ಹಾಸನಾಂಬೆ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಕರೆಂಟ್‌ ಶಾಕ್‌

ಹಾಸನ: ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಕರೆಂಟ್ ಶಾಕ್ ಹೊಡೆದಿದ್ದು, ಹಲವರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಹಾಸನಾಂಬ ದೇಗುಲದಲ್ಲಿ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ವಿದ್ಯುತ್ ಶಾಕ್ ನಿಂದ ಗಾಯಗೊಂಡು ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನೂಕು ನುಗ್ಗಲು ಆಗದಂತೆ ನಿರ್ವಹಣೆ ಮಾಡಲು ಬಳಸಿದ ಬ್ಯಾರಿಕೇಡ್‌ಗಳ ನಡುವೆ ಹಲವು ಜನರು ನಿಂತಿದ್ದರು. ಆ … Continued

ಮಂಡ್ಯ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ; ವೀಡಿಯೊ ಮಾಡಿ ಬ್ಲಾಕ್ ಮೇಲ್ : ಮೂವರ ಬಂಧನ

ಮಂಡ್ಯ: ಅಪ್ರಾಪ್ತೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಮದ್ದೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅಪ್ರಾಪ್ತೆ ತಾಯಿ ನೀಡಿದ ದೂರಿ‌ನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ತಾಲೂಕಿನ ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ನ.4ರಂದು ಸಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. … Continued

ಪಿಎಸ್‌ಐ ನೇಮಕ ಮರುಪರೀಕ್ಷೆ: ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ಅಸ್ತು ; ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಎತ್ತಿ ಹಿಡಿದಿದೆ. ಅಲ್ಲದೇ, ನ್ಯಾಯಯುತ ಮತ್ತು ಪಾರದರ್ಶಕ ಮರು ಪರೀಕ್ಷೆ ನಡೆಸುವುದನ್ನು ಖಾತರಿಪಡಿಸಲು ರಾಜ್ಯ ಸರ್ಕಾರವು ಸ್ವತಂತ್ರ ಸಂಸ್ಥೆಗೆ ಪರೀಕ್ಷೆ ನಡೆಸುವ ಜವಾಬ್ದಾರಿ ವಹಿಸಬೇಕು ಎಂದು ಆದೇಶಿಸಿದೆ. ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ … Continued

ಜಿ.ಪಂ–ತಾ.ಪಂ ಚುನಾವಣೆ: ಕ್ಷೇತ್ರ ಮರುವಿಂಗಡಣೆಗೆ ಸರ್ಕಾರಕ್ಕೆ 1 ತಿಂಗಳ ಅಂತಿಮ ಗಡುವು ನೀಡಿದ ಹೈಕೋರ್ಟ್‌

ಬೆಂಗಳೂರು : ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆಗಾಗಿ ಕ್ಷೇತ್ರಗಳ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಲು ಕೊನೆಯ ಬಾರಿಗೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಒಂದು ತಿಂಗಳ ಕಾಲಾವಕಾಶ ನೀಡಿದೆ. ಜಿಪಂ ಹಾಗೂ ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು … Continued

ಚಿತ್ತಾಪುರ : ಭೀಕರ ಅಪಘಾತ, 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ‌ ಸಿಮೆಂಟ್ ತುಂಬಿದ ಟ್ಯಾಂಕರ್ ಹಾಗೂ ಆಟೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ನಜ್ಮಾ ಬೇಗಂ (28), ಬಿಬಿ ಫಾತೀಮಾ (12) , ಅಬುಬಕರ್ (4) ಬೀಬಿ ಮರಿಯಮ್ಮ … Continued

ಮಂಗಳೂರು : ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ ಶವವಾಗಿ ಪತ್ತೆ

ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಬೋಂದೆಲ್ ನಲ್ಲಿರುವ ಅಪಾರ್ಟ್ ಮೆಂಟಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ನಗರದ ಪಂಪ್‌ವೆಲ್‌ನಲ್ಲಿರುವ ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್(ಸಿಸಿಒ) ಆಗಿರುವ ವಾದಿರಾಜ ಕೆ.ಎ.(51) ಎಂಬವರು ಮೃತಪಟ್ಟ ವ್ಯಕ್ತಿ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು … Continued

ಟಿಕೆಟ್‌ ವಂಚನೆ ಹಗರಣ: ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ 800 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು : ಉಡುಪಿಯ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬಿಜೆಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಆರೋಪಿಗಳಾದ ಚೈತ್ರಾ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಕೇಂದ್ರೀಯ ಅಪರಾಧ ದಳ (ಸಿಸಿಬಿ) 800 ಪುಟಗಳ ಆರೋಪ ಪಟ್ಟಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಸಲ್ಲಿಸಿದೆ. ಬೆಂಗಳೂರಿನ 3ನೇ ಮೂರನೇ ಹೆಚ್ಚುವರಿ … Continued

ರಾಜ್ಯದ 13 ಜಿಲ್ಲೆಗಳಲ್ಲಿ 24 ಗಂಟೆಯೊಳಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ 13 ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, … Continued

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಅಭಿನವ ಹಾಲಶ್ರೀಗೆ ಜಾಮೀನು

ಬೆಂಗಳೂರು : ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ಜಾಮೀನು ನೀಡಿದೆ. ಜಾಮೀನು ಕೋರಿ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ವಿಶ್ವಜಿತ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. … Continued

ಅಧಿಕಾರ ದುರ್ಬಳಕೆ ಆರೋಪ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಕ್ಷರಿ ಎತ್ತಂಗಡಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಶಿವಮೊಗ್ಗದಲ್ಲಿದ್ದ ಅವರನ್ನು ಕೋಲಾರಕ್ಕೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಕ್ಷರಿ ಅವರನ್ನು ಕೋಲಾರ ಜಿಲ್ಲೆಯಲ್ಲಿ ಖಾಲಿ ಇದ್ದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ … Continued