ಆಪರೇಷನ್‌ ಹಸ್ತ ; ಬೇರೆ ಬೇರೆ ಪಕ್ಷಗಳ 42ಕ್ಕೂ ಹೆಚ್ಚು ನಾಯಕರ ಅರ್ಜಿ ನನ್ನ ಮುಂದಿದೆ ಎಂದ ಡಿ.ಕೆ.ಶಿವಕುಮಾರ

ಬೆಂಗಳೂರು : ಕಾಂಗ್ರೆಸ್ ಸೇರಲು ಕಾಯುತ್ತಿರುವ ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಅವರ ಹೆಸರುಗಳನ್ನು ಈಗ ಬಹಿರಂಗ ಪಡಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೊಸ ಬಾಂಬ್ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬೇರೆ ಪಕ್ಷದ ಮುಖಂಡರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗದೀಶ ಶೆಟ್ಟರ ಮತ್ತು ಲಕ್ಷ್ಮಣ ಸವದಿ … Continued

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಶಾಸಕ ರಾಮಪ್ಪ ಲಮಾಣಿ

ಬೆಂಗಳೂರು: ಮುಂಬರುವ ಲೋಕಸಬೆ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್​ ಆಪರೇಷನ್​ ಹಸ್ತದ ಮೂಲಕ ಹಲವು ಬಿಜೆಪಿ ಹಾಗೂ ಜೆಡಿಎಸ್​ ನಾಯಕರನ್ನು ಪಕ್ಷಕ್ಕೆ ಕರೆತರುತ್ತಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಆಪರೇಷನ್ ಹಸ್ತದ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್​ ಶಾಕ್​ ನೀಡಿದೆ. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. … Continued

ಬೀಪ್​​​​​​ ಶಬ್ದದೊಂದಿಗೆ ನಿಮ್ಮ ಮೊಬೈಲಿಗೆ ಅಲರ್ಟ್​ ಮೆಸೇಜ್ ಬಂದಿದೆಯೇ..? ಗಾಬರಿ ಬೇಡ, ಯಾಕೆಂದರೆ….

ಬೆಂಗಳೂರು: ಇಂದು, ಗುರುವಾರ ಬೆಳಗ್ಗೆ 11: 45 ರ ಹೊತ್ತಿಗೆ ಮತ್ತು ಮಧ್ಯಾಹ್ನ 11:58ರ ಹೊತ್ತಿಗೆ ಎರಡೆರಡು ಬಾರಿ ರಾಜ್ಯದ ಬಹುತೇಕರ ಮೊಬೈಲ್​ಗೆ ಬೀಪ್ ಸೌಂಡ್​ ಜೊತೆಗೆ ಎಚ್ಚರಿಕೆ ಸಂದೇಶ ಬಂದಿದೆ. ಕೆಲವರಿಗೆ ಸಮಯದಲ್ಲಿ ಸ್ವಲ್ಪ ಬದಲಾವಣೆಯಿರಬಹುದು.  ಇದರ ಬಗ್ಗೆ ಗೊತ್ತಿಲ್ಲದವರು ಒಮ್ಮೆ ಗಾಬರಿಯಾಗಿರಬಹುದು. ಆದರೆ, ಗಾಬರಿ ಪಡುವ ಅವಶ್ಯಕತೆ ಇಲ್ಲ. ಯಾಕೆಂದರೆ ಇದು ಭಾರತ … Continued

ಕರ್ನಾಟಕ ಶಿಕ್ಷಣ ನೀತಿ ರಚನೆಗೆ ಸಮಿತಿ ರಚನೆ ಮಾಡಿ ಸರ್ಕಾರದ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ರಾಜ್ಯ ಸರ್ಕಾರವು ರಾಜ್ಯ ಶಿಕ್ಷಣ ನೀತಿ ರಚಿಸಿ ಬುಧವಾರ ಆದೇಶ ಹೊರಡಿಸಿದೆ. ಪ್ರೊ. ಸುಖದೇವ ಥೋರಟ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಯುಜಿಸಿ ಮಾಜಿ ಅಧ್ಯಕ್ಷ ಪ್ರೊ. … Continued

ಕಾಮಗಾರಿ ಬಿಲ್ ಬಾಕಿ ಬೆಳಗಾವಿ ಪಿಡಬ್ಲ್ಯುಡಿ ಕಚೇರಿ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ

ಬೆಳಗಾವಿ: ಲೋಕೋಪಯೋಗಿ ಇಲಾಖೆಯಲ್ಲಿ ಮಾಡಿದ ಕಾಮಗಾರಿಗಳ ಬಿಲ್‌ ಬಾಕಿ ಉಳಿಸಿಕೊಂಡ ಕಾರಣಕ್ಕೆ, ಗುತ್ತಿಗೆದಾರ ಒಬ್ಬರು ಇಲ್ಲಿನ ಪಿಡಬ್ಲ್ಯುಡಿ ಕಚೇರಿ ಆವರಣದಲ್ಲಿ ಬುಧವಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳಗಾವಿ ಕೋಟೆ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಗೆ ಬಂದ ನಾಗಪ್ಪ ಭಾಂಗಿ ಎಂಬವರು ಕಾರ್ಯಪಾಲಕ ಎಂಜಿನಿಯರ್‌ ಎದುರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸುತ್ತ ಇದ್ದ ಕೆಲವರು … Continued

ಕರ್ನಾಟಕಕ್ಕೆ ಮತ್ತೆ ಶಾಕ್: ಮತ್ತೆ 15 ದಿನ ತಮಿಳುನಾಡಿಗೆ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

ನವದೆಹಲಿ : ರಾಜ್ಯದಲ್ಲಿ ಮುಂಗಾರು ಮಳೆಯಿಲ್ಲದೆ ನೀರಿಗೆ ಬರ ಎದುರಾಗಿದೆ. ಇಂತಹ ಸನ್ನಿವೇಶದಲ್ಲಿಯೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಮತ್ತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬುಧವಾರ ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಅಕ್ಟೋಬರ್ 16ರಿಂದ 31ರವರೆಗೆ ಮತ್ತೆ ಪ್ರತಿದಿನ 3 ಸಾವಿರ ಕ್ಯೂಸೆಕ್ … Continued

ಸಿಎಂ ಸಿದ್ದರಾಮಯ್ಯ ಮನೆ ಮೇಲೆ ಕಲ್ಲು ತೂರಾಟ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರ (ಅಕ್ಟೋಬರ್‌ ೧೦) ಬೆಳಿಗ್ಗೆ 8 ಗಂಟೆ ಸುಮಾರಿಗೆ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಮೇಲೆ ಸತ್ಯಮೂರ್ತಿ ಎಂಬಾತ ಕಲ್ಲು ಎಸೆದಿದ್ದ. ಈ ಸಂಬಂಧ ಸರಸ್ವತಿಪುರ … Continued

ಅತ್ತಿಬೆಲೆ ಪ್ರಕರಣ: 3 ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

ಬೆಂಗಳೂರು: ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್‌ಪೆಕ್ಟರ್ ಮತ್ತು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಅಮಾನತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಪ್ರಕರಣದ ಸಂಬಂಧ ಇಂದು, ಮಂಗಳವಾರ ಸಭೆ ನಡೆಸಿದ ಅವರು, ಈ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಪಟಾಕಿ ವಿಚಾರದಲ್ಲಿ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ … Continued

ಗೋಕರ್ಣ : ಸಮುದ್ರದಲ್ಲಿ ಮುಳುಗುತ್ತಿದ್ದ 8 ಜನರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಜನ ಸೇರಿದಂತೆ ಒಟ್ಟು 8 ಜನ ಪ್ರವಾಸಿಗರನ್ನು ಜೀವ ರಕ್ಷಕ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ ವಿದ್ಯಮಾನ ಉತ್ತರಕನ್ನಡ ಜಿಲ್ಲೆಯ ಗೋಕರ್ಣ(Gokarna)ದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಪ್ರವಾಸಕ್ಕೆ ಬಂದ ವೇಳೆ ಒಂದೇ ಕುಟುಂಬದ ಏಳು ಪ್ರವಾಸಿಗರು ನೀರಿನಲ್ಲಿ ಇಳಿದಿದ್ದು, ಈ ವೇಳೆ ಕೊಚ್ಚಿ ಹೋಗುವ ಅಪಾಯದಲ್ಲಿದ್ದರು. … Continued

ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ನಿಷೇಧ ; ಸಿಎಂ ಸಿದ್ದರಾಮಯ್ಯ

ಯ ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ. ಆದರೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮ, ಇತರ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು … Continued