ಧಾರವಾಡ ಜಿಲ್ಲೆಯಲ್ಲಿ  160 ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ

ಧಾರವಾಡ:ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಈಗಾಗಲೇ  ಒಟ್ಟು  160 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಯಾವುದೇ ಹೊಸ ಪ್ರಕರಣ ದಾಖಲಾಗಿರುವದಿಲ್ಲ  ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಮಟಾ: ಅಗತ್ಯವಿದ್ದವರಿಗೆ ಆರ್‌ಎಸ್‌ಎಸ್‌ನಿಂದ ಉಚಿತವಾಗಿ ಆಮ್ಲಜನಕ ಪೂರೈಕೆ

ಕುಮಟಾ: ಕೊರೊನಾ ಸೋಂಕಿಗೆ ಚಿಕಿತ್ದೆ ಪಡೆದು ಆಸ್ಪತ್ರೆಯಿಂದ ಮನೆಗೆ ತೆರಳಿದವರಿಗೆ ಆಮ್ಲಜನಕದ ಅವಶ್ಯಕತೆ ಇದ್ದರೆ ಅಂಥವರಿಗೆ ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಸಂಘಟನೆ ಉಚಿತವಾಗಿ ಪೂರೈಸಲಿದೆ ಎಂದು ಡಾ. ಹರ್ಷ ಹೆಗಡೆ ತಿಳಿಸಿದ್ದಾರೆ. ಕುಮಟಾದಲ್ಲಿ ಸೋಂಕು ಹೆಚ್ಚಿದ್ದು ಜನರಿಗೆ ಅನುಕೂಲವಾಗಲೆಂದು ಸಂಘಟನೆ ಮೂಲಕ ಈ ಕಾರ್ಯ ಆರಂಭಿಸಲಾಗಿದೆ. ಕೆಲವರು ಬಾಡಿಗೆಗೆ ಆಮ್ಲಜನಕ … Continued

ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್: ಸಿಎಂಗೆ ಹೊರಟ್ಟಿ ಅಭಿನಂದನೆ

ಹುಬ್ಬಳ್ಳಿ; ಜಾಗತಿಕ ಮಹಾಮಾರಿ ಕೋವಿಡ್‍ದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಪ್ಯಾಕೇಜ್ ಒದಗಿಸುವಂತೆ ತಮ್ಮ ಮನವಿಗೆ ಸ್ಪಂದಿಸಿದ್ದಕ್ಕೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಶ್ರೀ … Continued

ಕೊರೊನಾ ಪಾಸಿಟಿವ್ ದರ ಶೇ.5ಕ್ಕೆ ಇಳಿಮುಖವಾದರೆ ಮಾತ್ರ ಲಾಕ್‌ಡೌನ್‌ ತೆರವು:ಸಿಎಂ ಬಿಎಸ್‌ವೈ

ಹುಬ್ಬಳ್ಳಿ: ರಾಜ್ಯದಲ್ಲಿ  ಕೊರೊನಾ ಪಾಸಿಟಿವ್  ದರ ಶೇ.5ರ ಒಳಗೆ ಬಂದರೆ ಅನ್ಲಾಕ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಣ ಪ್ರಮಾಣ ಹಾಗೂ ಪಾಸಿಟಿವ್ ದರ ಇಳಿಮುಖಗೊಂಡಲ್ಲಿ ಲಾಕ್‌ಡೌನ್‌ ನಿರ್ಬಂಧ ತೆಗೆಯುವ ಕುರಿತು ಚಿಂತನೆ ಮಾಡಲಾಗುವುದು ಎಂದರು. ನಾಳೆಯೊಳಗೆ ಗೊಂದಲ ನಿವಾರಣೆ… ಮೈಸೂರು ಜಿಲ್ಲಾಕಾರಿ ರೋಹಿಣಿ ಸಿಂಧೂರಿ ಹಾಗೂ … Continued

ಮಹತ್ವದ ಸುದ್ದಿ.. ಕರ್ನಾಟಕದಲ್ಲಿ ಜುಲೈ 1ರಿಂದ ಪ್ರಾಥಮಿಕ-ಪ್ರೌಢ ಶಾಲೆಗಳು ಆರಂಭ: ಪರಿಷ್ಕೃತ ಕಾರ್ಯಸೂಚಿ ಬಿಡುಗಡೆ

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭದ ದಿನಾಂಕವನ್ನು ಪರಿಷ್ಕರಿಸಿ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಹಿಂದಿನ ಆದೇಶವನ್ನು ಪರಿಷ್ಕರಿಸಿದ ಶಿಕ್ಷಣ ಇಲಾಖೆ ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭಕ್ಕೆ ಹೊಸ ಸುತ್ತೋಲೆ ಹೊರಡಿಸಿದೆ.ನಾಲ್ಕು ದಿನಗಳ ಹಿಂದೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದ ಶಿಕ್ಷಣ ಇಲಾಖೆ ಜೂನ್​ 15ರಂದು ಶಾಲೆ ಪ್ರಾರಂಭಕ್ಕೆ ಅಧಿಸೂಚನೆ ಹೊರಡಿಸಿತ್ತು. … Continued

ರಾಮನಗರ: ಮ್ಯಾನ್ ಹೋಲ್‌ಗೆ ಇಳಿದ ಮೂವರು ಕಾರ್ಮಿಕರ ಸಾವು

ರಾಮನಗರ: ರಾಮನಗರ ಪಟ್ಟಣ ವ್ಯಾಪ್ತಿಯ ನೇತಾಜಿ ಪಬ್ಲಿಕ್ ಸ್ಕೂಲ್ ಪಕ್ಕದಲ್ಲಿ ಮ್ಯಾನ್‌ಹೋಲ್ ಕ್ಲೀನ್ ಮಾಡಲು ಇಳಿದಿದ್ದ 3 ಕಾರ್ಮಿಕರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಶವ ಹೊರಕ್ಕೆ ತೆಗೆದಿದ್ದಾರೆ. ನಗರ ವ್ಯಾಪ್ತಿಯಲ್ಲಿ ಬರುವ ನೇತಾಜಿ ಪಬ್ಲಿಕ್ ಸ್ಕೂಲ್ ಪಕ್ಕದಲ್ಲಿ ಘಟನೆ ನಡೆದಿದ್ದು, ಮ್ಯಾನ್‌ಹೋಲ್‌ಗೆ ಇಳಿದಾಗ 3 ಕಾರ್ಮಿಕರು ಮೃತಪಟ್ಟಿದ್ದಾರೆ. ಮ್ಯಾನ್‌ಹೋಲ್‌ಗೆ ಕಾರ್ಮಿಕರನ್ನು ಇಳಿಸಬಾರದು ಎಂದು ಇಂಥಾ … Continued

ರೋಹಿಣಿ ವರ್ಸಸ್‌ ಶಿಲ್ಪಾ ನಾಗ್‌:ಇದು ನನ್ನ ಕೈಮೀರಿದೆ ಎಂದ ಸಚಿವ ಸೋಮಶೇಖರ

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ – ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್‌ ಅವರ ಸಂಘರ್ಷ ನನ್ನ ಕೈ ಮೀರಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ಸಂಘರ್ಷ ನನ್ನ ವ್ಯಾಪ್ತಿಯಲ್ಲಿ ಉಳಿದಿಲ್ಲ. ಮುಖ್ಯಮಂತ್ರಿಗಳಿಗೆ ಎಲ್ಲವನ್ನೂ ತಿಳಿಸಿದ್ದೇನೆ. ಇನ್ನು ಎರಡು ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ … Continued

ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ಸಿಎಂ ಬಿಎಸ್‌ವೈ

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಶುಕ್ರವಾರ ಪ್ರಕಟಿಸಿದ್ದಾರೆ. ಆದರೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವುದಾಗಿ ಸುರೇಶ್​ ಕುಮಾರ್ ಹೇಳಿರುವುದು ತಾತ್ಕಾಲಿಕ ನಿರ್ಧಾರವಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಎಸ್​ಎಸ್​ಎಲ್​ಸಿ ಪರೀಕ್ಷೆ … Continued

ಕರ್ನಾಟಕದ ಕರಾವಳಿಗೆ ನಾಳೆ ಮುಂಗಾರು ಪ್ರವೇಶ

ಬೆಂಗಳೂರು: ಮುಂಗಾರು ಶನಿವಾರದ ವೇಳೆಗೆ ಕರ್ನಾಟಕ ಹಾಗೂ ತಮಿಳುನಾಡು ಕರಾವಳಿ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಮುಂಗಾರು ಕರ್ನಾಟಕದ ಕರಾವಳಿ ಕರಾವಳಿ ಮತ್ತು ದಕ್ಷಿಣ ಕರ್ನಾಟಕದ ಕೆಲವು ಭಾಗಗಳು, ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳು, ರಾಯಲಸೀಮವನ್ನು ಮತ್ತು ದಕ್ಷಿಣ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳನ್ನು ನಾಳೆ (ಶನಿವಾರ) … Continued