ಕರ್ನಾಟಕ ರಾಜ್ಯಾದ್ಯಂತ ರಾತ್ರಿ  ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ‘ರಾತ್ರಿ ವೀಕೆಂಡ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಬುಧವಾರದಿಂದ ರಾಜ್ಯಾದ್ಯಂತ ರಾತ್ರಿ ಕರ್ಪ್ಯೂ ಜಾರಿಯಾಗಿದೆ. ಬುಧವಾರದಿಂದ ಮೇ 4ರ ವರೆಗೆ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆ ವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿರಲಿದೆ. ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಹಾಗೂ ಶುಕ್ರವಾರ … Continued

ಕರ್ನಾಟಕಕ್ಕೆ 1,500 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆಗೆ ಕೇಂದ್ರಕ್ಕೆ ಮನವಿ: ಡಾ.ಸುಧಾಕರ

ಬೆಂಗಳೂರು :ರಾಜ್ಯಕ್ಕೆ ಪ್ರತಿ ದಿನ 1,500 ಮೆಟ್ರಿಕ್ ಟನ್ ಆಮ್ಲಜನಕ ನಿಗದಿ ಪಡಿಸಿ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ರಾಜ್ಯದ ಕೋವಿಡ್ ಸ್ಥಿತಿಗತಿ ಹಾಗೂ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ … Continued

ಕೋವಿಡ್‌ ಹೊರತು ಪಡಿಸಿದ ಗಂಭೀರ-ತುರ್ತು ಚಿಕಿತ್ಸೆ ಅಗತ್ಯದ ರೋಗಿಗಳನ್ನು ಮಾತ್ರ ದಾಖಲು ಮಾಡಿಕೊಳ್ಳಿ:ಎಲ್ಲ ಸರ್ಕಾರಿ-ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಕೋವಿಡ್‌ ಎರಡನೇ ಅಲೆ ಉಲ್ಬಣದಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಹೊರತು ಪಡಿಸಿದ ಕಾಯಿಲೆಗಳ ಗಂಭೀರ ಹಾಗೂ ತುರ್ತು ಚಿಕಿತ್ಸೆ ಅವಶ್ಯವಿರುವ ರೋಗಿಗಳನ್ನು ಮಾತ್ರ ದಾಖಲಿಸಿಕೊಳ್ಳಬೇಕು ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ … Continued

ಶ್ರೀಶೈಲ ಜಗದ್ಗುರುಗಳಿಗೆ ಕೊರೊನಾ ಸೋಂಕು

ಬೆಳಗಾವಿ; ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಪ್ರಕಟಣೆ ನೀಡಿರುವ ಶ್ರೀಮಠದ ವ್ಯವಸ್ಥಾಪಕರು, ಚಿಕ್ಕೋಡಿ ತಾಲೂಕಿನ ಶ್ರೀಕ್ಷೇತ್ರ ಯಡೂರಿನಲ್ಲಿ ಹೋಂ ಐಸೋಲೇಷನ್ ಮೂಲಕ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳ ಆರೋಗ್ಯ ಸ್ಥಿರವಾಗಿದೆ.  ಭಕ್ತರು ಯಾವುದೇ ಆತಂಕಕ್ಕೆ ಒಗಾಗಬಾರದು ಎಂದು ತಿಳಿಸಿದ್ದಾರೆ. ಶ್ರೀಶೈಲ ಕ್ಷೇತ್ರದಲ್ಲಿ ನಡೆದ ಯುಗಾದಿ ಜಾತ್ರಾಮಹೋತ್ಸವದಲ್ಲಿ  … Continued

ಹೈಕೋರ್ಟ್‌ ಸೂಚನೆ: ಸಾರಿಗೆ ನೌಕರರ ಮುಷ್ಕರ ವಾಪಸ್‌

ಬೆಂಗಳೂರು: ಸತತ 15 ದಿನಗಳ ನಂತರ 1.2 ಲಕ್ಷ ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಬಿಡುತ್ತಿದ್ದು, ನಾಳೆಯಿಂದ ಸಾರಿಗೆ ಸಿಬ್ಬಂದಿ … Continued

ಝರಾಕ್ಸ್ ಅಂಗಡಿಯಲ್ಲಿ ಸಿಗುತ್ತಿದ್ದ ಕೊರೊನಾ ನೆಗೆಟಿವ್ ವರದಿ: ವ್ಯಕ್ತಿ ಬಂಧನ

ಹೊಸಪೇಟೆ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಬೇರೆ ರಾಜ್ಯಗಳಿಂದ ಬರುವವರಿಗೆ ಅಥವಾ ಬೇರೆ ರಾಜ್ಯಗಳಿಗೆ ಹೋಗುವವರಿಗೆ ಕೊರೊನಾ ನೆಗೆಟಿವ್ ವರದಿಯನ್ನು ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳು ಕಡ್ಡಾಯ ಮಾಡಿವೆ. ಇಂತಹ ಪರಿಸ್ಥಿತಿಯಲ್ಲಿ ಹೊಸಪೇಟೆಯ ಜೆರಾಕ್ಸ್ ಅಂಗಡಿಯಲ್ಲಿ ನಕಲಿ ರಿಪೋರ್ಟ್ ತಯಾರಿ ಮಾಡಿಕೊಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಶಿವರಾಜ್ ಎನ್ನುವ ಆರೋಪಿಯನ್ನು ಹೊಸಪೇಟೆ ಠಾಣೆಯ ಪೊಲೀಸರು … Continued

ಕರ್ಪ್ಯೂ: ಕೆ-ಸೆಟ್ ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು : ಏಪ್ರಿಲ್ 25 ರ ಭಾನುವಾರ ನಡೆಯಬೇಕಿದ್ದ ಮೈಸೂರು ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷೆಯನ್ನು ರಾಜ್ಯ ಸರ್ಕಾರ ಕರ್ಪ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಮತ್ತೆ ಮುಂದೂಡಲಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಾರಾಂತ್ಯದಲ್ಲಿ ಕರ್ಪ್ಯೂ ಘೋಷಿಸಿದ್ದು, ಹೀಗಾಗಿ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಲು … Continued

ಟಂಟಂಗೆ ಲಾರಿ ಡಿಕ್ಕಿ:ಐವರು ಮಹಿಳಾ ಕೂಲಿ ಕಾರ್ಮಿಕರ ಸಾವು

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮದ ಬಳಿ ಟಂಟಂ ಮತ್ತು ಟ್ಯಾಂಕರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಅಯ್ಯಮ್ಮ(60), ಶರಣಮ್ಮ(40), ಕಾಸೀಂಬೀ (40), ಭೀಮಾಬಾಯಿ(40), ದೇವೀಂದ್ರಮ್ಮ(70) ಎಂದು ಗುರುತಿಸಲಾಗಿದೆ. ಮೃತರೆಲ್ಲರು ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರು ಎಂದು ತಿಳಿದುಬಂದಿದ್ದು,ಎಲ್ಲರೂ ಮಹಿಳೆಯರೇ ಆಗಿದ್ದಾರೆ. ಟಂಟಂ ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಟಂಟಂನಲ್ಲಿದ್ದ … Continued

ಬೆಂಗಳೂರಿನಲ್ಲಿ ಹೆಚ್ಚಿದ ಕೊರೊನಾ ಸೋಂಕಿತರ ಮರಣ; ಅಂತ್ಯಸಂಸ್ಕಾರಕ್ಕೆಮತ್ತೆ 13 ಚಿತಾಗಾರಗಳಲ್ಲಿ ಅನುಮತಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಗಂಭೀರ ಸ್ವರೂಪಕ್ಕೆ ತಿರುಗಿದ್ದು ಸೋಂಕಿತರ ಸಂಖ್ಯೆ ಹಾಗೂ ಮೃತರ ಸಂಖ್ಯೆ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆಗಳೇ ಸಿಗದ ಸ್ಥಿತಿ, ಮೃತ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಚಿತಾಗಾರಗಳೂ ಸಿಗದ ಸ್ಥಿತಿ. ಕೆಲ ಸ್ಮಶಾನಗಳಲ್ಲಿ ಕಾದು ಸುಸ್ತಾದ ಮೃತರ ಸಂಬಂಧಿಕರು ಬೇರೆಡೆಗೆ ಶವ ಸಾಗಿಸಿದ ಘಟನೆಗಳು ಸಹ ವರದಿಯಾಗಿವೆ. ಹೀಗಾಗಿ ಎಚ್ಚೆತ್ತ ಸರ್ಕಾರಈಗ … Continued

ಮಾಜಿ ಶಾಸಕ ವಸಂತ ಅಸ್ನೋಟಿಕರ್ ಕೊಲೆ ಪ್ರಕರಣ: ಗುಂಡಿಟ್ಟ ಮೊಹಿತೆಗೆ ಜೀವಾವಧಿ ಶಿಕ್ಷೆ

ಕಾರವಾರ: ಕಾರವಾರ ಶಾಸಕರಾಗಿದ್ದ ವಸಂತ ಆಸ್ನೋಟಿಕರ್ ಹತ್ಯೆ ಮಾಡಿದ್ದ ಸಂಜಯ್ ಮೋಹಿತೆಗೆ ಜೀವಾವಧಿ ಶಿಕ್ಷೆ ಹಾಗೂ 68,000 ರೂ. ದಂಡ ವಿಧಿಸಿ ಶಿರಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಫೆಬ್ರುವರಿ 19, 2000ದಂದು ವಸಂತ ಅಸ್ನೊಟಿಕರ್‌ ಕೊಲೆ ನಡೆದಿತ್ತು. ಕಾರವಾರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ತಮ್ಮ ಮಗಳ ಮದುವೆ ಆರತಕ್ಷತೆಯ … Continued