ಭಾರಿ ಮಳೆ : ಇಂದು (ಜೂನ್ 12) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.

ಭಾರಿ ಮಳೆ ; ಇಂದು (ಜೂನ್ 12) ಉತ್ತರ ಕನ್ನಡ ಜಿಲ್ಲೆ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದರಲ್ಲಿಯೂ ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಗುರುವಾರ (ಜೂನ್ 12) ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜೂನ್ 12) ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ … Continued

ಅತಿ ಭಾರಿ ಮಳೆ ಮುನ್ಸೂಚನೆ, ರೆಡ್‌ ಅಲರ್ಟ್‌ ಘೋಷಣೆ ; ಇಂದು ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ಗುರುವಾರ (ಜೂನ್ 12) ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜೂನ್ 12) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ … Continued

ಕರ್ನಾಟಕದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

ಬೆಂಗಳೂರು: ಬಿಜೆಪಿಯು ಕರ್ನಾಟಕ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ಈ ಬಗ್ಗೆ ಬಿಜೆಪಿ ರಾಜ್ಯ ಚುನಾವಣಾ ಅಧಿಕಾರಿಗಳು ಬುಧವಾರ ಪ್ರಕಟಣೆ ಹೊರಡಿಸಿದ್ದಾರೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಬಾಕಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು … Continued

ಕರ್ನಾಟಕದಲ್ಲಿ 24 ಗಂಟೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; 9 ಜಿಲ್ಲೆಗಳಿಗೆ ರೆಡ್ ಅಲರ್ಟ್​, ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ದಿನ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳು ಪ್ರದೇಶಗಳು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಜೂ.12ರಿಂದ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, 9 ಜಿಲ್ಲೆಗಳಿಗೆ ಎರಡು ದಿನ ರೆಡ್‌ ಅಲರ್ಟ್‌ ಘೋಷಣೆ … Continued

ಬಳ್ಳಾರಿ ಜಿಲ್ಲೆಯ ಸಂಸದ, ಇಬ್ಬರು ಶಾಸಕರ ಮನೆ ಮೇಲೆ ಇ.ಡಿ ದಾಳಿ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ( ಇ.ಡಿ)ವು ಬುಧವಾರ ಬೆಳಗ್ಗೆ ದಾಳಿ ನಡೆಸಿದೆಎಂದು ವರದಿಯಾಗಿದೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆರಬಹುದು ಎಂದು ಭಾವಿಸಲಾಗಿದೆ. ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ, ಶಾಸಕ ಬಿ. … Continued

ಚಾಮರಾಜನಗರ | ಹುಲಿ ದಾಳಿಗೆ ಮಹಿಳೆ ಸಾವು, ಯುವಕನಿಗೆ ಗಾಯ

ಚಾಮರಾಜನಗರ: ಕೆಲವೇ ತಾಸುಗಳ ಅಂತರದಲ್ಲಿ ಇಬ್ಬರ ಮೇಲೆ ಹುಲಿ ದಾಳಿ ಮಾಡಿದೆ. ಹುಲಿ ದಾಳಿಯಲ್ಲಿ ಮಹಿಳೆ ಸಾವಿಗೀಡಾಗಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಚಾಮರಾಜನಗರ ತಾಲೂಕಿನ ಬೇಡಗುಳಿಯಲ್ಲಿ ನಡೆದಿದೆ. ಬೇಡಗುಳಿಯ ರಂಗಮ್ಮ ಎಂಬ ವೃದ್ಧೆ ಹುಲಿ ದಾಳಿಗೆ ಅಸುನೀಗಿದ್ದಾರೆ. ರಂಗಮ್ಮ ಎಂಬವರ ಮೇಲೆ ಮಂಗಳವಾರ ಬೆಳಗ್ಗೆ ಹುಲಿ ದಾಳಿ ಮಾಡಿದ್ದು ತಲೆ ಮತ್ತು … Continued

ಕುಮಟಾ | ವಕೀಲರ ಸಂಘದ ಮಾಜಿ ಅಧ್ಯಕ್ಷ ಆರ್.ಎ. ಹೆಗಡೆ ನಿಧನ

ಕುಮಟಾ : ಖ್ಯಾತ ವಕೀಲರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎ. ಹೆಗಡೆ (84)ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಆರ್.ಎ. ಹೆಗಡೆ ಅವರು ಅನೇಕ ವರ್ಷಗಳ ಕಾಲ ಮುಂಬೈ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ ನಂತರ ಕುಮಟಾ ನ್ಯಾಯಾಲಯದಲ್ಲಿ ಸುಧೀರ್ಗ ಕಾಲ ವಕೀಲರಾಗಿ, ಕುಮಟಾ ವಕೀಲರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. … Continued

ಖಾನಾಪುರ | ಕುಸಮಳಿ ಸನಿಹ ಮಲಪ್ರಭಾ ನದಿಯ ಸೇತುವೆ ಬಳಿ ಭೂ ಕುಸಿತ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆರಂಭವಾಗುತ್ತಿದ್ದಂತೆ ಭೂ ಕುಸಿತಗಳು ಕಂಡು ಬಂದಿವೆ. ಖಾನಾಪುರ ತಾಲೂಕು ಕುಸಮಳಿ ಬಳಿ ಮಲಪ್ರಭಾ ನದಿಗೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಬಳಿ ನೀರಿನ ಹರಿವು ಹೆಚ್ಚಿದೆ. ಇದರಿಂದ ಸೇತುವೆಯ ರಸ್ತೆಯ ಮೇಲೆ ಭೂಕುಸಿತ ಕಂಡು ಬಂದಿದೆ. ಹೀಗಾಗಿ ಭಾನುವಾರ ಸಂಜೆಯಿಂದ ಈ ಮಾರ್ಗವಾಗಿ ವಾಹನ ಸಂಚಾರವನ್ನು ತಡೆಹಿಡಿಯಲಾಗಿದೆ. ಬೆಳಗಾವಿ ಮತ್ತು … Continued

ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ

ಬೆಳಗಾವಿ : ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಲಕ್ಷ್ಮಣ ಸವದಿ ಅವರು ಅಥಣಿಯಿಂದ ಗೋಕಾಕ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ … Continued