿ ನಾಮಪತ್ರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸಲು ಸಮಯ ನಿಗದಿಪಡಿಸಲಾಗಿದೆ ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸ್ವತಃ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮುಹೂರ್ತ ನಿಗದಿ … Continued

ಜನರಲ್ ತಿಮ್ಮಯ್ಯ ವಸ್ತುಸಂಗ್ರಹಾಲಯ ಲೋಕಾರ್ಪಣೆ

ಮಡಿಕೇರಿ :ಜನರಲ್ ಕೆ.ಎಸ್ ತಿಮಯ್ಯ ವಸ್ತುಸಂಗ್ರಹಾಲಯ ಸೇನಾಪಡೆಯ ಅತ್ಯುತ್ತಮ ವೀರ ಸೇನಾನಿಯ ಸೇವೆ ಮತ್ತು ಕೊಡುಗೆಯನ್ನು ಸಂರಕ್ಷಿಸುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು. ಶನಿವಾರ ಮಡಿಕೇರಿಯಲ್ಲಿ ಜನರಲ್ ಕೆ.ಎಸ್ ತಿಮ್ಮಯ್ಯ ವಸ್ತುಸಂಗ್ರಹಾಲಯ ‘ಸನ್ನಿಸೈಡ್’ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, .ಜನರಲ್ ತಿಮಯ್ಯ ಅವರ ನಿವಾಸ ‘ಸನ್ನಿ ಸೈಡ್’ನಲ್ಲಿರುವ ಸ್ಮರಣಿಕೆಗಳು ನಮ್ಮ ಕೆಚ್ಚೆದೆಯ ಸೇನಾಪಡೆಗಳ ವೈಶಿಷ್ಟ್ಯಗಳನ್ನು … Continued

ಫೆ.20ರ ವರೆಗೆ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ದಾಖಲಾತಿಗೆ ಸೂಚನೆ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ತರಗತಿಗಳ ದಾಖಲಾತಿಯನ್ನು ಫೆ.20ರ ವರೆಗೆ ವಿಸ್ತರಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು ಫೆ. 1ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿವೆ. 9ರಿಂದ 12ನೇ ತರಗತಿವರೆಗೆ ಭೌತಿಕ ತರಗತಿಗಳು ಆರಂಭವಾಗಿದ್ದರೆ, ಉಳಿದ … Continued

ರೈತರು ಎಪಿಎಂಸಿ ಕೈಗೊಂಬೆ ಆಗುವುದು ಬೇಡ

ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ಇನ್ನೂ ರೈತನಿಗೆ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಆದರೆ ಈಗ ರೈತ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಿದ್ದೇವೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಬೆಂಬಲ ಬೆಲೆ ನೀಡಿದ್ದು ಮೋದಿ ಸರ್ಕಾರ. ರೈತರು ಎಪಿಎಂಸಿ ಕೈಗೊಂಬೆ ಆಗುವುದು ಬೇಡ ಎಂಬ … Continued

ಪಂಚಮಸಾಲಿಗೆ 2ಎ ಮೀಸಲು: ವರದಿ ಬಂದ ನಂತರ ಕ್ರಮ

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಂದುಳಿದ ವರ್ಗಗಳ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಿಕೊಟ್ಟಿದ್ದಾರೆ. ಆಯೋಗದಿಂದ ಶಿಫಾರಸು ಬಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು … Continued