ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಘೋಷಣೆ ಬೆನ್ನಲ್ಲೇ ಇನ್ಮುಂದೆ ಸಿನಿಮಾಗಳಲ್ಲಿ ನಟಿಸಲ್ಲ ಅಂದಿದ್ಯಾಕೆ ನಟ ಅನಂತ ನಾಗ್ ?

ಬೆಂಗಳೂರು: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಕನ್ನಡದ ಹಿರಿಯ ನಟ ಅನಂತ ನಾಗ್ (Anant Nag) ಅವರು ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ (Dadasaheb Phalke Award) ಬಂದ ಹಿನ್ನೆಲೆಯಲ್ಲಿ ಎನ್‌ಡಿಟಿವಿಯ ದೀಪಕ ಬೋಪಣ್ಣ ಅವರಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ 78 ವರ್ಷದ ಅನಂತ ನಾಗ್, … Continued

ಕಲ್ಲು ಕ್ವಾರಿ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ.ದಂಡ

ಹಾವೇರಿ: ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸಿದ್ದ ಆರೋಪದಡಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯದ ಸಕ್ಕರೆ  ಹಾಗೂ ಜವಳಿ ಕಾತೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಸುಮಾರು ₹3 ಕೋಟಿ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹುಣಸಿಕಟ್ಟಿ ಬಳಿಯಲ್ಲಿ ಕ್ವಾರಿ ನಡೆಸಲು ರುದ್ರಪ್ಪ ಲಮಾಣಿ ಅವರು … Continued

ಭಟ್ಕಳ ; ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ; ದೂರು – ಪ್ರತಿ ದೂರು ದಾಖಲು

ಭಟ್ಕಳ : ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ; ದೂರು – ಪ್ರತಿ ದೂರು ದಾಖಲು ಕಾರವಾರ: ಜಿಲ್ಲೆಯ ಭಟ್ಕಳದ ತಲಾಂದದಲ್ಲಿ ಬುಧವಾರ ತಡರಾತ್ರಿ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಕರಣದ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. … Continued

ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದಿದ್ದ ವ್ಯಕ್ತಿ ಸಾವು

ಶಿವಮೊಗ್ಗ: ಅಡಿಕೆ ಬೇಯಿಸುವ ವೇಳೆ ಆಕಸ್ಮಿಕವಾಗಿ ಕುದಿಯುತ್ತಿದ್ದ ಚೊಗರಿನ ಹಂಡೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ನಗರದ ವಡ್ಡಿನಕೊಪ್ಪದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ರುದ್ರಪ್ಪ ಅವರ ಪುತ್ರ ಜೇನುಕುಮಾರ ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್‌ 8ರಂದು ಮನೆ ಸಮೀಪದ ಶೆಡ್‌ನಲ್ಲಿ ಅಡಿಕೆ ಬೇಯಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂದ ಅಡಿಕೆಯನ್ನು ಹಂಡೆಯಿಂದ ಹೊರತೆಗೆದ ಬಳಿಕ … Continued

ರೇಷನ್ ಕಾರ್ಡುದಾರರಿಗೆ ಗುಡ್ ನ್ಯೂಸ್: ರೇಷನ್‌ ಕಾರ್ಡ್‌ ಇ ಕೆವೈಸಿ ಗಡುವು ವಿಸ್ತರಿಸಿದ ಸರ್ಕಾರ

ಬೆಂಗಳೂರು: ರೇಷನ್‌ ಕಾರ್ಡ್‌ ಇ ಕೆವೈಸಿಗೆ ಸಂಬಂಧಿಸಿದಂತೆ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ಇ ಕೆವೈಸಿಗೆ ನಿಗದಿಪಡಿಸಿದ್ದ ಗಡುವನ್ನು ಅಕ್ಟೋಬರ್ 20ವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಇ ಕೆವೈಸಿ ಆಗದೇ ಇದ್ದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ. ಇದುವರೆಗೆ ರೇಷನ್‌ ಕಾರ್ಡ್‌ ಇ ಕೆವೈಸಿ ಮಾಡಿಸಲು ಸೆಪ್ಟೆಂಬರ್‌ … Continued

ಮತ್ತೆ 23 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದ ಸರ್ಕಾರ ; ಒಟ್ಟು ತಾಲೂಕುಗಳ ಸಂಖ್ಯೆ 124ಕ್ಕೆ ಏರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಗುರುವಾರ ಮತ್ತೆ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಹೀಗಾಗಿ ಈವರೆಗೆ ಬರಪೀಡಿತ ಎಂದು ಘೋಷಿಸಲಾದ ಒಟ್ಟು ತಾಲೂಕುಗಳ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು (KSNDMC) ನಡೆಸಿದ ಸಮಗ್ರ ಮೌಲ್ಯಮಾಪನ ಮತ್ತು ಸ್ಥಳ ಪರಿಶೀಲನೆ (ground-truthing) ಆಧಾರದ ಮೇಲೆ ಕಂದಾಯ ಇಲಾಖೆಯು (ವಿಪತ್ತು ನಿರ್ವಹಣೆ) … Continued

ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ದೊಡ್ಡ ರಿಲೀಫ್: ಬ್ಯಾಂಕ್ ಸಾಲ ಮರುಪಾವತಿಗೆ ವಿನಾಯಿತಿ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂದುವರಿದಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿ (ಎಸ್‌ಎಲ್‌ಬಿಸಿ)ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ವಿಶೇಷ ಪರಿಹಾರ ಯೋಜನೆಯನ್ನು ಪ್ರಕಟಿಸಿದೆ. ಬರಪೀಡಿತ ರೈತ ಸಾಲಗಾರರಿಗೆ ಪರಿಹಾರ ಕ್ರಮಗಳನ್ನು ಜಾರಿಗೊಳಿಸುವ ಕುರಿತು ಸೆಪ್ಟೆಂಬರ್ 10ರಂದು ವಿಶೇಷ … Continued

ಚನ್ನಮ್ಮನ ಕಿತ್ತೂರು : ಗ್ರಾಪಂ ಕಚೇರಿಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ, ಮಗಳ ಹತ್ಯೆ

ಬೆಳಗಾವಿ: ಕೌಟುಂಬಿಕ ಆಸ್ತಿ ಕಲಹದಿಂದ ಗ್ರಾಮ ಪಂಚಾಯತ ಕಚೇರಿಯೊಳಗೆ ನಿವೃತ್ತ ಯೋಧ ಹಾಗೂ ಅವರ ಮಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮತ್ತೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅವರಾದಿ ಗ್ರಾಮದ ನಿವಾಸಿ, ಮಾಜಿ ಸೈನಿಕ ರುದ್ರಪ್ಪ … Continued

ರೇಣುಕಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ

ಬೆಂಗಳೂರು : ನಟ ದರ್ಶನ್‌ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್‌ ರಾವ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಬುಧವಾರ ಮತ್ತೆ ಹೊಸದಾಗಿ ಆದೇಶ ಮಾಡಿದೆ. ಪ್ರಕರಣದಲ್ಲಿ ಕ್ಷಮಾದಾನ ನೀಡಬೇಕು ಹಾಗೂ ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಕೋರಿ ಪ್ರದೋಷ್‌ … Continued

ವೀಸಾ ಅವಧಿ ಮುಗಿದರೂ ವಾಸ: ಇಸ್ರೇಲ್ ಪ್ರಜೆ ವಶಕ್ಕೆ

ಕಾರವಾರ : ವೀಸಾ ಅವಧಿ ಮುಕ್ತಾಯಗೊಂಡಿದ್ದರೂ ಭಾರತದಲ್ಲೇ ಉಳಿದುಕೊಂಡಿದ್ದ ಇಸ್ರೇಲ್ ಪ್ರಜೆಯೊಬ್ಬರನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇಸ್ರೇಲ್ ಮೂಲದ ಮಾರ್ಚಾವಿ ಅಸ್ಸಾಪ್ ಎಂಬಾತನನ್ನು ಹೊನ್ನಾವರ ತಾಲೂಕಿನ ಹಳದಿಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಇವರ ಭಾರತ ಪ್ರವಾಸದ ವೀಸಾ ಅವಧಿ 2025ರ ಏಪ್ರಿಲ್‌ನಲ್ಲೇ ಮುಕ್ತಾಯಗೊಂಡಿದ್ದರೂ ಅವರು … Continued